ವಿಜ್ಞಾನಿಗಳಿಗೆ ಎ-ಸ್ಯಾಟ್​ ಶ್ಲಾಘನೆ, ಪ್ರಧಾನಿಗೆ ವಿಶ್ವ ರಂಗಭೂಮಿ ದಿನದ ಶುಭ ಕೋರಿದ ರಾಹುಲ್​ ಗಾಂಧಿ

ನವದೆಹಲಿ: ಮಿಷನ್​ ಶಕ್ತಿ ಹೆಸರಿನಲ್ಲಿ ಎ-ಸ್ಯಾಟ್​ ಕ್ಷಿಪಣಿಯನ್ನು ಯಶಸ್ವಿಯಾಗಿ ಪರೀಕ್ಷಿಸಲಾಗಿದೆ ಎಂಬ ಶುಭಸುದ್ದಿಯನ್ನು ದೇಶದ ಜನರಿಗೆ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಎಐಸಿಸಿ ಅಧ್ಯಕ್ಷ ರಾಹುಲ್​ ಗಾಂಧಿ ‘ವಿಶ್ವ ರಂಗಭೂಮಿ ದಿನ’ದ ಶುಭ ಕೋರಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ತಮ್ಮ ಭಾಷಣದಲ್ಲಿ ಉಪಗ್ರಹವನ್ನು ಹೊಡೆದುರುಳಿಸಿದ ವಿಷಯವನ್ನು ಘೋಷಿಸುತ್ತಿದ್ದಂತೆ ರಾಹುಲ್​ ಗಾಂಧಿ ಈ ಕುರಿತು ಟ್ವೀಟ್​ ಮಾಡಿದ್ದಾರೆ. ಅವರು ತಮ್ಮ ಟ್ವೀಟ್​ನಲ್ಲಿ ಈ ಯಶಸ್ಸಿಗಾಗಿ ನಾನು ಡಿಆರ್​ಡಿಒದ ವಿಜ್ಞಾನಿಗಳನ್ನು ಶ್ಲಾಘಿಸುತ್ತೇನೆ. ಅವರು ಅತ್ಯುತ್ತಮ ಕಾರ್ಯ ಮಾಡಿದ್ದಾರೆ. ಇದೇ ಸಂದರ್ಭದಲ್ಲಿ ನಾನು ಪ್ರಧಾನಿ ಮೋದಿ ಅವರಿಗೆ ವಿಶ್ವ ರಂಗಭೂಮಿ ದಿನದ ಶುಭ ಕೋರಲು ಬಯಸುತ್ತೇನೆ ಎಂದು ತಿಳಿಸಿದ್ದಾರೆ.

ಮೋದಿ ರಾಜಕೀಯ ಮಾಡುತ್ತಿದ್ದಾರೆ

ಮಿಷನ್​ ಶಕ್ತಿ ಯಶಸ್ಸಿನ ಕುರಿತು ಟ್ವೀಟ್​ ಮಾಡಿರುವ ಬಿಎಸ್​ಪಿ ಅಧ್ಯಕ್ಷೆ ಮಾಯಾವತಿ ಅವರು ಈ ಪರೀಕ್ಷೆ ನಡೆಸಿದ ವಿಜ್ಞಾನಿಗಳನ್ನು ನಾನು ಅಭಿನಂದಿಸುತ್ತೇನೆ. ಆದರೆ ಪ್ರಧಾನಿ ಮೋದಿ ಅವರು ಈ ವಿಷಯವನ್ನು ರಾಜಕೀಯಗೊಳಿಸುತ್ತಿದ್ದು, ಚುನಾವಣೆ ಲಾಭಕ್ಕಾಗಿ ಬಳಸಿಕೊಳ್ಳುತ್ತಿದ್ದಾರೆ. ಇದು ಖಂಡನೀಯ ಎಂದು ತಿಳಿಸಿದ್ದಾರೆ.

ಇದು ರಾಜಕೀಯ ಘೋಷಣೆ

ಪ್ರಧಾನಿ ಮೋದಿ ಅವರ ವಿರುದ್ಧ ಕಿಡಿ ಕಾರಿರುವ ಪಶ್ವಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಪರೀಕ್ಷೆ ಯಶಸ್ವಿಯಾದ ಕುರಿತು ಡಿಆರ್​ಡಿಒ ವಿಜ್ಞಾನಿಗಳು ಘೋಷಿಸಬೇಕು. ಆದರೆ ಪ್ರಧಾನಿ ನರೇಂದ್ರ ಮೋದಿ ಅವರು ಇದನ್ನು ಘೋಷಿಸುವ ಮೂಲಕ ರಾಜಕೀಯ ಲಾಭ ಪಡೆಯಲು ಯತ್ನಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *