ಅಂಗನವಾಡಿ ಮಕ್ಕಳಿಗೆ ಕೊಳೆತ ಮೊಟ್ಟೆ ವಿತರಣೆ

ರಾಯಚೂರು: ದೇವದುರ್ಗ ತಾಲೂಕಿನ ಜಾಲಹಳ್ಳಿಯ ಕಬ್ಬೇರ ಓಣಿಯ 4ನೇ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳಿಗೆ ಕೊಳೆತ ಮೊಟ್ಟೆ ವಿತರಿಸಲಾಗುತ್ತಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಅಪೌಷ್ಟಿಕತೆ ನಿವಾರಣೆ ನಿಟ್ಟಿನಲ್ಲಿ ಅಂಗನವಾಡಿ ಮಕ್ಕಳಿಗೆ ಮೊಟ್ಟೆ ವಿತರಿಸುವ ಯೋಜನೆ ಜಾರಿಗೊಳಿಸಿದ್ದರೂ ಅವಧಿ ಮೀರಿದ ಕೊಳೆತ ಮೊಟ್ಟೆ ವಿತರಣೆ ಮಾಡುತ್ತಿದ್ದರಿಂದ ಮಕ್ಕಳಿಗೆ ಸೌಲಭ್ಯ ದೊರೆಯದಂತಾಗಿದೆ. ಮಹಿಳಾ ಸ್ವಸಹಾಯ ಸಂಘದಿಂದ ಜ.7ರಂದು ಸರಬರಾಜು ಮಾಡಿರುವ ಮೊಟ್ಟೆಗಳು ಅಂಗನವಾಡಿಯಲ್ಲಿ ಉಳಿದಿದ್ದು, ಕೆಲ ಮೊಟ್ಟೆಗಳು ಕೊಳೆತರೆ, ಇನ್ನೂ ಕೆಲ ಮೊಟ್ಟೆಗಳಲ್ಲಿ ಮರಿಗಳಿವೆ. ಈ ಕುರಿತು ಅಧಿಕಾರಿಗಳು ಹಾಗೂ ಅಂಗನವಾಡಿ ಮೇಲ್ವಿಚಾರಕರು ನಿರ್ಲಕ್ಷೃ ವಹಿಸಿದ್ದಾರೆ ಎಂದು ದೂರಿದ್ದಾರೆ.

ಕೆಲ ದಿನಗಳಿಂದ ಅಂಗನವಾಡಿಯಲ್ಲಿ ಮಕ್ಕಳಿಗೆ ಕೊಳೆತ ಮೊಟ್ಟೆ ವಿತರಿಸಲಾಗುತ್ತಿದೆ. ಅಂಗನವಾಡಿಯಲ್ಲಿ ಸ್ವಚ್ಛತೆ ಕಾಪಾಡುತ್ತಿಲ್ಲ. ಇದರಿಂದ ಮಕ್ಕಳನ್ನು ಕಳುಹಿಸಲು ಹಿಂಜರಿಯುವಂತಾಗಿದೆ.
| ಶಿವಪ್ಪ, ಸ್ಥಳೀಯ, ಜಾಲಹಳ್ಳಿ