More

    ಮುಕ್ತ ವಿವಿಯಿಂದ ಪ್ರತಿ ಜಿಲ್ಲೇಲಿ ಪ್ರಾದೇಶಿಕ ಕೇಂದ್ರ

    ರಾಯಚೂರು: ಹೆಚ್ಚಿನ ವಿದ್ಯಾರ್ಥಿಗಳಿಗೆ ಮುಕ್ತ ವಿವಿ ಪ್ರಯೋಜನ ದೊರೆಯುವ ನಿಟ್ಟಿನಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ವಿವಿಯ ಪ್ರಾದೇಶಿಕ ಕೇಂದ್ರಗಳನ್ನು ಆರಂಭಿಸಲು ಯೋಜಿಸಲಾಗಿದೆ ಎಂದು ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿವಿ ಕುಲಪತಿ ಡಾ.ಶರಣಪ್ಪ ಹಲಸೆ ತಿಳಿಸಿದರು.

    ಸ್ಥಳೀಯ ಪತ್ರಿಕಾಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಸೋಮವಾರ ಮಾತನಾಡಿ, ರಾಜ್ಯದಲ್ಲಿ 23 ಪ್ರಾದೇಶಿಕ ಕೇಂದ್ರಗಳು ಹಾಗೂ 149 ಕಲಿಕಾ ಕೇಂದ್ರಗಳಿದ್ದು, ಉತ್ತರ ಕರ್ನಾಟಕ ಭಾಗದಲ್ಲಿ ಪ್ರಾದೇಶಿಕ ಮತ್ತು ಕಲಿಕಾ ಕೇಂದ್ರಗಳು ಕಡಿಮೆಯಿರುವುದರಿಂದ ಈ ಭಾಗಕ್ಕೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ ಎಂದರು.

    ವಿವಿಯಲ್ಲಿ ಪ್ರಸ್ತುತ 64 ಕೋರ್ಸ್‌ಗಳಿದ್ದು, ಅದರ ಜತೆಗೆ ಹೊಸದಾಗಿ ಎಂಎಸ್‌ಡಬ್ಲುೃ, ಪ್ರವಾಸೋದ್ಯಮ, ಭೂ ವಿಜ್ಞಾನ ಸೇರಿ ಒಟ್ಟು 10 ಕೋರ್ಸ್‌ಗಳನ್ನು ಪ್ರಸಕ್ತ ವರ್ಷದಿಂದ ಆರಂಭಿಸಲಾಗುತ್ತಿದೆ. ಒಂದು ಲಕ್ಷ ಪ್ರವೇಶಾತಿ ಗುರಿ ಮುಟ್ಟಲು ಅಭಿಯಾನ ಆರಂಭಿಸಲಾಗಿದೆ. ಬಹುತೇಕ ಪ್ರಾದೇಶಿಕ ಕೇಂದ್ರಗಳಿಗೆ ಸ್ವಂತ ಕಟ್ಟಡವಿಲ್ಲ. ಈ ನಿಟ್ಟಿನಲ್ಲಿ ಶಾಸಕರ ಅನುದಾನ, ವಿವಿಧ ಆರ್ಥಿಕ ಸಂಪನ್ಮೂಲ ಕ್ರೋಡೀಕರಿಸಿ ಸ್ವಂತ ಕಟ್ಟಡ ನಿರ್ಮಾಣ ಮಾಡಲು 14 ಜಿಲ್ಲಾಧಿಕಾರಿಗೆ ನಿವೇಶನ ನೀಡುವಂತೆ ಪತ್ರ ಬರೆಯಲಾಗಿದೆ. ಜತೆಗೆ ನ್ಯಾಟ್ ಮಾನ್ಯತೆಗೆ ಅರ್ಜಿ ಸಲ್ಲಿಸಲಾಗಿದೆ ಎಂದು ತಿಳಿಸಿದರು.

    ಪ್ರಾಯೋಗಿಕ ಪರೀಕ್ಷೆ ಮತ್ತು ಪರೀಕ್ಷೆಗಳಿಗೆ ವಿದ್ಯಾರ್ಥಿಗಳು ಮೈಸೂರಿಗೆ ಬರುವುದನ್ನು ತಪ್ಪಿಸುವ ನಿಟ್ಟಿನಲ್ಲಿ ಖಾಸಗಿ ಕಾಲೇಜುಗಳೊಂದಿಗೆ ಒಪ್ಪಂದ ಮಾಡಿಕೊಂಡು ಸ್ಥಳೀಯವಾಗಿ ಪ್ರಾಯೋಗಿಕ ಪರೀಕ್ಷೆ ನಡೆಸಲು ಉದ್ದೇಶಿಸಲಾಗಿದೆ. ಬಿಪಿಎಲ್ ಕಾರ್ಡ್ ಹೊಂದಿದ ವಿದ್ಯಾರ್ಥಿನಿಯರಿಗೆ ಹಾಗೂ ಮಾಜಿ ಸೈನಿಕರು, ಆಟೋ ಚಾಲಕರ ಮಕ್ಕಳಿಗೆ ಶುಲ್ಕದಲ್ಲಿ ರಿಯಾಯಿತಿ ನೀಡಲಾಗುತ್ತಿದೆ ಎಂದು ಡಾ.ಶರಣಪ್ಪ ಹಲಸೆ ತಿಳಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts