More

    ವಿಧಾನಸಭೆ ವಿಸರ್ಜಿಸಿ ಜನಾದೇಶಕ್ಕೆ ಮುಂದಾಗಿ

    ರಾಯಚೂರು: ರಾಜ್ಯದಲ್ಲಿ ಸಮಾಜ ಒಡೆಯುವ ಶಕ್ತಿಗಳು ಬಲಗೊಳ್ಳುತ್ತಿವೆ. ಸೌಹಾರ್ದತೆಗೆ ಧಕ್ಕೆಯಾಗುತ್ತಿದ್ದರೂ ಗೃಹ ಸಚಿವ ಮತ್ತು ಸರ್ಕಾರ ಕೈಗೊಳ್ಳುತ್ತಿಲ್ಲ. ರಾಜ್ಯಪಾಲರು ಮಧ್ಯ ಪ್ರವೇಶಿಸಿ ವಿಧಾನಸಭೆ ವಿಸರ್ಜಿಸಿ ಹೊಸದಾಗಿ ಜನಾದೇಶಕ್ಕೆ ಕ್ರಮಕೈಗೊಳ್ಳಬೇಕು ಎಂದು ಸ್ವರಾಜ್ಯ ಇಂಡಿಯಾ ರಾಜ್ಯಾಧ್ಯಕ್ಷ ಚಾಮರಸ ಮಾಲಿಪಾಟೀಲ್ ಹೇಳಿದರು.

    ಸುದ್ದಿಗೋಷ್ಠಿಯಲ್ಲಿ ಸೋಮವಾರ ಮಾತನಾಡಿ, ರಾಜ್ಯದಲ್ಲಿ ರಾಜಕೀಯ ಪರಿಸ್ಥಿತಿ ಅಯೋಮಯವಾಗಿದ್ದು, ಸಮಾಜ ಒಡೆಯುವವರನ್ನು ಗಡಿಪಾರು ಮಾಡಬೇಕು. ಮತೀಯ ಭಾವನೆಗಳನ್ನು ಕೆರಳಿಸುವವರ ಹಾಗೂ ದ್ವೇಷ ಹುಟ್ಟಿಸುವವರ ವಿರುದ್ಧ ಕ್ರಮಕೈಗೊಳ್ಳಬೇಕು ಎಂದರು.

    ಹಿಜಾಬ್‌ನಿಂದ ಆರಂಭವಾಗಿ ಹಲಾಲ್, ಮುಸ್ಲಿಂರ ವ್ಯಾಪಾರಕ್ಕೆ ನಿರ್ಬಂಧ, ಮಸೀದಿಗಳಲ್ಲಿ ಅಜಾನ್‌ಗೆ ವಿರೋಧ ಮುಂತಾದ ದ್ವೇಷ ಹರಡುವ ಕೆಲಸವನ್ನು ಮಾಡಲಾಗುತ್ತಿದೆ. ಹಿಂದು, ಮುಸ್ಲಿಮರ ಭಾವನೆಗಳನ್ನು ಕೆರಳಿಸಿ ಸಾಮರಸ್ಯ ಹದಗೆಡಿಸುವ ಪ್ರಯತ್ನ ನಡೆಸಲಾಗುತ್ತಿದೆ. ಪ್ರಮೋದ ಮುತಾಲಿಕ್ ದ್ವೇಷದ ಕಿಚ್ಚು ಹಚ್ಚುವ ಹೇಳಿಕೆ ನೀಡುತ್ತಿದ್ದರೂ ಸರ್ಕಾರ ಕ್ರಮಕೈಗೊಳ್ಳುತ್ತಿಲ್ಲ. ಗುತ್ತಿಗೆದಾರರು ಸರ್ಕಾರದ ವಿರುದ್ಧ ಶೇ.40 ಕಮೀಷನ್ ಆರೋಪ ಮಾಡುತ್ತಿದ್ದಾರೆ. ಪಿಎಸ್‌ಐ ಸೇರಿವಂತೆ ಹಲವು ನೇಮಕಾತಿಗಳಲ್ಲಿ ಅಕ್ರಮ ನಡೆದಿರುವುದು ಬಹಿರಂಗವಾಗಿದೆ ಎಂದರು.

    ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದ್ದು ಗೃಹ ಸಚಿವರು ಅಡಳಿತ ನಡೆಸುವಲ್ಲಿ ವಿಫಲವಾಗಿದ್ದಾರೆ. ಅವರು ಕೂಡಲೇ ರಾಜೀನಾಮೆ ನೀಡಬೇಕು. ಮುಖ್ಯಮಂತ್ರಿಗಳ ಕೈಕಟ್ಟಿ ಹಾಕಲಾಗಿದ್ದು, ರಾಜ್ಯಪಾಲರು ಪರಿಸ್ಥಿತಿಯನ್ನು ಅವಲೋಕಿಸಿ ಸರ್ಕಾರದ ವಿಸರ್ಜನೆಗೆ ಮುಂದಾಗಬೇಕು ಎಂದು ಚಾಮರಸ ಮಾಲಿಪಾಟೀಲ್ ಒತ್ತಾಯಿಸಿದರು. ಮುಖಂಡರಾದ ಭೀಮೇಶ್ವರರಾವ್, ಬೂದಯ್ಯಸ್ವಾಮಿ, ಪ್ರಭಾಕರ ಪಾಟೀಲ್, ಅಬ್ದುಲ್ ಮಜೀದ್ ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts