More

    ಹೆಚ್ಚುವರಿ ಶಿಕ್ಷಕರ ವರ್ಗಾವಣೆ ಕೈಬಿಡಿ


    ರಾಯಚೂರು: ಸಿಂಧನೂರು ತಾಲೂಕಿನಲ್ಲಿ ಶಿಕ್ಷಕರ ಕೊರತೆಯಿಂದಾಗಿ ನೇಮಕ ಮಾಡಿಕೊಳ್ಳಲಾಗಿದೆ. ಆದರೆ ಶಿಕ್ಷಣ ಇಲಾಖೆ ಹೆಚ್ಚುವರಿ ಹೆಸರಿನಲ್ಲಿ ಶಿಕ್ಷಕರನ್ನು ವರ್ಗಾವಣೆ ಮಾಡಲು ಮುಂದಾಗಿದ್ದು, ಅದನ್ನು ಕೈಬಿಡಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಜಿಲ್ಲಾಧ್ಯಕ್ಷ ಶರಣಪ್ಪ ಮರಳಿ ಒತ್ತಾಯಿಸಿದರು.

    ಸುದ್ದಿಗೋಷ್ಠಿಯಲ್ಲಿ ಶುಕ್ರವಾರ ಮಾತನಾಡಿ, ಶಿಕ್ಷಕರ ಕೊರತೆ ಕಾರಣಕ್ಕೆ ತಾಲೂಕಿನಲ್ಲಿ 352 ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗಿದೆ. ಆದರೆ ಮತ್ತೊಂದೆಡೆ 81 ಶಿಕ್ಷಕರನ್ನು ಹೆಚ್ಚುವರಿ ಶಿಕ್ಷಕರೆಂದು ಗುರುತಿಸಿ ವರ್ಗಾವಣೆ ಮಾಡಲು ಇಲಾಖೆ ಮುಂದಾಗಿದೆ. ತಾಲೂಕಿನಲ್ಲಿ ಈಗಾಗಲೇ ಹಲವು ಶಾಲೆಗಳಲ್ಲಿ ಶಿಕ್ಷಕರ ಕೊರತೆಯಿಂದಾಗಿ ಪಾಲಕರು ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಸೇರಿಸುತ್ತಿಲ್ಲ. ಇಂತಹ ಸಂದರ್ಭದಲ್ಲಿ 81 ಶಿಕ್ಷಕರನ್ನು ವರ್ಗಾವಣೆ ಮಾಡಿದಲ್ಲಿ ಶಾಲೆಗಳಲ್ಲಿ ಬೋಧನೆಗೆ ಶಿಕ್ಷಕರಿಲ್ಲದೆ ಇರುವ ಮಕ್ಕಳು ಖಾಸಗಿ ಶಾಲೆಗಳತ್ತ ಮುಖ ಮಾಡಬೇಕಾಗುತ್ತಿದೆ. ಇಲಾಖೆ ನಿರ್ಧಾರವನ್ನು ಕೈಬಿಡಬೇಕು ಎಂದರು.

    ಜಿಲ್ಲೆಯಲ್ಲಿ ರೈತರು ಸಂಕಷ್ಟ ಎದುರಿಸುತ್ತಿದ್ದರೂ ಜನಪ್ರತಿನಿಧಿಗಳು ಗಮನ ಹರಿಸುತ್ತಿಲ್ಲ. ಹತ್ತಿ ಬೆಲೆ ಇಳಿಮುಖವಾಗಿದ್ದು, ಬೆಂಬಲ ಬೆಲೆಯಲ್ಲಿ ಕೇವಲ 10 ಕ್ವಿಂಟಾಲ್ ಜೋಳ ಖರೀದಿ ನಿಗದಿ ಮಾಡುವ ಮೂಲಕ ರೈತರಿಗೆ ಸಮಸ್ಯೆ ತಂದೊಡ್ಡಲಾಗಿದೆ. ಮತ್ತೊಂದೆಡೆ ಹಣಕಾಸು ಸಂಸ್ಥೆಗಳು ಸಾಲ ಪಡೆದ ರೈತರಿಗೆ ನೋಟಿಸ್ ನೀಡುವ ಮೂಲಕ ಕಿರಕುಳ ನೀಡುತ್ತಿದ್ದು, ಆಸ್ತಿ ಜಫ್ತಿ ಮಾಡುವುದಾಗಿ ಬೆದರಿಕೆ ಹಾಕುತ್ತಿವೆ. ಸರ್ಕಾರ ಈ ಎಲ್ಲ ಸಮಸ್ಯೆಗಳನ್ನು ಕೂಡಲೇ ನಿವಾರಿಸಲು ಸೂಕ್ತ ಕ್ರಮಕೈಗೊಳ್ಳಬೇಕು. ಇಲ್ಲವಾದರಲ್ಲಿ ಮುಂದಿನ ದಿನಗಳಲ್ಲಿ ತೀವ್ರ ಸ್ವರೂಪದ ಹೋರಾಟ ನಡೆಸಲಾಗುವುದು ಎಂದು ಶರಣಪ್ಪ ಮರಳಿ ಎಚ್ಚರಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts