More

  ಹೊಸ ವರ್ಷದ ಸಂಭ್ರಮಕ್ಕೆ ಕೇಕ್​ ತರಲು ತೆರಳಿದ ಯುವಕ ಅಪಘಾತದಲ್ಲಿ ಸಾವು

  ರಾಯಚೂರು: ಹೊಸ ವರ್ಷದ ಸಂಭ್ರಮಾಚರಣೆಗೆ ಕೇಕ್​​ ತರಲು ತೆರಳಿದ ಯುವಕ ಅಪಘಾತದಲ್ಲಿ ಮೃತಪಟ್ಟ ಘಟನೆ ಕಡ್ಗಂದೊಡ್ಡಿ ಗ್ರಾಮದ ಕ್ರಾಸ್ ಬಳಿ ನಡೆದಿದೆ.

  ಶ್ರೀಕಾಂತ್ (24) ಮೃತ ಬೈಕ್ ಸವಾರ ಎಂದು ಗುರುತಿಸ ಲಾಗಿದೆ. ಅಪಘಾತದಲ್ಲಿ ಗಾಯಗೊಂಡ ಮೂವರನ್ನು ಚಿಕಿತ್ಸೆಗಾಗಿ ರಿಮ್ಸ್​ ಆಸ್ಪತ್ರೆಗೆ ದಾಖಲಿಸಲಾಗಿದೆ.

  ಶ್ರೀಕಾಂತ್​ ಕೇಕ್​ ಖರೀದಿಸಿ ರಾಯಚೂರಿನಿಂದ ಸ್ವಗ್ರಾಮಕ್ಕೆ ತೆರಳುತ್ತಿದ್ದರು. ಈ ವೇಳೆ ಎದುರಿನಿಂದ ವೇಗವಾಗಿ ಬರುತ್ತಿದ್ದ ಬೈಕ್​ ಡಿಕ್ಕಿ ಹೊಡೆಯಿತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

  ರಾಯಚೂರು ಗ್ರಾಮೀಣ ಠಾಣೆ ಪೊಲೀಸರು ಕೇಸು ದಾಖಲಿಸಿದ್ದಾರೆ.

   

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts