21 C
Bengaluru
Thursday, January 23, 2020

ಬಿಜೆಪಿಗರಿಂದ ಗೆಲುವಿನ ಸಂಭ್ರಮಾಚರಣೆ

Latest News

ಮೊಕದ್ದಮೆ ಹಿಂಪಡೆಯಲು ಒತ್ತಾಯ

ಮೈಸೂರು: ಮಾನಸಗಂಗೋತ್ರಿಯಲ್ಲಿ ಎನ್‌ಆರ್‌ಸಿ, ಸಿಎಎ ವಿರೋಧಿಸಿ ನಡೆದ ಪ್ರತಿಭಟನೆ ಸಂದರ್ಭ ‘ಫ್ರೀ ಕಾಶ್ಮೀರ’ ಫಲಕ ಪ್ರದರ್ಶನಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಗಳ ಮೇಲೆ ಹೂಡಿರುವ ಮೊಕದ್ದಮೆ...

ವಿದ್ಯಾಭ್ಯಾಸದ ಸಂದರ್ಭ ಪ್ರತಿಭಟನೆ ಬೇಡ

ಮೈಸೂರು: ಶಿಕ್ಷಣಕ್ಕೆ ಸಂಬಂಧಿಸಿದ ಸಮಸ್ಯೆಗಳಿದ್ದಲ್ಲಿ ವಿಶ್ವವಿದ್ಯಾಲಯಗಳ ಒಳಗೆ ಬಗೆಹರಿಸಿಕೊಳ್ಳಬೇಕೇ ಹೊರತು, ವಿದ್ಯಾಭ್ಯಾಸದ ಸಂದರ್ಭದಲ್ಲಿ ಪ್ರತಿಭಟನೆಗಳಿಗೆ ಮುಂದಾಗಬಾರದು ಎಂದು ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಸಂತೋಷ್...

ಮಹಿಳೆಯರಿಗೆ ಶೇ.50ರಷ್ಟು ಮೀಸಲಾತಿ ಜಾರಿಗೊಳಿಸಿ

ಮೈಸೂರು: ವಿಧಾನಸಭೆ, ಲೋಕಸಭೆಯಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಮೀಸಲಾತಿ ಜಾರಿಗೊಳಿಸಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದರು. ಕರ್ನಾಟಕ ಪ್ರದೇಶ ಮಹಿಳಾ...

ಕೇಂದ್ರದ ಬಿಜೆಪಿ ಸರ್ಕಾರ ಬಿದ್ದ ದಿನ ಪೌರತ್ವ ತಿದ್ದುಪಡಿ ಕಾಯ್ದೆಯೂ ರದ್ದಾಗುತ್ತದೆ: ನಿವೃತ್ತ ಐಎಎಸ್​ ಅಧಿಕಾರಿ ಕಣ್ಣನ್​ ಗೋಪಿನಾಥನ್​

ಧಾರವಾಡ: ಪೌರತ್ವ ತಿದ್ದುಪಡಿ ಕಾಯ್ದೆ ಇಡೀ ರಾಷ್ಟ್ರಕ್ಕೆ ಸಂಬಂಧಿಸಿದ ಹಿನ್ನೆಲೆಯಲ್ಲಿ ಎಲ್ಲ ರಾಜ್ಯಗಳಲ್ಲೂ ಹೋರಾಟ ತೀವ್ರಗೊಂಡಿದೆ ಎಂದು ನಿವೃತ್ತ ಐಎಎಸ್​ ಅಧಿಕಾರಿ ಕಣ್ಣನ್​...

ಕಾಲೇಜ್ ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ

ಹಾವೇರಿ: ಇಲ್ಲಿನ ಪಿಬಿ ರಸ್ತೆಯಲ್ಲಿರುವ ಜಿಎಚ್ ಕಾಲೇಜ್​ನಲ್ಲಿ ಹೆಜ್ಜೇನು ದಾಳಿಯಿಂದ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಬುಧವಾರ ಮಧ್ಯಾಹ್ನ ಸಂಭವಿಸಿದೆ.

ಪರಸ್ಪರ ಸಿಹಿ ತಿನ್ನಿಸಿ ಸಂತಸ ವ್ಯಕ್ತಪಡಿಸಿದ ಕಾರ್ಯಕರ್ತರು | ರಾರಾಜಿಸಿದ ಸಿಎಂ ಭಾವಚಿತ್ರದ ಬ್ಯಾನರ್‌ಗಳು

ರಾಯಚೂರು: ರಾಜ್ಯದ 15 ಕ್ಷೇತ್ರಗಳ ವಿಧಾನಸಭೆ ಉಪ ಚುನಾವಣೆಯಲ್ಲಿ ಬಿಜೆಪಿ 12 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ನಗರದಲ್ಲಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ವಿಜಯೋತ್ಸವ ಆಚರಿಸಿದರು.

ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಸೋಮವಾರ ಮಧ್ಯಾಹ್ನ ಜಮಾಯಿಸಿದ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಡಾ.ಬಿ.ಆರ್.ಅಂಬೇಡ್ಕರ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಘೋಷಣೆ ಹಾಕಿದರು. ನಂತರ ಪಟಾಕಿ ಸಿಡಿಸಿ, ಪರಸ್ಪರ ಸಿಹಿ ತಿನ್ನಿಸಿ ವಿಜಯೋತ್ಸವ ಆಚರಿಸಿದರು. ಬಿಎಸ್ ಯಡಿಯೂರಪ್ಪರ ಭಾವಚಿತ್ರ ಇರುವ ಬ್ಯಾನರ್ ಹಿಡಿದು ಕಾರ್ಯಕರ್ತರು ಸಂಭ್ರಮಿಸಿದರು.

ಶಾಸಕ ಡಾ.ಶಿವರಾಜ್ ಪಾಟೀಲ್, ಬಿಜೆಪಿ ಜಿಲ್ಲಾಧ್ಯಕ್ಷ ಶರಣಪ್ಪಗೌಡ ಜಾಡಲದಿನ್ನಿ, ನಗರಾಧ್ಯಕ್ಷ ಗೋವಿಂದು, ಮುಖಂಡರಾದ ಎನ್.ಶಂಕ್ರಪ್ಪ, ಎನ್.ಕೇಶವರೆಡ್ಡಿ, ಕಡುಗೋಲು ಆಂಜನೇಯ, ಯು.ದೊಡ್ಡಮಲ್ಲೇಶಪ್ಪ, ಬಿ.ಎಸ್.ಪಾಟೀಲ್, ಬಂಡೇಶ ವಲ್ಕಂದಿನ್ನಿ, ಶರಣಮ್ಮ ಕಾಮರೆಡ್ಡಿ, ರವೀಂದ್ರ ಜಲ್ದಾರ್, ಮುಕ್ತಿಯಾರ, ಕಡಗೋಳ ರಾಮಚಂದ್ರ, ಶ್ರೀನಿವಾಸರೆಡ್ಡಿ, ಶಶಿಧರ್ ಏಗನೂರು, ಎನ್.ಕೆ.ನಾಗರಾಜ್, ಬಂಗಿ ಮುನಿರೆಡ್ಡಿ, ಆಂಜಿನೇಯ, ಜೆ.ಎಂ.ಮೌನೇಶ, ಚಂದ್ರಶೇಖರ ಸೇರಿದಂತೆ ಹಲವುರು ಪಾಲ್ಗೊಂಡಿದ್ದರು.

ವಿವಿಧೆಡೆ: ರಾಯಚೂರು ಜಿಲ್ಲೆಯ ಸಿಂಧನೂರು, ಅರಕೇರಾ, ಮಸ್ಕಿ ಸೇರಿದಂತೆ ವಿವಿಧ ಪಟ್ಟಣ, ಹೋಬಳಿಗಳಲ್ಲಿ ಬಿಜೆಪಿ ಬೆಂಬಲಿಗರು, ಮುಖಂಡರು, ಕಾರ್ಯಕರ್ತರು ಗೆಲುವಿನ ಹುಮ್ಮಸ್ಸಿನಿಂದ ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸಿದರು.

ನಾನೂ ಸಚಿವ ಸ್ಥಾನದ ಆಕಾಂಕ್ಷಿ: ಸಂಭ್ರಮಾಚರಣೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಶಾಸಕ ಡಾ.ಶಿವರಾಜ್ ಪಾಟೀಲ್, ಉಪ ಚುನಾವಣೆಯಲ್ಲಿ ಗೆದ್ದವರಿಗಷ್ಟೇ ಸಚಿವ ಸ್ಥಾನದ ಆಸೆ ಇರದು, ನಾನೂ ಒಬ್ಬ ಆಕಾಂಕ್ಷಿಯಾಗಿ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಪರಿಗಣಿಸಲು ಕೋರುವೆ. ನೀಡುವುದು, ಬಿಡುವುದು ವರಿಷ್ಠರಿಗೆ ಬಿಟ್ಟ ವಿಚಾರ. ಸಿಎಂ ಯಡಿಯೂರಪ್ಪ ನೇತೃತ್ವದ ಸರ್ಕಾರ ಮೂರುವರೆ ವರ್ಷ ಸುಸ್ಥಿತ ಅಧಿಕಾರ ನೀಡಲಿದೆ. ಗೆದ್ದಿರುವ ಅಭ್ಯರ್ಥಿಗಳಿಗೆ ಸಚಿವ ಸ್ಥಾನ ನೀಡುವುದು ಪಕ್ಷದ ವರಿಷ್ಠರಿಗೆ ಬಿಟ್ಟಿದ್ದು, ನಾನೂ ಕೂಡ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದೇನೆ.

ಮತದಾರರ ತೀರ್ಪಿಗೆ ತಲೆ ಬಾಗುತ್ತೇವೆ:

ಸಿಂಧನೂರು: ರಾಜ್ಯದ 15 ಕ್ಷೇತ್ರಗಳಲ್ಲಿ ನಡೆದ ಉಪಚುನಾವಣೆಯಲ್ಲಿ ಮತದಾರರು ನೀಡಿರುವ ತೀರ್ಪಿಗೆ ತಲೆ ಬಾಗುತ್ತೇವೆ ಎಂದು ಶಾಸಕ ವೆಂಕಟರಾವ್ ನಾಡಗೌಡ ಹೇಳಿದರು. ಮಾಧ್ಯಮದೊಂದಿಗೆ ಮಾತನಾಡಿದ ಅವರು, ಸುಪ್ರಿಂ ಕೋರ್ಟ್ 15 ಜನರನ್ನು ಅನರ್ಹ ಎಂದು ತೀರ್ಮಾನ ನೀಡಿದ್ದರೂ ಸಹ ಜನತಾ ನ್ಯಾಯಾಲಯ ಅವರನ್ನು ಅರ್ಹರನ್ನಾಗಿಸಿದೆ. ಸೋಲೇ ಗೆಲುವಿಗೆ ನಾಂದಿಯಾಗಿದೆ. ಸೋತ ಮಾತ್ರಕ್ಕೆ ಮನೆಯಲ್ಲಿ ಕೂಡದೆ ಪಕ್ಷ ಸಂಘಟನೆ ಮಾಡಿ ಗೆಲುವಿಗಾಗಿ ಪ್ರಯತ್ನಿಸಲಾಗುವುದು ಎಂದರು.

ವಿಡಿಯೋ ನ್ಯೂಸ್

VIDEO: ಮಾವುತನ ಊಟದ ಎಲೆಯಿಂದ ತುತ್ತು ಅನ್ನ ತಿಂದು, ನೆಟ್ಟಿಗರ...

ತಿರುವನಂತಪುರ: ಆನೆಗಳ ಆಟ, ದಾಳಿ, ಮರ ಹತ್ತುವುದು ಹೀಗೆ ಹಲವು ವಿಡಿಯೋಗಳು ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿವೆ. ಆದರೆ ಈಗ ವೈರಲ್​ ಆಗಿರುವ ಆನೆಯ ವಿಡಿಯೋ ಸಾಮಾಜಿಕ ಬಳಕೆದಾರರ ಮನಸ್ಸು ಗೆದ್ದಿದೆ. ಹಸಿದ...

VIDEO| ರಾಷ್ಟ್ರಪತಿ ರಾಮನಾಥ್​ ಕೋವಿಂದ್​ರಿಂದ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ...

ನವದೆಹಲಿ: ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಅವರು ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ಪ್ರದಾನ ಮಾಡಿದರು. ವಿವಿಧ ಕ್ಷೇತ್ರಗಳಲ್ಲಿ ಅದ್ವಿತೀಯ ಸಾಧನೆ ಮಾಡಿದ...

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...