More

    ರೈತ ವಿರೋಧಿ ಕೃಷಿ ಕಾಯ್ದೆ ಹಿಂಪಡೆಯಿರಿ; ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಆಗ್ರಹ

    ರಾಯಚೂರು: ಕೇಂದ್ರ ಸರ್ಕಾರ ಜಾರಿಗೊಳಿಸಿರುವ ರೈತ ವಿರೋಧಿ ಮೂರು ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ಸ್ಥಳೀಯ ಜಿಲ್ಲಾಧಿಕಾರಿ ಕಚೇರಿ ಮುಂದೆ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯಿಂದ ಸೋಮವಾರ ಪ್ರತಿಭಟನೆ ನಡೆಸಲಾಯಿತು.

    ಕೃಷಿ ಕಾನೂನುಗಳು ಅವೈಜ್ಞಾನಿಕವಾಗಿದ್ದು, ರೈತರ ರಕ್ಷಣೆ ಮಾಡುವ ಬದಲು ಬೀದಿ ಪಾಲು ಮಾಡುವ ಕಾಯ್ದೆಗಳಾಗಿವೆ. ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ದೆಹಲಿಯಲ್ಲಿ ಕಳೆದ 7 ತಿಂಗಳಿಂದ ರೈತರು ಹೋರಾಟ ನಡೆಸುತ್ತಿದ್ದರೂ ಕೇಂದ್ರ ಸರ್ಕಾರ ರೈತರ ಹೋರಾಟಕ್ಕೆ ಸ್ಪಂದಿಸುವ ಕೆಲಸ ಮಾಡುತ್ತಿಲ್ಲ. ದೇಶಾದ್ಯಂತ ಜನರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದರೂ ಸಮಸ್ಯೆ ಆಲಿಸುವ ಕೆಲಸ ಮಾಡುತ್ತಿಲ್ಲ. ರೈತರ ಭೂಮಿಗಳನ್ನು ಕಾರ್ಪೋರೆಟ್ ಸಂಸ್ಥೆಗಳಿಗೆ ನೀಡುವ ಮೂಲಕ ರೈತರನ್ನು ಜೀತದಾಳುಗಳನ್ನಾಗಿ ಮಾಡುವ ಹುನ್ನಾರ ಕಾಯ್ದೆಯಲ್ಲಿದ್ದು, ಕೂಡಲೇ ಕಾಯ್ದೆಗಳನ್ನು ರದ್ದುಪಡಿಸಿ, ರೈತರ ಹಿತ ಕಾಪಾಡುವಂತಹ ಕೆಲಸ ಮಾಡಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

    ಪ್ರತಿಭಟನೆಯಲ್ಲಿ ಸಂಘದ ಜಿಲ್ಲಾಧ್ಯಕ್ಷ ಸಿ.ಎಚ್.ರವಿಕುಮಾರ, ಪದಾಧಿಕಾರಿಗಳಾದ ಮಂಜುನಾಥ, ಬಡೇಸಾಬ್, ಮಲ್ಲನಗೌಡ, ಹನುಮಂತ, ಸೋಮರೆಡ್ಡಿ, ಸೂಗಯ್ಯಸ್ವಾಮಿ, ರಾಜಶೇಖರ್, ರಾಜು, ರಮೇಶ, ಗೋವಿಂದ, ಜಯಪ್ಪ ಪಾಲ್ಗೊಂಡಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts