More

    ತಿದ್ದುಪಡಿ ಕಾಯ್ದೆಗಳನ್ನು ರದ್ದುಪಡಿಸಲು ಒತ್ತಾಯಿಸಿ ಸಂಯುಕ್ತ ಹೋರಾಟ ಕರ್ನಾಟಕ ಗಾಂಧೀಜಿ ಪುತ್ಥಳಿ ಮುಂದೆ ನಿರಶನ

    ರಾಯಚೂರು: ರೈತ ವಿರೋಧಿ ಕಾಯ್ದೆಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರ ಮೇಲೆ ಕೇಂದ್ರ ಸರ್ಕಾರ ನಡೆಸುತ್ತಿರುವ ದಮನಕಾರಿ ನೀತಿಯನ್ನು ಕೈಬಿಡಬೇಕು ಎಂದು ಒತ್ತಾಯಿಸಿ ಸ್ಥಳೀಯ ಗಾಂಧೀಜಿ ಪುತ್ಥಳಿ ಮುಂದೆ ಸಂಯುಕ್ತ ಹೋರಾಟ ಕರ್ನಾಟಕ ಶನಿವಾರ ಉಪವಾಸ ಧರಣಿ ನಡೆಸಿತು.

    ಶಾಂತಿಯುತವಾಗಿ ಟ್ರಾೃಕ್ಟರ್ ಪರೇಡ್ ನಡೆಸುತ್ತಿದ್ದ ರೈತರ ಮೇಲೆ ಪೊಲೀಸರು ಲಾಠಿ ಪ್ರಹಾರ ನಡೆಸುವ ಮೂಲಕ ಹೋರಾಟವನ್ನು ಹತ್ತಿಕ್ಕಲು ಪ್ರಯತ್ನಿಸಲಾಗಿದೆ. ಎರಡು ತಿಂಗಳಿನಿಂದ ರೈತರು ಶಾಂತಿಯುತವಾಗಿ ಹೋರಾಟ ನಡೆಸುತ್ತಿದ್ದರೂ ಸ್ಪಂದನೆ ನೀಡದ ಕೇಂದ್ರ ಸರ್ಕಾರ ರೈತರ ಮೇಲೆ ದಬ್ಬಾಳಿಗೆ ನಡೆಸಲು ಮುಂದಾಗಿದೆ. ಹೋರಾಟವನ್ನು ಹತ್ತಿಕ್ಕಲು ಹೋರಾಟಗಾರರು ಮತ್ತು ಜನರಲ್ಲಿ ಗೊಂದಲ ಮೂಡಿಸುವ ಕೆಲಸವನ್ನು ಸರ್ಕಾರ ಮಾಡುತ್ತಿದ್ದು, ಶಾಂತಿಯುತವಾಗಿ ಹೋರಾಟ ನಡೆಸುವವರ ಮೇಲೆ ಲಾಠಿ ಪ್ರಹಾರ ನಡೆಸಿದ್ದರಿಂದ ಪರಿಸ್ಥಿತಿ ವಿಕೋಪಕ್ಕೆ ತಿರುಗಿದೆೆ. ರೈತರಿಗೆ ಮಾರಕವಾಗಿರುವ ಮೂರು ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯಬೇಕು. ಇಲ್ಲವಾದಲ್ಲಿ ದೇಶಾದ್ಯಂತ ದೆಹಲಿಯಂತೆ ಹೋರಾಟವನ್ನು ನಡೆಸಲಾಗುವುದು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

    ಪ್ರತಿಭಟನೆಯಲ್ಲಿ ಸಂಘಟನೆ ಪದಾಧಿಕಾರಿಗಳಾದ ಶ್ರೀನಿವಾಸ ಕಲವಲದೊಡ್ಡಿ, ಮಾರೆಪ್ಪ ಹರವಿ ಹಾಗೂ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts