More

    ರಾಯಚೂರಲ್ಲಿ ಏಮ್ಸ್ ಸ್ಥಾಪಿಸಲು ಶಿಫಾರಸು ಮಾಡಲು ಹೋರಾಟ ಸಮಿತಿ ಒತ್ತಾಯ

    ರಾಯಚೂರು: ಅಖಿಲ ಭಾರತ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯನ್ನು ರಾಯಚೂರಲ್ಲಿ ಸ್ಥಾಪಿಸಲು ರಾಜ್ಯ ಸರ್ಕಾರದಿಂದ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲು ರಾಯಚೂರು ಏಮ್ಸ್ ಹೋರಾಟ ಸಮಿತಿ ಒತ್ತಾಯಿಸಿದೆ.

    ಬೆಂಗಳೂರಿನ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಗುರುವಾರ ಭೇಟಿಯಾದ ಸಮಿತಿ ನಿಯೋಗ, ಶೀಘ್ರದಲ್ಲಿ ಸಂಪುಟ ಸಭೆಯಲ್ಲಿ ತೀರ್ಮಾನ ತೆಗೆದುಕೊಂಡು, ಏಮ್ಸ್ ಸ್ಥಾಪನೆಗೆ ರಾಯಚೂರು ಹೆಸರೊಂದನ್ನೇ ಕೇಂದ್ರಕ್ಕೆ ಶಿಫಾರಸು ಮಾಡಬೇಕು ಎಂದು ಮನವಿ ಮಾಡಿತು.

    ಪ್ರಾದೇಶಿಕ ಅಸಮತೋಲನ ನಿವಾರಣೆಗಾಗಿ ಡಾ.ಡಿ.ಎಂ.ನಂಜುಂಡಪ್ಪ ವರದಿಯಲ್ಲಿ ರಾಯಚೂರಿನಲ್ಲಿ ಐಐಟಿ ಸ್ಥಾಪಿಸಬೇಕು ಎಂದು ಶಿಫಾರಸು ಮಾಡಲಾಗಿದೆ. ಆದರೆ, ಅಂದಿನ ಸರ್ಕಾರ ತೋರಿದ ವಿಳಂಬ ನೀತಿ, ರಾಯಚೂರು ಜತೆಗೆ ಧಾರವಾಡ, ಮೈಸೂರು ಹೆಸರುಗಳನ್ನು ಶಿಫಾರಸು ಮಾಡಿದ್ದರಿಂದ ಜಿಲ್ಲೆಗೆ ಐಐಟಿ ಕೈತಪ್ಪುವಂತಾಗಿತ್ತು. ಕೇಂದ್ರ ಸರ್ಕಾರ ರಾಜ್ಯಕ್ಕೆ ಏಮ್ಸ್ ಮಂಜೂರು ಮಾಡುವ ನಿರ್ಧಾರ ಪ್ರಕಟಿಸಿದೆ. ಏಮ್ಸ್ ಸ್ಥಾಪನೆಗೆ ರಾಯಚೂರು ಸೂಕ್ತ ಪ್ರದೇಶವಾಗಿದ್ದು, ಸಮೃದ್ಧ ನೀರು, ರಾಜ್ಯಕ್ಕೆ ಬೆಳಕು ನೀಡುವ ವಿದ್ಯುತ್ ಸ್ಥಾವರಗಳು ಸೇರಿ ಅದಕ್ಕೆ ಬೇಕಾದ ಎಲ್ಲ ಸೌಕರ್ಯ ಲಭ್ಯ ಇವೆ. ಜಿಲ್ಲೆಯಲ್ಲಿ ಉನ್ನತ ವೈದ್ಯಕೀಯ ಸೌಲಭ್ಯಗಳ ಕೊರತೆಯಿಂದ ಅಪೌಷ್ಟಿಕತೆ, ರಕ್ತ ಹೀನತೆಯಿಂದ ಜನರು ನರಳುತ್ತಿದ್ದು,ಏಮ್ಸ್ ಸ್ಥಾಪನೆಯಿಂದ ಸಮಸ್ಯೆಗಳಿಗೆ ಪರಿಹಾರ ಸಿಗುವುದರ ಜತೆಗೆ ಹಿಂದುಳಿದ ಜಿಲ್ಲೆಗೆ ನ್ಯಾಯ ಸಲ್ಲಿಸಿದಂತಾಗಲಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts