More

    ‘ವಿಜಯ ಸಂಕಲ್ಪ’ ಯಶಸ್ವಿಗೊಳಿಸಿ, ಶಾಸಕ ಕೆ.ಶಿವನಗೌಡ ನಾಯಕ ಹೇಳಿಕೆ

    ರಾಯಚೂರು: ‘ನಮ್ಮ ನಡೆ ವಿಜಯದ ಕಡೆ’ ಸಂಕಲ್ಪವನ್ನೊತ್ತು ಬಿಜೆಪಿಯ ಎಲ್ಲ ಕಾರ್ಯಕರ್ತರು ಅ.11 ರಂದು ಜರುಗುವ ‘ವಿಜಯ ಸಂಕಲ್ಪ’ ಕಾರ್ಯಕ್ರಮ ಯಶಸ್ವಿಗೊಳಿಸಬೇಕು. ಈ ಕಾರ್ಯಕ್ರಮವನ್ನು ಇತಿಹಾಸ ಪುಟಗಳಲ್ಲಿ ದಾಖಲಾಗುವಂತೆ ಶ್ರಮಿಸಬೇಕು ಎಂದು ದೇವದುರ್ಗ ಶಾಸಕ ಕೆ.ಶಿವನಗೌಡ ನಾಯಕ ಹೇಳಿದರು.

    ನಗರದಲ್ಲಿ ಶನಿವಾರ ಕಾರ್ಯಕ್ರಮದ ಪೂರ್ವಭಾವಿ ಸಭೆ ಉದ್ಘಾಟಿಸಿ ಮಾತನಾಡಿದರು. ಬಿಜೆಪಿಯಿಂದ ಅ.11ರಂದು ನಡೆಯುವ ‘ವಿಜಯ ಸಂಕಲ್ಪ’ ಕಾರ್ಯಕ್ರಮ ಯಶಸ್ವಿಗೊಳಿಸಲು ಕಾರ್ಯಕರ್ತರು ಬೂತ್ ಮಟ್ಟದಿಂದ ಶ್ರಮಿಸಬೇಕು. 270 ಬೂತ್‌ಗಳಲ್ಲಿ ಪ್ರತಿ ಬೂತ್‌ನಿಂದ 300 ಜನರನ್ನು ಸೇರಿಸುವ ಸಂಕಲ್ಪ ಮಾಡಬೇಕೆಂದರು.

    ಕಾಂಗ್ರೆಸ್‌ನಿಂದ ನಡೆಯುತ್ತಿರುವ ಭಾರತ ಜೋಡೋ ಯಾತ್ರೆ ಹಾಸ್ಯಾಸ್ಪದವಾಗಿದೆ. ತಾತ ಜವಹಾರಲಾಲ್ ನೆಹರು ಭಾರತವನ್ನು ಮುರಿದಿದ್ದರು. ಇದೀಗ ಮೊಮ್ಮೊಗ ರಾಹುಲ್ ಗಾಂಧಿ ಜೋಡಿಸಲು ಪ್ರಯತ್ನಿಸುತ್ತಿದ್ದಾನೆ ಎಂದು ವ್ಯಂಗ್ಯವಾಡಿದರು.

    40 ವರ್ಷಗಳಿಂದ ಎಸ್‌ಸಿ, ಎಸ್‌ಟಿ ಮೀಸಲಾತಿ ಸಿಗದೆ ಸಮುದಾಯದವರು ಸಂಕಷ್ಟ ಅನುಭವಿಸುತ್ತಿದ್ದರು. ಇದೀಗ ರಾಜ್ಯ ಸರ್ಕಾರ ಮೀಸಲಾತಿ ಹೆಚ್ಚಳ ಮಾಡಿದೆ. ಯಾವುದೇ ಪಕ್ಷ ಅಥವಾ ರಾಜಕಾರಣಿ ಮಾಡದ ಸಾಧನೆಯನ್ನು ಬೊಮ್ಮಾಯಿ ಮಾಡಿದ್ದಾರೆ. ಅಭಿವೃದ್ದಿಗೆ ಹೆಚ್ಚು ಒತ್ತು ನೀಡುವ ನಿಟ್ಟಿನಲ್ಲಿ ಜಿಲ್ಲೆಯ ಪ್ರತಿ ಗ್ರಾಪಂನಲ್ಲಿ 200 ಮನೆಗಳನ್ನು ನಿರ್ಮಾಣ ಮಾಡಲಾಗುವುದು. ಈಗಾಗಲೇ ಜಿಲ್ಲೆಯಲ್ಲಿ ಒಂದು ಲಕ್ಷಕ್ಕೂ ಹೆಚ್ಚಿನ ಕಾರ್ಯಕರ್ತರು ಬಿಜೆಪಿ ಸೇರುತ್ತಿದ್ದಾರೆ. ಜಿಲ್ಲೆಯ ಏಳು ಕ್ಷೇತ್ರಗಳನ್ನು ಗೆಲ್ಲುವುದಾಗಿ ಕಾಂಗ್ರೆಸ್ ಹೇಳುತ್ತಿದೆ. ಏಳು ಕ್ಷೇತ್ರವಲ್ಲ ಕೇವಲ ಮೂರು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದರೆ ಸಾಣು ನನ್ನ ಅರ್ಧ ಮೀಸೆ ತೆಗೆಯುವುದಾಗಿ ಶಾಸಕ ಕೆ.ಶಿವನಗೌಡ ನಾಯಕ ಸವಾಲು ಹಾಕಿದರು.

    ಇದೇ ವೇಳೆ ಮಾಜಿ ಗ್ರಾಮೀಣ ಶಾಸಕ ತಿಪ್ಪರಾಜು ಹವಾಲ್ದಾರ ಮಾತನಾಡಿ, ಅ.11ರಂದು ಜಿಲ್ಲೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಆಗಮಿಸಲಿದ್ದಾರೆ. ಅಂದು ನಡೆಯುವ ‘ವಿಜಯ ಸಂಕಲ್ಪ’ ಯಾತ್ರೆಗೆ 50 ಸಾವಿರ ಜನರು ಸೇರಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು. 150 ಸ್ಥಾನಗಳನ್ನು ಗೆಲ್ಲುವ ಸಂಕಲ್ಪ ಬಿಜೆಪಿ ಮಾಡಿದ್ದು, ಎರಡು ದಿನದಲ್ಲಿ 50 ಸಾವಿರ ಜನರನ್ನು ಸೇರಿಸುವುದಾಗಿ ಮುಖ್ಯಮಂತ್ರಿಗೆ ಭರವಸೆ ನೀಡಲಾಗಿದೆ. ಈ ನಿಟ್ಟಿನಲ್ಲಿ ಕಾರ್ಯಕರ್ತರ ಜನರನ್ನು ಒಗ್ಗೂಡಿಸುವಲ್ಲಿ ಶ್ರಮ ವಹಿಸಬೇಕು ಎಂದು ಹೇಳಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts