12ರಂದು ರಾಹುಲ್ ಕಾಸರಗೋಡಿಗೆ

ಕಾಸರಗೋಡು: ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿ ಮಾ.12ರಂದು ಕಾಸರಗೋಡಿಗೆ ಆಗಮಿಸಲಿದ್ದಾರೆ.

ಪೆರಿಯಾ ಕಲ್ಯೋಟ್‌ನಲ್ಲಿ ಹತ್ಯೆಗೀಡಾದ ಯುವ ಕಾಂಗ್ರೆಸ್ ಕಾರ್ಯಕರ್ತರಾದ ಶರತ್‌ಲಾಲ್ (24) ಮತ್ತು ಕೃಪೇಶ್(19) ಮನೆಗಳಿಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಲಿದ್ದಾರೆ. ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದು, ಬಳಿಕ 11ಗಂಟೆಗೆ ಕಲ್ಯೋಟ್ ತಲುಪಲಿದ್ದಾರೆ. ಪುಲ್ವಾಮ ಉಗ್ರರ ದಾಳಿಯಲ್ಲಿ ವೀರ ಮೃತ್ಯು ಹೊಂದಿದ ವಯನಾಡಿನ ಸಿ.ಆರ್.ಪಿ.ಎಫ್.ಯೋಧ ವಿ.ವಿ.ವಸಂತ ಕುಮಾರ್ ಅವರ ಮನೆಗೂ ಭೇಟಿ ನೀಡಲಿದ್ದಾರೆ. ಬಳಿಕ ಸಂಜೆ 5 ಗಂಟೆಗೆ ಕಲ್ಲಿಕೋಟೆಯಲ್ಲಿ ನಡೆಯುವ ಕಾಂಗ್ರೆಸ್ ಬಹಿರಂಗ ಅಧಿವೇಶನದಲ್ಲಿ ಮಾತನಾಡಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.