ಬಿಸಿಎಂ ಇಲಾಖೆಗೆ ತಾಲೂಕು ಅಧಿಕಾರಿ ನೇಮಿಸಿ

ದಲಿತ ಸಂಘರ್ಷ ಸಮಿತಿ ಪದಾಧಿಕಾರಿಗಳ ಒತ್ತಾಯ

ರಾಯಚೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗೆ ತಾಲೂಕು ಅಧಿಕಾರಿ ನೇಮಕ ಮಾಡುವಂತೆ ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಪದಾಧಿಕಾರಿಗಳು ಜಿಲ್ಲಾಧಿಕಾರಿ ಕಚೇರಿ ಮುಂದೆ ಗುರುವಾರ ಪ್ರತಿಭಟನೆ ನಡೆಸಿ ಡಿಸಿ ಕಚೇರಿ ಕೇಂದ್ರ ಸ್ಥಾನಿಕ ಅಧಿಕಾರಿಗೆ ಮನವಿ ಸಲ್ಲಿಸಿದರು.

ತಾಲೂಕು ಅಧಿಕಾರಿ ಅಮಾನತಾಗಿ ವಾರ ಕಳೆದರೂ ಇಲಾಖೆ ಮುಖ್ಯಾಧಿಕಾರಿ ಆ ಸ್ಥಾನಕ್ಕೆ ಬೇರೊಬ್ಬ ಅಧಿಕಾರಿ ನೇಮಿಸಿಲ್ಲ. ಶಾಲೆ, ಕಾಲೇಜುಗಳು ಆರಂಭವಾಗಿ ಎರಡು ತಿಂಗಳು ಕಳೆದರೂ ವಸತಿ ನಿಲಯಗಳಿಗೆ ಮೂಲ ಸೌಕರ್ಯ ಕಲ್ಪಿಸುವಲ್ಲಿ ಇಲಾಖೆ ಅಧಿಕಾರಿಗಳು ವಿಫಲವಾಗಿದ್ದು, ಅಧಿಕಾರಿಗಳ ನೇಮಕ ವಿಚಾರದಲ್ಲಿ ವಿಳಂಬ ಧೋರಣೆ ಅನುಸರಿಸುತ್ತಿದ್ದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಕೂಡಲೆ ಅಧಿಕಾರಿ ನೇಮಕಕ್ಕೆ ಕ್ರಮಕೈಗೊಳ್ಳಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ. ಪದಾಧಿಕಾರಿಗಳಾದ ಎಂ.ಭರತಕುಮಾರ, ಎಸ್.ನರಸಿಂಹಲು, ಈಶ್ವರ್ ಮಡಿವಾಳ, ಎ.ರಾಮು, ಆನಂದ ಏಗನೂರು, ಎಂ.ಲಕ್ಷ್ಮಣ, ಹಂಪಾರೆಡ್ಡಿ, ತಾಯಪ್ಪ, ದೇವೇಂದ್ರ ಹಾಗೂ ಇತರರಿದ್ದರು.

Leave a Reply

Your email address will not be published. Required fields are marked *