22 ಲಕ್ಷ ರೂ. ಮೌಲ್ಯದ ಬಂಗಾರ ಕಳವು

ರಾಯಚೂರು: ನಿಜಲಿಂಗಪ್ಪ ಕಾಲನಿಯ ರಮೇಶ ನಾಡಗೌಡ ಎನ್ನುವವರ ಮನೆಯ ಬೀಗ ಮುರಿದು 22.50 ಲಕ್ಷ ರೂ. ಮೌಲ್ಯದ 750 ಗ್ರಾಂ ಚಿನ್ನಾಭರಣ ಹಾಗೂ 1.50 ಲಕ್ಷ ರೂ. ನಗದು ಕಳ್ಳರು ದೋಚಿದ್ದಾರೆ. ಮನೆಯವರು ನ.16ರಿಂದ ಮನೆಗೆ ಬೀಗ ಹಾಕಿಕೊಂಡು ಹೋಗಿದ್ದು, ಗುರುವಾರ ಮನೆಗೆ ಬಂದು ನೋಡಿದಾಗ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ. ಈ ಕುರಿತು ಪಶ್ಚಿಮ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಒಂದು ತಿಂಗಳ ಹಿಂದೆ ನಗರದಲ್ಲಿ ಸರಣಿ ಕಳ್ಳತನ ಪ್ರಕರಣಗಳು ನಡೆದಿದ್ದವು. ಈಗ ಪುನಃ ಕಳ್ಳತನ ನಡೆದಿರುವುದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ.