More

    ಆಶ್ರಯ ಕಾಲನಿಗೆ ಮೂಲ ಸೌಕರ್ಯ ಕಲ್ಪಿಸಿ

    ರಾಯಚೂರು: ನಗರದ ವಾರ್ಡ್ ಸಂಖ್ಯೆ 28ರ ಆಶ್ರಯ ಕಾಲನಿ ಮತ್ತು ಕಾಳಿದಾಸ ನಗರ ಬಡಾವಣೆಗಳಿಗೆ ಅಗತ್ಯ ಮೂಲ ಸೌಕರ್ಯ ಕಲ್ಪಿಸುವಂತೆ ಕರ್ನಾಟಕ ದಲಿತ ಸಂಘರ್ಷ ಸಮಿತಿ ಒತ್ತಾಯಿಸಿದೆ.

    ಇದನ್ನೂ ಓದಿ: ಆಶ್ರಯ ಕಾಲನಿಯಲ್ಲಿನ ಶೆಡ್ ತೆರವು, ಪೊಲೀಸರಿಂದ ಲಘು ಲಾಠಿ ಪ್ರಹಾರ

    ಸಮಿತಿ ನಿಯೋಗ ಜಿಲ್ಲಾಧಿಕಾರಿ ಕಚೇರಿ ಕೇಂದ್ರ ಸ್ಥಾನಿಕ ಅಧಿಕಾರಿ ಮಹ್ಮದ್ ಅನೀಫ್‌ಗೆ ಗುರುವಾರ ಮನವಿ ಸಲ್ಲಿಸಿ, ಬಡಾವಣೆಗಳಲ್ಲಿ ಜನರು ಕಳೆದ 25 ವರ್ಷಗಳಿಂದ ಅಗತ್ಯ ಮೂಲ ಸೌಕರ್ಯಗಳಿಲ್ಲದೆ ಸಮಸ್ಯೆ ಎದುರಿಸುತ್ತಿದ್ದಾರೆ ಎಂದು ದೂರಿದರು.

    ಕುಡಿಯುವ ನೀರು, ರಸ್ತೆ, ಬೀದಿ ದೀಪ, ಚರಂಡಿ, ಸಾರ್ವಜನಿಕ ಶೌಚಗೃಹಳಿಲ್ಲದೆ ಜನರು ತೊಂದರೆ ಎದುರಿಸುತ್ತಿದ್ದಾರೆ. ಮಹಿಳೆಯರು ರಾತ್ರಿ ಸಮಯದಲ್ಲಿ ಬಹಿರ್ದೆಶೆಗೆ ಹೋಗಲು ಸಂಕಷ್ಟ ಎದುರಿಸುತ್ತಿದ್ದಾರೆ. ಜನಪ್ರತಿನಿಧಿಗಳು ಹಾಗೂ ನಗರಸಭೆ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ.

    ಕೂಡಲೇ ಎರಡು ಬಡಾವಣೆಗಳಿಗೆ ಅಗತ್ಯ ಮೂಲ ಸೌಕರ್ಯ ಕಲ್ಪಿಸಲು ಕ್ರಮಕೈಗೊಳ್ಳಬೇಕು. ಇಲ್ಲವಾದಲ್ಲಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಅನಿರ್ದಿಷ್ಟ ಧರಣಿ ನಡೆಸಲಾಗುವುದು ಎಂದು ಮನವಿಸಲ್ಲಿಸಿದರು.

    ನಿಯೋಗದಲ್ಲಿ ಸಮಿತಿ ಜಿಲ್ಲಾ ಸಂಚಾಲಕ ಎಸ್.ನರಸಿಂಹಲು, ಪದಾಧಿಕಾರಿಗಳಾದ ಅನ್ವರ್, ಸೈಯ್ಯದ್ ಬಾಬಾ, ಸಾಬೀರ್, ಮುಸ್ತಫಾ, ಮಾರೆಪ್ಪ, ನಲ್ಲಾರೆಡ್ಡಿ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts