More

    ಕ್ಷಮೆ ಕೇಳಲು ನಾನು ಸಾವರ್ಕರ್ ಅಲ್ಲ… ಇನ್ನು ಮುಂದೆಯೂ ಪ್ರಜಾಪ್ರಭುತ್ವಕ್ಕಾಗಿ ಹೋರಾಡುತ್ತೇನೆ; ರಾಹುಲ್ ಗಾಂಧಿ

    ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಮತ್ತು ಅದಾನಿ ಅವರ ನಡುವಿನ ಸಂಬಂಧವೇನು ಎಂಬುದರ ಬಗ್ಗೆ ನಾನು ಸಂಸತ್ತಿನಲ್ಲಿ ಪ್ರಶ್ನೆಗಳನ್ನು ಕೇಳಿದ್ದೇನೆ. ಮೋದಿ-ಅದಾನಿ ನಡುವಿನ ವ್ಯವಹಾರ ಬಹಳ ಹಿಂದಿನಿಂದ ಇದೆ. ಈ ಕುರಿತು ಫೋಟೋ ಕೂಡ ಬಿಡುಗಡೆ ಮಾಡಿದ್ದೇನೆ. ಈ ವಿಚಾರವಾಗಿ ಎರಡೂ ಬಾರಿ ಪತ್ರ ಬರೆದರೂ ಯಾವುದೇ ಪ್ರತ್ಯುತ್ತರ ಬಂದಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

    ನಾನು ಕ್ಷಮೆ ಕೇಳಬೇಕೆಂದು ಬಿಜೆಪಿ ಆಗ್ರಹಿಸಿದೆ. ಆದರೆ ಕ್ಷಮೆ ಕೇಳಲು ನನ್ನ ಹೆಸರು ಸಾವರ್ಕರ್ ಅಲ್ಲ. ನಾನು ಗಾಂಧಿ. ಯಾವುದೇ ಕಾರಣಕ್ಕೂ ಕ್ಷಮೆ ಕೇಳುವುದಿಲ್ಲ ಎಂದು ರಾಹುಲ್ ಗಾಂಧಿ ಉಚ್ಛರಿಸಿದ್ದಾರೆ. ಇದನ್ನೂ ಓದಿ: ಮೆಕ್ಸಿಕೋ ಭಾರತೀಯ ರಾಯಭಾರ ಕಚೇರಿಗೆ ಬೆಂಗಳೂರು ಪೊಲೀಸ್ ಕಾನ್ಸ್‌ಟೇಬಲ್ ಆಯ್ಕೆ

    ಲೋಕಸಭೆಯಿಂದ ಅನರ್ಹಗೊಂಡ ನಂತರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು ಮಧ್ಯಾಹ್ನ ದೆಹಲಿಯ ಎಐಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡುತ್ತಾ, ದೇಶದ ಪ್ರಜಾಪ್ರಭುತ್ವ ವ್ಯವಸ್ಥೆ ಮೇಲೆ ಆಕ್ರಮಣ ನಡೆದಿದೆ. ಇದಕ್ಕೆ ಉದಾಹರಣೆಗಳನ್ನು ನಾವು ಪ್ರತಿದಿನ ನೋಡುತ್ತಿದ್ದೇವೆ ಎಂದು ಹೇಳಿದ್ದಾರೆ.

    ಸಂಸತ್ತಿನಲ್ಲಿ ನಾನು ಅದಾನಿ ಬಗ್ಗೆ ಒಂದೇ ಒಂದು ಪ್ರಶ್ನೆ ಕೇಳಿದ್ದೆ. ಇನ್ನು ಮುಂದೆಯೂ ಪ್ರಶ್ನೆ ಕೇಳುವುದನ್ನು ಮುಂದುವರಿಸುತ್ತಾ ಭಾರತದಲ್ಲಿ ಪ್ರಜಾಪ್ರಭುತ್ವಕ್ಕಾಗಿ ಹೋರಾಡುತ್ತೇನೆ. ಅದಾನಿ ಶೆಲ್ ಕಂಪನಿಗಳಿಗೆ ನೀಡಿದ 20,000 ಕೋಟಿ ರೂಪಾಯಿ ಯಾರದ್ದು ಎಂಬ ಸರಳ ಪ್ರಶ್ನೆಯಿಂದ ಪ್ರಧಾನಿಯನ್ನು ರಕ್ಷಿಸಲು ನಡೆಸಲಾದ ಸಂಪೂರ್ಣ ನಾಟಕ ಇದು. ಈ ಬೆದರಿಕೆ, ಅನರ್ಹತೆಗಳು ಅಥವಾ ಜೈಲು ಶಿಕ್ಷೆಗಳಿಗೆ ನಾನು ಹೆದರುವುದಿಲ್ಲ ಎಂದು ರಾಹುಲ್ ಗಾಂಧಿ ಹೇಳಿದರು.

    ನನಗೆ ಸತ್ಯವನ್ನು ಹೊರತುಪಡಿಸಿ ಯಾವುದರಲ್ಲೂ ಆಸಕ್ತಿ ಇಲ್ಲ. ನಾನು ಸತ್ಯವನ್ನು ಮಾತ್ರ ಮಾತನಾಡುತ್ತೇನೆ. ಈ ದೇಶ ನನಗೆ ಎಲ್ಲವನ್ನೂ ನೀಡಿದೆ. ಅವರು ನನ್ನನ್ನು ಶಾಶ್ವತವಾಗಿ ಅನರ್ಹಗೊಳಿಸಿದರೂ, ನಾನು ನನ್ನ ಕೆಲಸ ಮಾಡುತ್ತೇನೆ. ನಾನು ಸಂಸತ್ತಿನ ಒಳಗೆ ಇದ್ದೇನೋ ಇಲ್ಲವೋ ಎಂಬುದು ಮುಖ್ಯವಲ್ಲ. ದೇಶಕ್ಕಾಗಿ ಹೋರಾಡುತ್ತಲೇ ಇರುತ್ತೇನೆ ಎಂದರು. ಇದನ್ನೂ ಓದಿ: ಚಿಕ್ಕಬಳ್ಳಾಪುರದಲ್ಲಿ ಉಚಿತ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಲೋಕಾರ್ಪಣೆಗೊಳಿಸಿದ ಪ್ರಧಾನಿ ಮೋದಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts