More

    ಮಕ್ಕಳ ಮೇಲಿನ ದೌರ್ಜನ್ಯ ತಡೆಗೆ ಮುಂಜಾಗ್ರತೆ ಅಗತ್ಯ

    ರಾಯಚೂರು: ಮಕ್ಕಳ ಹಕ್ಕುಗಳ ರಕ್ಷಣೆಗೆ ಅಧಿಕಾರಿಗಳ ಜತೆಗೆ ಸಮುದಾಯದ ಸಹಭಾಗಿತ್ವ ಅತ್ಯಗತ್ಯ ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಕೆ.ನಾಗಣ್ಣ ಗೌಡ ತಿಳಿಸಿದರು.

    ಜಿ.ಪಂ. ಸಭಾಂಗಣದಲ್ಲಿ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದಿಂದ ಸೋಮವಾರ ಏರ್ಪಡಿಸಿದ್ದ ಮಕ್ಕಳ ಕುಂದುಕೊರತೆ ವಿಚಾರಣೆ ಮತ್ತು ಪರಿಹಾರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮಕ್ಕಳು, ಪರಿಸರ, ನೀರು ರಾಷ್ಟ್ರದ ಆಸ್ತಿಗಳಾಗಿವೆ. ಅವುಗಳನ್ನು ರಕ್ಷಣೆ ಮಾಡಬೇಕಾಗಿರುವುದು ನಮ್ಮೆಲ್ಲರ ಕರ್ತವ್ಯ. ಮಕ್ಕಳ ಮೇಲಿನ ದೌರ್ಜನ್ಯ ತಡೆಯಲು ಮುಂಜಾಗ್ರತೆ ವಹಿಸಬೇಕಾಗಿದೆ. ಮಕ್ಕಳಿಗೆ ಕರ್ತವ್ಯ, ಜವಾಬ್ದಾರಿಯನ್ನು ಪಾಲಕರು ಮತ್ತು ಶಿಕ್ಷಕರು ಕಲಿಸಬೇಕಾಗಿದೆ ಎಂದು ಹೇಳಿದರು.

    ಆಯೋಗದ ರಾಷ್ಟ್ರೀಯ ಸದಸ್ಯ ಕಾರ್ಯದರ್ಶಿ ರೂಪಾಲಿ ಬ್ಯಾನರ್ಜಿ ಮಾತನಾಡಿ, ಮಕ್ಕಳು ಸಲ್ಲಿಸುವ ದೂರುಗಳನ್ನು ಕಾಲಮಿತಿಯಲ್ಲಿ ಇತ್ಯರ್ಥಪಡಿಸದಿದ್ದರೆ ಆಯೋಗದಿಂದ ಕ್ರಮಕೈಗೊಳ್ಳಲಾಗುವುದು. ಅಧಿಕಾರಿಗಳು ಜವಾಬ್ದಾರಿಯುತವಾಗಿ ಕೆಲಸ ನಿರ್ವಹಿಸಬೇಕು ಎಂದು ತಿಳಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts