More

    ಚನ್ನಮ್ಮಳ ಧೈರ್ಯ ಮಹಿಳೆರಿಗೆ ಪ್ರೇರಣಾದಾಯಕವಾಗಿದೆ ಎಂದ ತಹಸೀಲ್ದಾರ್ ಡಾ.ಹಂಪಣ್ಣ ಸಜ್ಜನ್

    ರಾಯಚೂರು: ಕಿತ್ತೂರು ರಾಣಿ ಚನ್ನಮ್ಮ ಬ್ರಿಟೀಷರ ವಿರುದ್ಧದ ಹೋರಾಟದ ಸಂದರ್ಭದಲ್ಲಿ ತೋರಿದ ಧೈರ್ಯ, ಸಾಹಸ ನಾಡಿನ ಪ್ರತಿಯೊಬ್ಬ ಮಹಿಳೆಯರಿಗೂ ಪ್ರೇರಣಾದಾಯಕವಾಗಿದ್ದು, ಅಂತಹ ಧೈರ್ಯವನ್ನು ಎಲ್ಲ ಮಹಿಳೆಯರೂ ಮೈಗೂಡಿಸಿಕೊಳ್ಳಬೇಕು ಎಂದು ತಹಸೀಲ್ದಾರ್ ಡಾ.ಹಂಪಣ್ಣ ಸಜ್ಜನ್ ಹೇಳಿದರು.

    ಸ್ಥಳೀಯ ಪಂ.ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಜಿಲ್ಲಾಡಳಿತದಿಂದ ಶನಿವಾರ ಏರ್ಪಡಿಸಿದ್ದ ಕಿತ್ತೂರು ರಾಣಿ ಚನ್ನಮ್ಮ ಜಯಂತಿಯನ್ನು ಉದ್ಘಾಟಿಸಿ ಮಾತನಾಡಿ, ಮಹಿಳೆಯರು ಸ್ವಾವಲಂಬಿಗಳಾಗಿ ಶೋಷಣೆ ಮತ್ತು ಅನ್ಯಾಯದ ವಿರುದ್ಧ ಹೋರಾಟ ಮಾಡುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದರು.

    ಚನ್ನಮ್ಮ್ಮ ತನ್ನ ರಾಜ್ಯದ ರಕ್ಷಣೆಗಾಗಿ ಬ್ರಿಟೀಷರ ವಿರುದ್ಧ ಹೋರಾಡಿದ ಮೊದಲ ಮಹಿಳೆಯಾಗಿದ್ದು, ಆಕೆಯ ಕೆಚ್ಚೆದೆಯ ಹೋರಾಟ ಮಹಿಳೆಯರಿಗೆ ಸ್ಪೂರ್ತಿದಾಯಕವಾಗಿದೆ. ಪುರುಷರಿಗಿಂತ ಮಹಿಳೆ ಯಾವುದರಲ್ಲೂ ಕಡಿಮೆಯಿಲ್ಲ ಎನ್ನುವುದನ್ನು ತೋರಿಸಿಕೊಂಡ ಧೀಮಂತೆ ಚನ್ನಮ್ಮ ಎಂದು ಡಾ.ಹಂಪಣ್ಣ ಸಜ್ಜನ್ ಹೇಳಿದರು.

    ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಧ್ಯಾಪಕ ಡಾ.ದಸ್ತಗೀರಸಾಬ್ ದಿನ್ನಿ ಮಾತನಾಡಿ, ಬ್ರಿಟಿಷರು ಜಾರಿಗೊಳಿಸಿದ್ದ ದತ್ತು ಮಕ್ಕಳಿಗೆ ಹಕ್ಕಿಲ್ಲ ಎಂಬ ಕಾಯ್ದೆಯನ್ನು ವಿರೋಧಿಸಿ ರಾಣಿ ಚನ್ನಮ್ಮ ಬ್ರಿಟಿಷರಿಗೆ ಸಲ್ಲಿಸಬೇಕಾಗಿದ್ದ ಕಪ್ಪ ಕಾಣಿಕೆಯನ್ನು ಕೊಡಲು ನಿರಾಕರಿಸಿದ ವೀರ ಮಹಿಳೆಯಾಗಿದ್ದಾರೆ ಎಂದು ತಿಳಿಸಿದರು.

    ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಮಂಗಳಾ ನಾಯಕ, ಶಿಕ್ಷಕ ಮುರಳೀಧರ ಕುಲಕರ್ಣಿ, ಮುಖಂಡ ವೀರೇಶಗೌಡ ಹಾಗೂ ಕಾಲೇಜು ವಿದ್ಯಾರ್ಥಿಗಳು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts