More

    ಟೀಂ ಇಂಡಿಯಾವನ್ನು ಸಂತೈಸಿದ ಪ್ರಧಾನಿ ಮೋದಿ ಅವರನ್ನು ಕೆಟ್ಟ ಶಕುನ ಎಂದ ರಾಹುಲ್​ ಗಾಂಧಿ; ವ್ಯಾಪಕ ಆಕ್ರೋಶ

    ಜೈಪುರ: ಇತ್ತೀಚಿಗೆ ಮುಕ್ತಾಯಗೊಂಡ ಏಕದಿನ ವಿಶ್ವಕಪ್​ ಫಿನಾಲೆಯಲ್ಲಿ ಭಾರತ ತಂಡ ಸೋತಾಗ ಇಡೀ ದೇಶವೇ ದುಃಖದಲ್ಲಿ ಮುಳುಗಿತ್ತು. ಸ್ವತಃ ಪ್ರಧಾನಿ ನರೇಂದ್ರ ಮೋದಿ ಅವರೇ ಟೀಂ ಇಂಡಿಯಾ ಡ್ರೆಸ್ಸಿಂಗ್​ ರೂಮಿಗೆ ತೆರಳಿ ಆಟಗಾರರನ್ನು ಸಂತೈಸಿ ಧೈರ್ಯ ತುಂಬಿದ್ದರು. ಆದರೆ, ಈ ವಿಚಾರದಲ್ಲೂ ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ ಕೊಂಕು ಹುಡುಕುವ ಮೂಲಕ ಎಲ್ಲರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

    ಅಹಮದಾಬಾದಿನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಏಕದಿನ ವಿಶ್ವಕಪ್​ ಫಿನಾಲೆಯಲ್ಲಿ ಭಾರತದ ಪ್ರಧಾನಿ ಹಾಗೂ ಆಸ್ಟ್ರೇಲಿಯಾದ ಉಪಪ್ರಧಾನಿ ಸಾಕ್ಷಿಯಾಗಿದ್ದರು. ಭಾರತ ತಂಡವನ್ನು ಕಡೆಯವರೆಗೂ ಹುರಿದುಂಬಿಸಿದ ಪ್ರಧಾನಿ ಮೋದಿ ಅವರು, ಸೋತಾಗಲೂ ಕೂಡ ಟೀಂ ಇಂಡಿಯಾದ ಆಟಗಾರರನನ್ನು ಸಂತೈಸಿ ಹುರಿದುಂಬಿಸಿದ್ದರು.

    ಮೆಗಾ ಟೂರ್ನಮೆಂಟ್‌ನಲ್ಲಿ ನಾವು ಉತ್ತಮ ಪ್ರದರ್ಶನ ನೀಡದಿದ್ದರೂ, ನಾವು ನಿರಾಸೆಯೊಂದಿಗೆ ಕೊನೆಗೊಳ್ಳಬೇಕಾಯಿತು. ಸೋಲಿನ ನಂತರ ನಾವು ತುಂಬಾ ನಿರಾಶೆಗೊಂಡಿದ್ದೇವೆ. ಆದರೆ, ನಿನ್ನೆ ನಮ್ಮ ಡ್ರೆಸ್ಸಿಂಗ್ ರೂಮ್‌ಗೆ ಪ್ರಧಾನಿ ಮೋದಿ ಬಂದಾಗ ಅದು ತುಂಬಾ ವಿಶೇಷವಾಗಿತ್ತು. ಅದು ನಮಗೆ ಒಂದು ಬಹಳಷ್ಟು ಪ್ರೇರಣೆ ಎಂದು ಟೀಂ ಇಂಡಿಯಾ ಆಲ್ರೌಂಡರ್ ರವೀಂದ್ರ ಜಡೇಜಾ​ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಒಂದನ್ನು ಪೋಸ್ಟ್​ ಮಾಡಿದ್ದರು.

    ಮುಂಬರುವ ಕೆಲವೇ ದಿನಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿರುವ ರಾಜಸ್ಥಾನದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಆಡಳಿತರೂಢ ಕಾಂಗ್ರೆಸ್​ ಹಾಗು ಬಿಜೆಪಿ ನಡುವಿನ ವಾಕ್ಸಮರ ಮುಗಿಲು ಮುಟ್ಟಿದೆ. ಇದೀಗ ಪ್ರಧಾನಿ ಮೋದಿ ಅವರನ್ನು ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಕೆಟ್ಟಶಕುನ ಎಂದು ಕರೆದಿದ್ದಾರೆ.

    ಇದನ್ನೂ ಓದಿ: ರಾಜಸ್ಥಾನ ಚುನಾವಣೆ; ಪ್ರಣಾಳಿಕೆ ಬಿಡುಗಡೆ ಮಾಡಿ ಬಿಜೆಪಿ ವಿರುದ್ಧ ಕಿಡಿಕಾರಿದ ಕಾಂಗ್ರೆಸ್

    ರಾಜಸ್ಥಾನದ ಜಾಲೋರ್​ನಲ್ಲಿ ಸಾರ್ವಜನಿಕ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ರಾಹುಲ್​ ಗಾಂಧಿ ನಮ್ಮ ಹುಡಗರು ವಿಶ್ವಕಪ್​ನಲ್ಲಿ ಗೆಲ್ಲುವುದು ಬಹುತೇಕ ಖಚಿತವಾಗಿತ್ತು. ಆದರೆ, ಕೆಟ್ಟಶಕುನದಿಂದಾಗಿ ಸೋಲಬೇಕಾಯಿತು ಎಂದು ಹೇಳಿದ್ದಾರೆ.

    ನಮ್ಮ ಹುಡುಗರು (ಟೀಂ ಇಂಡಿಯಾ) ಆಡಿದ ಎಲ್ಲಾ ಪಂದ್ಯಗಳಲ್ಲಿ ಗೆದ್ದು ಫಿನಾಲೆಯಲ್ಲಿ ಕಪ್​ ನಮ್ಮದಾಗಿಸಿಕೊಳ್ಳುವ ಹುಮ್ಮಸ್ಸಿನಲ್ಲಿ ಕಣಕ್ಕಿಳಿದಿದ್ದರು. ಆದರೆ, ಕೆಟ್ಟ ಶಕುನ ಮೈದಾನ ಪ್ರವೇಶಿಸಿದ ಪರಿಣಾಮ ಅವರು ಸೋಲಬೇಕಾಯಿತು. ಇದಲ್ಲದೆ ಪ್ರಧಾನಿ ಮೊದಿ OBC ಸಮುದಾಯವನ್ನು ಪ್ರತಿನಿಧಿಸುವುದಾಗಿ ಹೇಳಿಕೊಂಡಿದ್ದಾರೆ. ಆದರೆ, ಅವರನ್ನು ಅಭಿವೃದ್ದಿ ಮಾಡುವಂತಹ ಯಾವುದೇ ಕೆಲಸಗಳನ್ನು ಈವರೆಗೆ ಮಾಡಿಲ್ಲ.

    ದೇಶದಲ್ಲಿ OBC ಜನಾಂಗ ಹೆಚ್ಚಿನ ಸಂಖ್ಯೆಯಲ್ಲಿ ಇದ್ದರೂ ಸಹ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಇದುವರೆಗೂ ಅವರ ಬಗ್ಗೆ ಹೆಚ್ಚಾಗಿ ತಲೆಕೆಡಿಸಿಕೊಂಡಿಲ್ಲ. ಚುನಾವಣೆಯ ಹೊಸ್ತಿಲಲ್ಲಿ ಮಾತ್ರ ಪ್ರಧಾನಿ ನರೇಂದ್ರ ಮೋದಿ ಅವರು ತಾನೊಬ್ಬ ಒಬಿಸಿ ಎಂದು ಹೇಳಿಕೊಂಡು ತಿರುಗುತ್ತಾರೆ. ಆ ನಂತರ ಅವರನ್ನು ಮರೆಯುತ್ತಾರೆ ಎಂದು ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts