ಭರ್ಜರಿ ರೋಡ್ ಶೋ ಮೂಲಕ ರಾಹುಲ್ ನಾಮಪತ್ರ ಸಲ್ಲಿಕೆ

rg

ವಯನಾಡು: ಕೇರಳದ ವಯನಾಡು ಲೋಕಸಭಾ ಕ್ಷೇತ್ರದಿಂದ ಇನ್ನೊಮ್ಮೆ ಕಣಕ್ಕಿಳಿದಿರುವ ರಾಹುಲ್ ಗಾಂಧಿ ಬುಧವಾರ ವಯನಾಡು ಜಿಲ್ಲಾಧಿಕಾರಿ ರೇಣುರಾಜ್ ಅವರ ಕಚೇರಿಗೆ ಭರ್ಜರಿ ರೋಡ್ ಶೋ ಮೂಲಕ ತೆರಳಿ ನಾಮಪತ್ರ ಸಲ್ಲಿಸಿದರು.

ರಾಹುಲ್ ಗಾಂಧಿಯ ಈ ಉಮೇದುವಾರಿಕೆ ದಕ್ಷಿಣ ಭಾರತದಲ್ಲಿ ಕಾಂಗ್ರೆಸ್ ಅಸ್ತಿತ್ವ ಬಲಪಡಿಸುವ ಬದ್ಧತೆಯನ್ನು ಸೂಚಿಸುತ್ತದೆ. ಮಾತ್ರವಲ್ಲದೆ, ಪ್ರಾದೇಶಿಕ ಪ್ರಾತಿನಿಧ್ಯ ಹಾಗೂ ಒಳಗೊಳ್ಳುವಿಕೆಯ ಮಹತ್ವವನ್ನೂ ಒಳಗೊಂಡಿದೆ. ರಾಹುಲ್ ಗಾಂಧಿ ಕಲ್ಪೆಟ್ಟಾಗೆ ರೋಡ್ ಶೋ ಆರಂಭಿಸುವುದಕ್ಕೂ ಮುನ್ನ ಹೆಲಿಕಾಪ್ಟರ್ ಮೂಲಕ ಮುಪ್ಪೆ ೖನಾಡ್ ಗ್ರಾಮಕ್ಕೆ ಆಗಮಿಸಿದರು ಎಂದು ಪಕ್ಷದ ಮೂಲಗಳು ತಿಳಿಸಿವೆ.

ಪ್ರಿಯಾಂಕಾ ಸಾಥ್: ನಾಮಪತ್ರ ಸಲ್ಲಿಕೆ ವೇಳೆ ರಾಹುಲ್ ಗಾಂಧಿ ಸಹೋದರಿ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾಧ್ರಾ ಕಾರ್ಯಕ್ರಮದ ಉದ್ದಕ್ಕೂ ಜೊತೆಗಿದ್ದು ಬೆಂಬಲ ವ್ಯಕ್ತಪಡಿಸಿದರು. ಕೆಪಿಸಿಸಿ ಅಧ್ಯಕ್ಷ ಕೆ.ಸುಧಾಕರನ್, ಕಾಂಗ್ರೆಸ್ ನಾಯಕರಾದ ರಮೇಶ್ ಚೆನ್ನಿತಾಳ, ಪಿ.ಕೆ.ಕುನ್ಹಾಲಿಕುಟ್ಟಿ ಮುಂತಾದವರೊಂದಿಗೆ ಅಪಾರ ಪ್ರಮಾಣದ ಕಾಂಗ್ರೆಸ್ ಕಾರ್ಯಕರ್ತರು ಜೊತೆಯಾಗಿ ರಾಹುಲ್​ಗೆ ಬೆಂಬಲ ಸೂಚಿಸಿದರು.

ಪ್ರಬಲ ಎದುರಾಳಿಗಳು: ರಾಹುಲ್ ಗಾಂಧಿಗೆ ಬಿಜೆಪಿ ರಾಜ್ಯಾಧ್ಯಕ್ಷ ಕೆ.ಸುರೇಂದ್ರನ್, ಸಿಪಿಐ ನಾಯಕ ಆನಿ ರಾಜಾ ಪ್ರಬಲ ವಿರೋಧಿಗಳಾಗಿ ಕಣಕ್ಕಿಳಿದಿದ್ದಾರೆ. ವಯನಾಡು ಲೋಕಸಭಾ ಕ್ಷೇತ್ರದಲ್ಲಿ 2019ರಲ್ಲಿ ಸ್ಪರ್ಧಿಸಿದ್ದ ರಾಹುಲ್ ಗಾಂಧಿ ನಾಲ್ಕು ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಕೇರಳದ 20 ಲೋಕಸಭಾ ಕ್ಷೇತ್ರಗಳಿಗೆ ಏ. 26ರಂದು ಚುನಾವಣೆ ನಡೆಯಲಿವೆ.

ಭರ್ಜರಿ ರೋಡ್ ಶೋ ಮೂಲಕ ರಾಹುಲ್ ನಾಮಪತ್ರ ಸಲ್ಲಿಕೆ

ಮನೆ ಮನೆ ಗ್ಯಾರಂಟಿ ಅಭಿಯಾನ

ನವದೆಹಲಿ: ಕಾಂಗ್ರೆಸ್ ಪಕ್ಷದ ಗ್ಯಾರಂಟಿಗಳ ಕುರಿತು ದೇಶದ 8 ಕೋಟಿ ಮನೆಗಳನ್ನು ತಲುಪಿ ಅರಿವು ಮೂಡಿಸುವ ನಿಟ್ಟಿನಲ್ಲಿ ‘ಮನೆ ಮನೆ ಗ್ಯಾರಂಟಿ’ ಕಾರ್ಯಕ್ರಮಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬುಧವಾರ ಚಾಲನೆ ನೀಡಿದರು. ಈಶಾನ್ಯ ದೆಹಲಿ ಲೋಕಸಭಾ ಕ್ಷೇತ್ರದ ಉಸ್ಮಾನ್​ಪುರದಲ್ಲಿ ಪಕ್ಷದ ‘ಪಂಚ ನ್ಯಾಯ, 25 ಗ್ಯಾರಂಟಿಗಳು’ ಕುರಿತ ಕರಪತ್ರಗಳನ್ನು ನೀಡಿ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಾಂಗ್ರೆಸ್​ನ ಎಲ್ಲ ನಾಯಕರು ಹಾಗೂ ಕಾರ್ಯಕರ್ತರು ಈ ಕಾರ್ಡ್​ಗಳನ್ನು ಮನೆಗಳಿಗೆ ತಲುಪಿಸಿ, ನಮ್ಮ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಏನೇನು ಮಾಡಲಿದೆ ಎಂಬ ಕುರಿತು ಮಾಹಿತಿ ಹಂಚಬೇಕು ಎಂದು ಖರ್ಗೆ ತಿಳಿಸಿದರು. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮೋದಿ ಗ್ಯಾರಂಟಿ ಎನ್ನುತ್ತಾರೆ, ಆದರೆ ಅವರ ಗ್ಯಾರಂಟಿಗಳು ಜನರನ್ನು ತಲುಪುತ್ತಿಲ್ಲ ಎಂದು ಖರ್ಗೆ ಟೀಕಿಸಿದರು. ಆದರೆ ನಾವು ಏನು ಭರವಸೆ ನೀಡುತ್ತೇವೋ ಅದನ್ನು ಈಡೇರಿಸುತ್ತೇವೆ ಎಂಬುದನ್ನು ಜನರಿಗೆ ತಿಳಿಸಬೇಕಾಗಿದೆ ಎಂದು ಖರ್ಗೆ ತಮ್ಮ ಪಕ್ಷದ ನಾಯಕರಿಗೆ, ಮುಖಂಡರಿಗೆ ಹೇಳಿದರು.

25 ಭರವಸೆ: ಕಾಂಗ್ರೆಸ್ ಪಂಚ ನ್ಯಾಯ ಶೀರ್ಷಿಕೆಯಲ್ಲಿ ಯುವ ನ್ಯಾಯ, ನಾರಿ ನ್ಯಾಯ, ಕಿಸಾನ್ ನ್ಯಾಯ, ಶ್ರಮಿಕ್ ನ್ಯಾಯ ಮತ್ತು ಹಿಸ್ಸೇದಾರಿ ನ್ಯಾಯ ಎಂಬ ಐದು ಗ್ಯಾರಂಟಿಗಳನ್ನು ನೀಡಿದ್ದು, ಪ್ರತಿ ಗ್ಯಾರಂಟಿಯಡಿಯೂ ತಲಾ ಐದು ಆಶ್ವಾಸನೆಗಳಿವೆ. ಈ ಮೂಲಕ ಕಾಂಗ್ರೆಸ್ 25 ಗ್ಯಾರಂಟಿಗಳನ್ನು ಜನರ ಮುಂದಿಟ್ಟಿದೆ.

Viral video: ಹೆತ್ತೆ ತಾಯಿಯ ಮೇಲೆ ಅಮಾನುಷ ಹಲ್ಲೆ ನಡೆಸಿದ ಮಗ: ಹೆಡೆಮುರಿ ಕಟ್ಟಿದ ಪೊಲೀಸರು!

Share This Article

Alcohol In Winter: ಚಳಿಯಲ್ಲಿ ಮದ್ಯ ಸೇವನೆ ಎಷ್ಟು ಅಪಾಯಕಾರಿ ಗೊತ್ತಾ?

Alcohol In Winter: ಚಳಿಗಾಲ ಆರಂಭವಾಗಿದೆ ಮತ್ತು ತಾಪಮಾನವು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಇದಲ್ಲದೆ, ಜ್ವರ…

ಚಳಿಗಾಲದಲ್ಲಿ ಸೀಬೆಹಣ್ಣನ್ನು ಹೇಗೆ ತಿಂದರೆ ಆರೋಗ್ಯಕ್ಕೆ ಪ್ರಯೋಜನಕಾರಿ; ಇಲ್ಲಿದೆ ಉಪಯುಕ್ತ ಮಾಹಿತಿ | Health Tips

ಸೀಬೆಹಣ್ಣು ತಿನ್ನುವುದರಿಂದ ಅನೇಕ ರೋಗಗಳನ್ನು ಗುಣಪಡಿಸಬಹುದು. ತಲೆಯಿಂದ ಕಾಲ್ಬೆರಳು ಉಗುರುಗಳವರೆಗೆ ಆರೋಗ್ಯಕರವಾಗಿರಲು ಇದು ಕಿತ್ತಳೆಗಿಂತ ಹೆಚ್ಚು…

ಕಾಂತಿಯುತ ತ್ವಚೆ ನಿಮ್ಮದಾಗಬೇಕೇ?; ಮಲಗುವ ಮುನ್ನ ಈ ಟಿಪ್ಸ್​ ಫಾಲೋ ಮಾಡಿ | Health Tips

ಸುಂದರ, ಆಕರ್ಷಣಿಯ ಮತ್ತು ಹೊಳೆಯುವ ಚರ್ಮವನ್ನು ಪಡೆಯಲು ಹಗಲಿನಲ್ಲಿ ಮಾತ್ರವಲ್ಲ ರಾತ್ರಿ ವೇಳೆಯು ಚರ್ಮದ ಕಾಳಜಿ…