ನಮ್ಮನ್ನು 2ಎ ಪ್ರವರ್ಗಕ್ಕೆ ಸೇರಿಸಿ, ಮುನ್ನೂರು ಕಾಪು ಸಮುದಾಯದಿಂದ ರಾಯಚೂರಿನಲ್ಲಿ ಪ್ರತಿಭಟನೆ

22012021 Raichur Munnurkapu Comunity protest
Published on

ರಾಯಚೂರು: ಸಮುದಾಯದ 27 ಉಪ ಪಂಗಡಗಳನ್ನು ಹಿಂದುಳಿದ ವರ್ಗದ 2ಎ ಪ್ರವರ್ಗಕ್ಕೆ ಸೇರಿಸುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಜಿಲ್ಲಾ ಮುನ್ನೂರು ಕಾಪು ಸಮಾಜದಿಂದ ಶುಕ್ರವಾರ ಪ್ರತಿಭಟನೆ ನಡೆಯಿತು.

ಸ್ಥಳೀಯ ಲಕ್ಷ್ಮಮ್ಮ ದೇವಿ ಕಲ್ಯಾಣ ಮಂಟಪದಿಂದ ಮೆರವಣಿಗೆ ಮೂಲಕ ಡಿಸಿ ಕಚೇರಿಗೆ ಆಗಮಿಸಿ, ಎಡಿಸಿ ಕೆ.ಆರ್.ದುರಗೇಶ್‌ಗೆ ಮನವಿ ಸಲ್ಲಿಸಲಾಯಿತು. ರಾಜ್ಯದಲ್ಲಿ 40 ಲಕ್ಷ ಜನಸಂಖ್ಯೆ ಹೊಂದಿರುವ ಸಮುದಾಯದವರು ಒಕ್ಕಲುತನ ಅವಲಂಬಿಸಿದ್ದಾರೆ. ಇತ್ತೀಚೆಗೆ ಚಿಕ್ಕಪುಟ್ಟ ವ್ಯವಹಾರ ಮಾಡುತ್ತಾ ಉಪ ಜೀವನ ನಡೆಸುತ್ತಿದ್ದಾರೆ. ಶೈಕ್ಷಣಿಕವಾಗಿ ಹಿಂದುಳಿದಿರುವುದನ್ನು ಗಮಿನಿಸಿ 2010ರಲ್ಲಿ ಸಮುದಾಯದ ವಿದ್ಯಾರ್ಥಿಗಳಿಗೆ ಶಿಕ್ಷಣ ಸೌಲಭ್ಯಕ್ಕಗಿ 2ಎ ಮೀಸಲು ನೀಡಲಾಗಿತ್ತು. ಮಹಾರಾಷ್ಟ್ರದಲ್ಲಿ ಸಮುದಾಯವನ್ನು ಎಸ್ಟಿಗೆ, ತೆಲಂಗಾಣ ಮತ್ತು ತಮಿಳುನಾಡಿನಲ್ಲಿ ಹಿಂದುಳಿದ ವರ್ಗದಲ್ಲಿ ಸೇರಿಸಲಾಗಿದೆ. ರಾಜ್ಯದಲ್ಲಿಯೂ ಸಮುದಾಯವನ್ನು 3ಎ ಪ್ರವರ್ಗದಿಂದ 2ಎ ಪ್ರವರ್ಗ ಪಟ್ಟಿಯಲ್ಲಿ ಸೇರಿಸಿ ಅಗತ್ಯ ಸೌಲಭ್ಯ ಕಲ್ಪಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

ಪ್ರತಿಭಟನೆಯಲ್ಲಿ ಮಾಜಿ ಶಾಸಕ ಎ.ಪಾಪಾರೆಡ್ಡಿ, ಆರ್‌ಡಿಎ ಅಧ್ಯಕ್ಷ ವೈ.ಗೋಪಾಲರೆಡ್ಡಿ, ಜಿಪಂ ಸದಸ್ಯ ಎನ್.ಕೇಶವರೆಡ್ಡಿ, ಸಮಾಜದ ಅಧ್ಯಕ್ಷ ಬೆಲ್ಲಂ ನರಸರೆಡ್ಡಿ, ಮುಖಂಡರಾದ ಜಿ.ಬಸವರಾಜ ರೆಡ್ಡಿ, ವಿ.ಲಕ್ಷ್ಮಿರೆಡ್ಡಿ, ನರಸರೆಡ್ಡಿ, ಗೋವಿಂದರೆಡ್ಡಿ, ರವೀಂದ್ರರೆಡ್ಡಿ, ಯು.ಲಿಂಗಾರೆಡ್ಡಿ ಹಾಗೂ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net