More

    ಮಹತ್ವಾಕಾಂಕ್ಷಿ ಜಿಲ್ಲೆ ಪ್ರಗತಿ ವೇಗ ಹೆಚ್ಚಳಕ್ಕೆ ಕ್ರಮ, ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಹೇಳಿಕೆ

    ರಾಯಚೂರು: ಮಹತ್ವಾಕಾಂಕ್ಷಿ ಜಿಲ್ಲೆ ಪ್ರಗತಿ ಕುಂಠಿತವಾಗುವಲ್ಲಿ ಇಲಾಖೆಗಳಲ್ಲಿನ ಸಮನ್ವಯತೆ ಕೊರತೆ ಕಾರಣವಾಗಿದ್ದು, ಕೇಂದ್ರ ಸರ್ಕಾರಕ್ಕೆ ಈ ಕುರಿತು ಮಾಹಿತಿ ನೀಡಿ ಪ್ರಗತಿ ವೇಗ ಹೆಚ್ಚಳಕ್ಕೆ ಕ್ರಮಕೈಗೊಳ್ಳುವುದಾಗಿ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವ ಎ.ನಾರಾಯಣಸ್ವಾಮಿ ತಿಳಿಸಿದರು.

    ಜಿಪಂ ಸಭಾಂಗಣದಲ್ಲಿ ಸುದ್ದಿಗಾರರೊಂದಿಗೆ ಮಂಗಳವಾರ ಮಾತನಾಡಿ, ಸಂಬಂಧಿಸಿದ ಇಲಾಖೆಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಿದಾಗ ಮಾತ್ರ ಪ್ರಗತಿ ಸಾಧ್ಯ. ತಾಯಿ ಮತ್ತು ಮಗುವಿನ ಆರೋಗ್ಯ ರಕ್ಷಣೆಗೆ ಸಂಬಂಧಿಸಿದಂತೆ ಅನೇಕ ಲೋಪಗಳು ಕಂಡು ಬಂದಿದ್ದು, ಅದನ್ನು ಸರಿಪಡಿಸಲಾಗುವುದು ಎಂದರು.

    ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದ ಜನ ಹೆಚ್ಚಿನ ಸಂಖ್ಯೆಯಲ್ಲಿದ್ದು, ಆರೋಗ್ಯ, ಶಿಕ್ಷಣ, ಮೂಲ ಸೌಕರ್ಯ ಕಲ್ಪಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಮಹತ್ವಾಕಾಂಕ್ಷೆ ಜಿಲ್ಲೆಯ ಪ್ರಗತಿ ಪರಿಶೀಲನೆಯನ್ನು ನಿರಂತರವಾಗಿ ನಡೆಸಿ ಲೋಪ ಸರಿಪಡಿಸುವ ಕೆಲಸ ಮಾಡಲಾಗುವುದು ಎಂದು ಹೇಳಿದರು.

    ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ಕೇಂದ್ರ ಮತ್ತು ರಾಜ್ಯ ಸರ್ಕರದ ಪ್ರತ್ಯೇಕ ಯೋಜನೆಗಳಿದ್ದು, ಅನುದಾನ ಸಮರ್ಪಕ ಬಳಕೆಯಾಗುತ್ತಿಲ್ಲ. ಪರಿಶಿಷ್ಟ ಜಾತಿ, ಪಂಗಡದ ಅಭಿವೃದ್ಧಿಗೆ ರಾಜ್ಯ ಸರ್ಕಾರದ ಎಸ್‌ಇಪಿ, ಟಿಎಸ್‌ಪಿ ಅನುದಾನ ದುರ್ಬಳಕೆ ಬಗ್ಗೆ ದೂರುಗಳು ಬಂದಲ್ಲಿ ಕಾನೂನು ಕ್ರಮಕೈಗೊಳ್ಳಲಾಗುವುದು ಎಂದರು.
    ಹೆಂಡ ತಯಾರಿಕೆಗೆ ಬಳಸುವ ಸಿಎಚ್ ಪೌಡರ್ ಬಳಕೆ ಕುರಿತಾಗಿ ಬೇರೆ ಬೇರೆ ರಾಜ್ಯಗಳಲ್ಲಿ ಒಂದೊಂದು ಆದೇಶಗಳಿವೆ. ಕೆಮಿಕಲ್ ಬಳಕೆ ಮಾಡುವುದು ಹಾಗೂ ಬಳಕೆಗೆ ನಿರ್ಬಂಧ ವಿಧಿಸಿರುವ ಮಾಹಿತಿಯನ್ನು ಕಲೆಹಾಕಿ ಮುಂದಿನ ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts