More

    ರಾಯಚೂರಿಗೆ ಏಮ್ಸ್ ಮಂಜೂರು ಮಾಡಿ

    ರಾಯಚೂರು: ಪ್ರಾದೇಶಿಕ ಅಸಮತೋಲನ ನಿವಾರಣೆ ನಿಟ್ಟಿನಲ್ಲಿ ಹಿಂದುಳಿದ ರಾಯಚೂರು ಜಿಲ್ಲೆಗೆ ಅಖಿಲ ಭಾರತ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಮಂಜೂರು ಮಾಡಬೇಕೆಂದು ಒತ್ತಾಯಿಸಿ ಸ್ಥಳೀಯ ಟಿಪ್ಪು ಸುಲ್ತಾನ್ ಉದ್ಯಾನದಲ್ಲಿ ಗುರುವಾರ ಪ್ರತಿಭಟಿಸಿದ ಕಸ್ತೂರಿ ಕರ್ನಾಟಕ ಜನಪರ ವೇದಿಕೆ ಕಾರ್ಯಕರ್ತರು ಡಿಸಿ ಕಚೇರಿಯ ಕೇಂದ್ರ ಸ್ಥಾನಿಕ ಅಧಿಕಾರಿ ಪ್ರಶಾಂತಕುಮಾರಗೆ ಮನವಿ ಸಲ್ಲಿಸಿದರು.

    ಈ ಕುರಿತಂತೆ ಕೂಡಲೇ ಸಚಿವ ಸಂಪುಟದಲ್ಲಿ ತೀರ್ಮಾನ ಕೈಗೊಂಡು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಬೇಕು. ಕೇಂದ್ರಕ್ಕೆ ಶಿಫಾರಸು ಮಾಡುವಾಗ ರಾಯಚೂರು ಹೆಸರು ಮಾತ್ರ ಇರಬೇಕೆಂದು ಒತ್ತಾಯಿಸಿದರು.

    ವೇದಿಕೆ ಅಧ್ಯಕ್ಷ ರಮೇಶ ಗೌಡ ಮಾತನಾಡಿ, ಡಾ.ನಂಜುಂಡಪ್ಪ ವರದಿ ಶಿಫಾರಸಿನಂತೆ ಜಿಲ್ಲೆಗೆ ಐಐಟಿ ಮಂಜೂರು ಮಾಡುವಂತೆ ಸುದೀರ್ಘ ಹೋರಾಟ ನಡೆಸಿದರೂ ರಾಜಕೀಯ ಪ್ರಭಾವದಿಂದ ಜಿಲ್ಲೆಗೆ ಕೈತಪ್ಪುವಂತಾಯಿತು. ಕೇಂದ್ರ ಸರ್ಕಾರ ರಾಜ್ಯಕ್ಕೆ ಏಮ್ಸ್ ಮಂಜೂರು ಮಾಡುವುದಾಗಿ ಪ್ರಕಟಿಸಿದೆ. ಜಿಲ್ಲೆಯಲ್ಲಿ ಎರಡು ನದಿಗಳು ಹರಿಯುತ್ತಿದ್ದು, ಫಲವತ್ತಾದ ಭೂಮಿ, ರಾಜ್ಯಕ್ಕೆ ಬೆಳಕು ನೀಡುವ ಶಾಖೋತ್ಪನ್ನ ಕೇಂದ್ರಗಳನ್ನು ಹೊಂದಿದೆ. ಏಮ್ಸ್ ಸ್ಥಾಪನೆ ಮೂಲಕ ಜಿಲ್ಲೆಗೆ ನ್ಯಾಯ ಒದಗಿಸಬೇಕು. ಈ ಬಗ್ಗೆ ರಾಜ್ಯ ಸರ್ಕಾರ ಶೀಘ್ರ ತನ್ನ ನಿಲುವನ್ನು ಪ್ರಕಟಿಸಬೇಕು ಎಂದು ಒತ್ತಾಯಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts