ರಾಹುಲ್ ಬ್ರಿಟನ್ ಪೌರತ್ವ ಪ್ರಕರಣ: ಪ್ರಧಾನಿ ಮೋದಿ, ಶಾ ವಿರುದ್ಧ ಸುಬ್ರಮಣಿಯನ್ ಸ್ವಾಮಿ ಕಾನೂನು ಹೋರಾಟ!

ನವದೆಹಲಿ: ಬ್ರಿಟನ್ ಪೌರತ್ವ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ರಕ್ಷಿಸುತ್ತಿದ್ದಾರೆ ಎಂದು ಬಿಜೆಪಿಯ ಹಿರಿಯ ನಾಯಕ ಮತ್ತು ಮಾಜಿ ಕೇಂದ್ರ ಸಚಿವ ಸುಬ್ರಮಣಿಯನ್ ಸ್ವಾಮಿ ಆರೋಪಿಸಿದ್ದಾರೆ.

ಇದನ್ನೂ ಓದಿ: ಸಿದ್ಧಾರ್ಥ್ ಮಲ್ಹೋತ್ರಾ ಹಾಟ್ ರಾಂಪ್ ವಾಕ್! ಕಿಯಾರಾ ಮೂಲೆಯಲ್ಲಿ ಅಳ್ತಿದ್ದಾಳೆ ಎಂದರಲ್ಲಾ ನೆಟ್ಟಿಗರು?!

ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿನ ಶನಿವಾರ ಈ ಕುರಿತು ಪೋಸ್ಟ್‌ ಹಾಕಿರುವ ಸ್ವಾಮಿ, ವಿದೇಶಿ ಪೌರತ್ವದ ಹೊರತಾಗಿಯೂ ರಾಹುಲ್ ಗಾಂಧಿಯನ್ನು ಏಕೆ ರಕ್ಷಿಸುತ್ತಿದ್ದಾರೆ ಎಂದು ಪ್ರಧಾನಿ ಮೋದಿ ಮತ್ತು ಅಮಿತ್​ ಶಾ ಅವರನ್ನು ಪ್ರಶ್ನಿಸಿದ್ದಾರೆ.

2003 ರಲ್ಲಿ ಬ್ರಿಟಿಷ್ ಪೌರತ್ವವನ್ನು ಪಡೆದುಕೊಂಡು ವಿದೇಶಿ ಪ್ರಜೆಯಾಗಿರುವ ರಾಹುಲ್ ಗಾಂಧಿ ಮತ್ತು ಲಂಡನ್‌ನಲ್ಲಿ ಬ್ಯಾಕ್ ಓಪ್ಸ್ ಎಂಬ ಕಂಪನಿಯನ್ನು ಪ್ರಾರಂಭಿಸಿದ್ದಾರೆ. ಇದರೊಂದಿಗೆ ಅವರ ಭಾರತೀಯ ಪ್ರಜೆ ಅಮಾನ್ಯವಾಗಿದೆ. ಮೋದಿ ರಕ್ಷಣೆಯನ್ನು ಮುಂದುವರೆಸಿದರೆ, ನಾನು ಅವರ ವಿರುದ್ಧ ಪ್ರಕರಣ ದಾಖಲಿಸುತ್ತೇನೆ ಎಂದು ಎಚ್ಚರಿಸಿದ್ದಾರೆ.

ಇದೇ ಸಂದರ್ಭದಲ್ಲಿ ಸುಬ್ರಮಣಿಯನ್​ ಸ್ವಾಮಿ ಅವರು 2019 ರಲ್ಲಿ ವಿದೇಶಾಂಗ ಸಚಿವಾಲಯಕ್ಕೆ ರಾಹುಲ್ ಗಾಂಧಿ ವಿರುದ್ಧ ಸಲ್ಲಿಸಿದ್ದ ದೂರಿನ ಪ್ರತಿಯನ್ನು ಹಂಚಿಕೊಂಡಿದ್ದಾರೆ. ಮತ್ತೊಂದು ಪೋಸ್ಟ್‌ನಲ್ಲಿ, ಬ್ರಿಟಿಷ್ ಸರ್ಕಾರಕ್ಕೆ ಸಲ್ಲಿಸಿದ ರಾಹುಲ್ ಗಾಂಧಿ ಅವರ ವಾರ್ಷಿಕ ರಿಟರ್ನ್‌ನ ಉದ್ದೇಶಿತ ಪ್ರತಿಯನ್ನು ಹಂಚಿಕೊಂಡಿದ್ದಾರೆ.

ವರದಿಗಳ ಪ್ರಕಾರ, ಸ್ವಾಮಿ ಅವರ ದೂರಿನ ನಂತರ, ಸ್ವಾಮಿ ಮಾಡಿದ ಆರೋಪಗಳಿಗೆ ಪ್ರತಿಕ್ರಿಯೆ ನೀಡುವಂತೆ ಕೇಂದ್ರವು ರಾಹುಲ್ ಗಾಂಧಿಗೆ ನೋಟಿಸ್ ನೀಡಿದೆ. ಸ್ವಾಮಿ ಅವರು 2015 ರಿಂದ ರಾಹುಲ್ ಗಾಂಧಿಯವರ ಭಾರತೀಯ ಪೌರತ್ವವನ್ನು ಹಿಂಪಡೆಯಲು ಕರೆ ನೀಡುತ್ತಿದ್ದಾರೆ.

2015 ರಲ್ಲಿ ಸುಪ್ರೀಂ ಕೋರ್ಟ್ ರಾಹುಲ್ ಗಾಂಧಿಯವರ ಪೌರತ್ವವನ್ನು ಪ್ರಶ್ನಿಸುವ ಅರ್ಜಿಯನ್ನು ವಜಾಗೊಳಿಸಿತು. ಮತ್ತೆ ಮೇ 2019 ರಲ್ಲಿ, ರಾಹುಲ್ ಗಾಂಧಿಯವರ ಪೌರತ್ವವನ್ನು ಪ್ರಶ್ನಿಸಿ ಇಬ್ಬರು ದೆಹಲಿ ನಿವಾಸಿಗಳು ಸಲ್ಲಿಸಿದ ಅರ್ಜಿಯನ್ನೂ ಸುಪ್ರೀಂ ಕೋರ್ಟ್ ವಜಾಗೊಳಿಸಿತ್ತು.

ಮಹಿಳೆಯರ ಅಭಿವೃದ್ಧಿಗಾಗಿಯೇ ವಕ್ಫ್ ಕಾಯ್ದೆಗೆ ತಿದ್ದುಪಡಿ: ಖುಷ್ಬೂ

Share This Article

ಈ ದಿನಾಂಕದಂದು ಜನಿಸಿದವರ ಮೇಲೆ ಲಕ್ಷ್ಮೀ ಕೃಪೆ ಹೆಚ್ಚು! ಹಣದ ಕೊರತೆ ಕಾಡುವುದಿಲ್ಲ, ನೀವೂ ಹುಟ್ಟಿದ್ದು ಇದೇ ದಿನಾನಾ?

ಜ್ಯೋತಿಷ್ಯಶಾಸ್ತ್ರದಲ್ಲಿ ಸಂಖ್ಯಾಶಾಸ್ತ್ರವೂ ಒಂದು. ಇದರ ಪ್ರಕಾರ ವ್ಯಕ್ತಿಯ ಜನ್ಮ ದಿನಾಂಕವು ಅವನ ವ್ಯಕ್ತಿತ್ವದ ಬಗ್ಗೆ ಮತ್ತು…

ಪ್ರತಿದಿನ ಬೆಳಗ್ಗೆ ಎದ್ದಾಗ ಹಲ್ಲುಜ್ಜದೆ ನೀರು ಕುಡಿಯುತ್ತೀರಾ? ಇಲ್ಲಿದೆ ನೋಡಿ ಉಪಯುಕ್ತ ಮಾಹಿತಿ…

ಕೆಲವರು ಬೆಳಗ್ಗೆ ಎದ್ದಾಗ ಹಲ್ಲುಜ್ಜದೆ ನೀರು ಕುಡಿಯುತ್ತಾರೆ. ಈ ರೀತಿ ಕುಡಿಯುವುದು ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು…

ಕೇವಲ 7 ತಿಂಗಳಲ್ಲಿ 114 ಕೆಜಿ ತೂಕ ಇಳಿಕೆ ಹೇಗೆ ಸಾಧ್ಯ? ವೈರಲ್​ ಸ್ಟಾರ್​ ಬಿಚ್ಚಿಟ್ಟ ರಹಸ್ಯವಿದು…

ನವದೆಹಲಿ: ಯೂಟ್ಯೂಬರ್ ನಿಕೊಕಾಡೊ ಅವಕಾಡೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಸ್ಟಾರ್ ಎಂದೇ ಪ್ರಸಿದ್ಧಿ ಪಡೆದಿದ್ದಾರೆ. ನಿಕೋಲಸ್…