More

    ಕೈ ಅಧ್ಯಕ್ಷರಾಗಲು ರಾಹುಲ್ ನಕಾರ

    ನವದೆಹಲಿ: ರಾಹುಲ್ ಗಾಂಧಿ ಮತ್ತೆ ಕಾಂಗ್ರೆಸ್ ಅಧ್ಯಕ್ಷರಾಗಬೇಕು ಎಂಬ ಒತ್ತಾಯ ಪಕ್ಷದ ಅನೇಕ ನಾಯಕರಿಂದ ಕೇಳಿಬರುತ್ತಿರುವ ಸಂದರ್ಭದಲ್ಲೇ, ಅವರು ಈ ಹುದ್ದೆಗೇರಲು ನಿರಾಕರಿಸಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ತಾವು ಮತ್ತೆ ಅಧ್ಯಕ್ಷರಾಗುವ ಪ್ರಶ್ನೆಯೇ ಇಲ್ಲ ಎಂದು ಆಪ್ತರ ಬಳಿ ರಾಹುಲ್ ಹೇಳಿಕೊಂಡಿದ್ದಾರೆ ಎನ್ನಲಾಗಿದೆ.

    ‘ಪಕ್ಷದ ನಾಯಕತ್ವದ ವಿಷಯದಲ್ಲಿ ಅವರ ನಿರ್ಧಾರ ಸ್ಪಷ್ಟವಾಗಿದೆ. ಈ ಕುರಿತಂತೆ ಪಕ್ಷದ ಕಾರ್ಯಕಾರಣಿ ಸಮಿತಿಗೆ ಬರೆದಿದ್ದ ಪತ್ರದಲ್ಲೂ ತಿಳಿಸಿದ್ದಾರೆ. ಅವರು ಪಕ್ಷದ ಅಧ್ಯಕ್ಷತೆಯನ್ನು ಮತ್ತೆ ಒಪ್ಪಿಕೊಳ್ಳುವ ಪ್ರಶ್ನೆಯೇ ಇಲ್ಲ’ ಎಂದು ರಾಹುಲ್ ಗಾಂಧಿಯ ಕೆಲ ಆಪ್ತರು ತಿಳಿಸಿದ್ದಾರೆ.

    2019ರ ಲೋಕಸಭಾ ಚುನಾವಣೆಯಲ್ಲಿನ ಹೀನಾಯ ಸೋಲಿನ ಬಳಿಕ ರಾಹುಲ್ ಗಾಂಧಿ ಪಕ್ಷದ ಅಧ್ಯಕ್ಷ ಸ್ಥಾನ ತೊರೆದಿದ್ದರು. ನಾಯಕತ್ವದ ಬಿಕ್ಕಟ್ಟು ತಲೆದೋರಿದ್ದರಿಂದ ಸೋನಿಯಾ ಗಾಂಧಿ ಹಂಗಾಮಿ ಅಧ್ಯಕ್ಷೆಯಾಗಿದ್ದಾರೆ. ಆದರೆ, ದೆಹಲಿ ಚುನಾವಣೆಯಲ್ಲಿ ಕಾಂಗ್ರೆಸ್ ಸಂಪೂರ್ಣ ನೆಲಕಚ್ಚಿದ ನಂತರ ರಾಹುಲ್ ಗಾಂಧಿ ಮತ್ತೆ ಪಕ್ಷದ ನೇತೃತ್ವ ವಹಿಸಬೇಕು ಎಂಬ ಒತ್ತಾಯವನ್ನು ಅನೇಕ ಹಿರಿಯ ಮುಖಂಡರು ಮಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ರಾಹುಲ್ ತಮ್ಮ ನಿರ್ಧಾರವನ್ನು ಬದಲಿಸಿ ಪಕ್ಷದ ಅಧ್ಯಕ್ಷತೆಯನ್ನು ವಹಿಸಿಕೊಳ್ಳುವ ಸಾಧ್ಯತೆ ಇದೆ ಎಂಬ ಚರ್ಚೆ ನಡೆಯುತ್ತಿದೆ. ಸೋನಿಯಾ ಗಾಂಧಿ ಅನಾರೋಗ್ಯದ ಕಾರಣ ಜವಾಬ್ದಾರಿಯಿಂದ ವಿಮುಖರಾಗಲು ಬಯಸಿದ್ದಾರೆ. ಅನಾರೋಗ್ಯದ ಕಾರಣ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಪ್ರಚಾರ ಕಾರ್ಯದಲ್ಲೂ ತೊಡಗಲಿಲ್ಲ. ಪಕ್ಷದ ನಾಯಕತ್ವದ ಕುರಿತು ಏಪ್ರಿಲ್ ಮಧ್ಯಭಾಗದಲ್ಲಿ ನಡೆಯುವ ರಾಷ್ಟ್ರೀಯ ಕಾರ್ಯಕಾರಣಿಯಲ್ಲಿ ನಿರ್ಧಾರ ಹೊರಬೀಳುವ ನಿರೀಕ್ಷೆ ಇದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts