ರಾಯಚೂರು: ರಾಜ್ಯದ ಎಲ್ಲ ಸರ್ಕಾರಿ ಹಾಗೂ ವಿವಿಯ ಅಡಿಯಲ್ಲಿ ಬರುವ ಇಂಜಿನಿಯರಿಂಗ್ ಕಾಲೇಜುಗಳ ಅಭಿವೃದ್ಧಿಗೆ ಸರ್ಕಾರದಿಂದ ಹೆಚ್ಚಿನ ಅನುದಾನ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಲ್ ಇಂಡಿಯಾ ಡೆಮಾಕ್ರೆಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಷನ್(ಎಐಡಿಎಸ್‌ಒ)ದಿಂದ ನಗರದ ಟಿಪ್ಪು ಸುಲ್ತಾನ್ ಉದ್ಯಾನದಲ್ಲಿ ಮಂಗಳವಾರ ಪ್ರತಿಭನಟನೆ ನಡೆಸಲಾಯಿತು.
ದಾವಣಗೆರೆಯ ಯುಬಿಡಿಟಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಶೇ.50 ರಷ್ಟು ಸೀಟುಗಳ ಪ್ರವೇಶಕ್ಕೆ ಭೀಕರ ಪ್ರಮಾಣದಲ್ಲಿ ಶುಲ್ಕ ಏರಿಕೆಯನ್ನು ಮಾಡಲಾಗಿದೆ. ಶೇ.50ರಷ್ಟು ಹೆಚ್ಚುವರಿ ಶುಲ್ಕವನ್ನು ವಿದ್ಯಾರ್ಥಿಗಳಿಂದ ಪಡೆಯಲಾಗುತ್ತಿದ್ದು, ಕೂಡಲೇ ಈ ನಡೆಯನ್ನು ಕೈಬಿಡಬೇಕು. ಪ್ರಸ್ತುತ ವರ್ಷ ಸ್ವೀಕರಿಸಿರುವ ಹೆಚ್ಚುವರಿ ಶುಲ್ಕವನ್ನು ಹಿಂದುರಿಗಿಸಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸಲಾಯಿತು.
ರಾಜ್ಯದ ಎಲ್ಲ ಸರ್ಕಾರಿ ಹಾಗೂ ವಿವಿ ಅಡಿಯಲ್ಲಿ ಬರುವ ಇಂಜಿನಿಯರಿಂಗ್ ಕಾಲೇಜುಗಳ ನಿರ್ವಹಣೆಯ ಸಂಪೂರ್ಣ ಜವಾಬ್ದಾರಿಯನ್ನು ಸರ್ಕಾರ ವಹಿಸಿಕೊಳ್ಳಬೇಕು. ಪದವಿ ಮತ್ತು ಇಂಜಿನಿಯರಿಂಗ್ ಕಾಲಾಜುಗಳ ಕ್ಲಸ್ಟರ್ ವಿವಿ ಮತ್ತು ಸ್ವಯಂ ಹಣಕಾಸು ಸಂಸ್ಥೆಗಳನ್ನಾಗಿ ಮಾಡುತ್ತಿರುವುದನ್ನು ನಿಲ್ಲಿಸಬೇಕು ಎಂದು ಆಗ್ರಹಿಸಲಾಯಿತು.
ಈ ಸಂದರ್ಭದಲ್ಲಿ ಪ್ರಮುಖರಾದ ಹಯ್ಯಳಪ್ಪ, ಬಸವರಾಜ್, ವೀರೇಶ, ಅಮೋಘ, ನಂದ ಗೋಪಾಲ, ಸ್ವಾಮಿ ಸೇರಿದಂತೆ ಇತರರಿದ್ದರು.