

ರಾಯಚೂರು: ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಅವರ ವಿರುದ್ಧ ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ ಅವಹೇಳನಕಾರಿ ಪದ ಬಳಕೆ ಮಾಡಿರುವುದು ಅಧಿಕಾರಿಯ ಉದ್ಧಟತನದ ಪರಮಾವಧಿ ಎಂದು ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಮಾಜಿ ಸಚಿವ ವೆಂಕಟರಾವ್ ನಾಡಗೌಡ ಹೇಳಿದರು.
ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಂಗಳವಾರ ಮಾತನಾಡಿ, ಇತ್ತೀಚೆಗೆ ಅಧಿಕಾರಿಗಳು ಶಿಷ್ಠಾಚಾರವನ್ನು ಮರೆತು ಮಾತುಗಳನ್ನಾಡುತ್ತಿದ್ದು, ಜನಪ್ರತಿನಿಧಿಗಳಿಗೆ ಗೌರವಿಸುತ್ತಿಲ್ಲ. ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಅವರನ್ನು ಹಂದಿಗೆ ಹೋಲಿಸಿ ತಮ್ಮ ಸಿಬ್ಬಂದಿ ಹಾಗೂ ಅಧಿಕಾರಿಗಳಿಗೆ ಪತ್ರ ಬರೆದಿರುವುದು ಸರಿಯಲ್ಲ. ಇದು ನಿಯಮ ಉಲ್ಲಂಘನೆಯಾಗಿರುತ್ತದೆ ಎಂದು ಹೇಳಿದರು.
ಅಧಿಕಾರಿಯು ಕಾಂಗ್ರೆಸ್ ಕಚೇರಿಯಲ್ಲಿ ಕುಳಿತುಕೊಂಡು ಪತ್ರ ಬರೆದಿರುವ ಬಗ್ಗೆ ಸಂಶಯವಿದೆ ಏಕೆಂದರೆ ರಾಜ್ಯ ಸರ್ಕಾರದ ಗೃಹ ಸಚಿವರು ಈ ಬಗ್ಗೆ ಪ್ರತಿಕ್ರಿಯೆ ನೀಡಿ ಅಧಿಕಾರಿಪರ ಮಾತನಾಡುತ್ತಿದ್ದಾರೆ. ಕೇಂದ್ರ ಸಚಿವರಿಗೆ ಈ ರೀತಿ ಅವಹೇಳನ ಮಾಡುತ್ತಿರುವ ಅಧಿಕಾರಿಯು ತನ್ನ ಕೆಳ ಹುದ್ದೆಯಲ್ಲಿರುವ ಅಧಿಕಾರಿಗಳೊಂದಿಗೆ ಹೇಗೆ ವರ್ತಿಸುತ್ತಾನೆ ಎಂಬುವುದು ಇದರಿಂದ ತಿಳಿಯುತ್ತದೆ ಎಂದರು.
ಸಚಿವರ ವಿರುದ್ಧ ಅವಹೇಳನಕಾರಿ ಪದ ಬಳಕೆ ಮಾಡಿರುವ ಎಡಿಜಿಪಿ ಚದ್ರಶೇಖರ್ ವಿರುದ್ಧ ಸೂಕ್ತ ತನಿಖೆ ಕೈಗೊಳ್ಳಬೇಕು ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಪಕ್ಷದಿಂದ ಹೋರಾಟ ಮಾಡಲಾಗುವುದು ಎಂದು ರಾಜ್ಯ ಸರ್ಕಾರಕ್ಕೆ ಎಚ್ಚರಿಸಿದರು. ಈ ಸಂದರ್ಭದಲ್ಲಿ ಪ್ರಮುಖರಾದ ಎಂ.ವಿರುಪಾಕ್ಷಿ, ರಾಜಾ ವೆಂಕಟಪ್ಪ ನಾಯಕ, ಮಹಾಂತೇಶ ಪಾಟೀಲ್ ಅತ್ತನೂರು, ಎನ್.ಶಿವಶಂಕರ್,