More

    ಹಿಂದುಳಿದ ವರ್ಗಗಳು ಒಗ್ಗೂಡಲಿ, ಮೋರ್ಚಾದ ಅಧ್ಯಕ್ಷ ನೆ.ಲ.ನರೇಂದ್ರಬಾಬು ಹೇಳಿಕೆ

    ರಾಯಚೂರು: ಹಿಂದುಳಿದ ವರ್ಗಗಳಲ್ಲಿ ಜಾಗೃತಿಯ ಅವಶ್ಯಕತೆಯಿದ್ದು, ಸಾಮಾಜಿಕವಾಗಿ ದುರ್ಬಲರಾಗಿದ್ದಾರೆ. ಆದ್ದರಿಂದ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ವತಿಯಿಂದ ಜಾಗೃತಿ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಮೋರ್ಚಾದ ಅಧ್ಯಕ್ಷ ನೆ.ಲ.ನರೇಂದ್ರಬಾಬು ಕರೆ ನೀಡಿದರು.

    ಸ್ಥಳೀಯ ಖಾಸಗಿ ಹೋಟೆಲ್‌ವೊಂದರಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಹಿಂದುಳಿದ ವರ್ಗಗಳ ಜಾಗೃತಿ ಸಮಾವೇಶದ ಪೂರ್ವಭಾವಿ ಸಭೆ ಉದ್ದೇಶಿಸಿ ಮಾತನಾಡಿದರು. ಪ್ರಧಾನಿ ನರೇಂದ್ರ ಮೋದಿ ಭಾರತ ದೇಶವನ್ನು ಜಗತ್ತಿನ ಎಲ್ಲ ದೇಶಗಳಿಗಿಂತ ಶ್ರೇಷ್ಠವಾದ ದೇಶವೆಂದು ತೋರಿಸಿಕೊಟ್ಟ ನಾಯಕರಾಗಿದ್ದಾರೆ.
    ಭ್ರಷ್ಟಾಚಾರ ಮುಕ್ತ ರಾಷ್ಟ್ರ, ಆತ್ಮ ನಿರ್ಭರ ಭಾರತ, ಅಗ್ನಿಪಥ ಯೋಜನೆ ಜಾರಿಗೆ ತರುವ ಮೂಲಕ ದೇಶದ ಸುರಕ್ಷತೆ ಕುರಿತು ಕಂಡ ದೊಡ್ಡ ಕನಸನ್ನು ಸಕಾರಗೊಳಿಸಿದ್ದಾರೆ. ಈ ನಿಟ್ಟಿನಲ್ಲಿ ದೇಶ ಹಾಗೂ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಬೇಕಾಗಿದೆ ಎಂದರು.

    ಹಿಂದುಳಿದ ವರ್ಗಗಳಲ್ಲಿ ಅತಿ ಹೆಚ್ಚು ಉಪ ಪಂಗಡಗಳು, ಜಾತಿಗಳು ಬರುತ್ತವೆ ಆದರೆ ಯಾವುದೇ ಕ್ಷೇತ್ರದಲ್ಲಿ ಪ್ರಾತಿನಿಧ್ಯತೆ ದೊರೆಯುತ್ತಿಲ್ಲ. ಕಾರ್ಯರ್ತರು ಅಧಿಕಾರ ಸಿಕ್ಕಿಲ್ಲವೆಂದು ಭರವಸೆಯನ್ನು ಕಳೆದುಕೊಳ್ಳದೇ ಪಕ್ಷ ಸಂಘಟನೆಯಲ್ಲಿ ತೊಡಗಬೇಕು. ಹಾಗೂ ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಕೈಜೋಡಿಸಬೇಕು ಎಂದು ತಿಳಿಸಿದರು.

    ಹಿಂದುಳಿದ ವರ್ಗಗಳನ್ನು ಒಗ್ಗೂಡಿಸುವ ನಿಟ್ಟಿನಲ್ಲಿ ಅ.30ರಂದು ಕಲಬುರಗಿಯಲ್ಲಿ ಸಮಾವೇಶ ಹಮ್ಮಿಕೊಳ್ಳಲಾಗಿದ್ದು, ಕಾರ್ಯಕರ್ತರು ಹಿಂದುಳಿದ ವರ್ಗಗಳ ಸಮುದಾಯದ ಜನರು ಈ ಸಮಾವೇಶದಲ್ಲಿ ಪಾಲ್ಗೊಂಡು ಜಾಗೃತರಾಗುವಂತೆ ಮನವಿ ಮಾಡಿದರು.

    ನಗರ ಶಾಸಕ ಡಾ.ಶಿವರಾಜ ಪಾಟೀಲ್ ಮಾತನಾಡಿ, ಹಿಂದುಳಿದ ವರ್ಗಗಳು ಸಮಾಜವನ್ನು ಒಟ್ಟುಗೂಡಿಸುವ ಕೆಲವನ್ನು ಮಾಡಬೇಕಾಗಿದೆ. ಈ ನಿಟ್ಟಿನಲ್ಲಿ ಬಿಜೆಪಿಯಿಂದ ಹಿಂದುಳಿದ ವರ್ಗಗಳ ಸಮಾವೇಶ ಹಮ್ಮಿಕೊಳ್ಳಲಾಗಿದ್ದು, ಸೂಚನೆ ನೀಡಿದರೆ ಸಮಾವೇಶಕ್ಕೆ ಜಿಲ್ಲೆಯಿಂದ ಅಧಿಕ ಜನರನ್ನು ಕರೆದುಕೊಂಡು ಬರಲಾಗುತ್ತದೆ ಎಂದರು.

    ಕಾರವಾರ ಶಾಸಕಿ ರೂಪಾಲಿ ನಾಯ್ಕ, ಬಿಜೆಪಿ ಜಿಲ್ಲಾಧ್ಯಕ್ಷ ರಮಾನಂದ ಯಾದವ, ಮಾಜಿ ಎಮ್.ಎಲ್.ಸಿ ಎನ್.ಶಂಕ್ರಪ್ಪ, ಬಾಬು ಪತ್ತಾರ, ಗುಡ್ಸಿ ನರಸರೆಡ್ಡಿ, ಬಿ.ಗೋವಿಂದ, ಕೆ.ಎಮ್ ಪಾಟೀಲ್, ಕಡಗೋಲ ರಾಮಚಂದ್ರ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts