More

    ಪಿಎಫ್‌ಐ ಮುಖಂಡರ ಬಂಧನಕ್ಕೆ ಆಕ್ರೋಶ

    ರಾಯಚೂರು: ಪಿಎಫ್‌ಐ ಜಿಲ್ಲಾ ಘಟಕದ ಮಾಜಿ ಅಧ್ಯಕ್ಷ ಮಹ್ಮದ್ ಇಸ್ಮಾಯಿಲ್ ಹಾಗೂ ಕಾರ್ಯದರ್ಶಿ ಆಸೀಂ ಬಂಧನ ಖಂಡಿಸಿ ತಹಸಿಲ್ ಕಚೇರಿ ಮುಂದೆ ಪಿಎಫ್‌ಐ ಮತ್ತು ಎಸ್‌ಡಿಪಿಐ ಕಾರ್ಯಕರ್ತರು ಮಂಗಳವಾರ ಪ್ರತಿಭಟನೆ ನಡೆಸಿದರು.

    ರಸ್ತೆಯಲ್ಲಿ ಮಲಗಿ ಸರ್ಕಾರ ಮತ್ತು ಪೊಲೀಸರ ವಿರುದ್ಧ ಘೋಷಣೆ ಕೂಗಿದ ಕಾರ್ಯಕರ್ತರು ಬಂಧಿತರನ್ನು ಬಿಡುಗಡೆ ಮಾಡುವಂತೆ ಆಗ್ರಹಿಸಿದರು. ಇದರಿಂದ ಕೆಲಕಾಲ ಸಂಚಾರ ಅಸ್ತವ್ಯಸ್ತಗೊಂಡು ಜನರು ಸಮಸ್ಯೆ ಎದುರಿಸುವಂತಾಗಿತ್ತು. ಪಿಎಫ್‌ಐ ಮತ್ತು ಎಸ್‌ಡಿಪಿಐ ಗುರಿಯಾಗಿಸಿ ಮುಖಂಡರನ್ನು ಸುಳ್ಳು ಆರೋಪಗಳ ಮೇಲೆ ಬಂಧಿಸಲಾಗುತ್ತಿದೆ. ಸಂಘಟನೆ ಮುಖಂಡರು ಎಲ್ಲಿಯೂ ಸಮಾಜ ದ್ರೋಹ ಕೆಲಸ ಮಾಡದಿದ್ದರೂ ಸುಳ್ಳು ಆರೋಪಗಳನ್ನು ಹೊರಿಸಿ ಬಂಧಿಸಲಾಗುತ್ತಿದೆ.

    ಕರೊನಾ ಹಾಗೂ ಇತರ ಸಂದರ್ಭಗಳಲ್ಲಿ ಸಂಘಟನೆ ಪದಾಧಿಕಾರಿಗಳು ಜನರಿಗೆ ನೆರವಾಗುವ ಕೆಲಸ ಮಾಡುತ್ತ ಬಂದಿದ್ದಾರೆ. ಹಣಕಾಸು ವ್ಯವಹಾರಕ್ಕೆ ಸಂಬಂಧಿಸಿ ಎಲ್ಲ ಮಾಹಿತಿಯನ್ನು ನೀಡಲಾಗಿದ್ದರೂ ಪಿಎಫ್‌ಐ ಕಾರ್ಯಕರ್ತರನ್ನು ಬಂಧಿಸುವ ಷಡ್ಯಂತ್ರವನ್ನು ಸರ್ಕಾರ ನಡೆಸುತ್ತಿದೆ ಎಂದು ಪ್ರತಿಭಟನಾಕಾರರು ದೂರಿದರು.

    ಪೊಲೀಸರು ಬಂಧಿತರ ವಿಚಾರಣೆಗೆ ಸಹಕರಿಸುವಂತೆ ಮನವಿ ಮಾಡಿದರೂ ಪ್ರತಿಭಟನೆ ಕೈಬಿಡದ ಕಾರಣ ಅಧಿಕಾರಿಗಳು ಬಂಧಿಸುವ ಎಚ್ಚರಿಕೆ ನೀಡಿದ ನಂತರ ಪ್ರತಿಭಟನೆ ಹಿಂಪಡೆದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts