More

    ಕಾರ್ಮಿಕರ ಇಪ್ಪತೈದು ಬೇಡಿಕೆಗಳ ಪ್ರಣಾಳಿಕೆ ಬಿಡುಗಡೆ

    ರಾಯಚೂರು: ನಗರದ ಸಿಐಟಿಯು ಕಚೇರಿಯಲ್ಲಿ ವಿಶ್ವ ಕಾರ್ಮಿಕರ ದಿನದ ನಿಮಿತ್ತ ಸೋಮವಾರ ಗುತ್ತಿಗೆ ಪದ್ಧತಿ ರದ್ದು ಸೇರಿ 25 ಬೇಡಿಕೆಗಳ ಪ್ರಣಾಳಿಕೆಯನ್ನು ಬಿಡುಗಡೆಗೊಳಿಸಲಾಯಿತು.

    ಸಿಐಟಿಯು ಜಿಲ್ಲಾ ಕಾರ್ಯದರ್ಶಿ ಡಿ.ಎಸ್.ಶರಣಬಸವ, ಕಾರ್ಮಿಕ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ವಿಧಾನಸಭೆ ಚುನಾವಣೆಯಲ್ಲಿ ಕಾರ್ಮಿಕರು ಜಾತ್ಯತೀತ ಅಭ್ಯರ್ಥಿಗಳನ್ನು ಬೆಂಬಲಿಸಬೇಕು. ಕಾರ್ಮಿಕರ ಪರ ಕೆಲಸ ಮಾಡುವ ಅಭ್ಯರ್ಥಿಗಳಿಗೆ ಮಾತ್ರ ಮತ ನೀಡಬೇಕು ಎಂದರು.

    ಜಾತ್ಯತೀತ ಶಕ್ತಿಗಳನ್ನು ಗೆಲ್ಲಿಸಿ

    ಸಂವಿಧಾನದ ಆಶಯಗಳಿಗೆ ಧಕ್ಕೆ ತರುತ್ತಿರುವ ಕೋಮು ಶಕ್ತಿಗಳನ್ನು ಸೋಲಿಸಿ ಜಾತ್ಯತೀತ ಶಕ್ತಿಗಳನ್ನು ಗೆಲ್ಲಿಸುವ ಮೂಲಕ ದೇಶದಲ್ಲಿ ಶಾಂತಿ, ಸೌಹಾರ್ದ, ಸಾಮರಸ್ಯ ಕಾಪಾಡಲು ಕಾರ್ಮಿಕರು ಮುಂದಾಗಬೇಕು ಎಂದು ಹೇಳಿದರು.

    ಇದನ್ನೂ ಓದಿ: ಕೋಮು ಪ್ರಚೋದನೆ ಸಿದ್ದರಾಮಯ್ಯ ಕಾರಣ

    ಜಿಲ್ಲಾ ಉಪಾಧ್ಯಕ್ಷ ಪ್ರವೀಣರೆಡ್ಡಿ ಗುಂಜಳ್ಳಿ ಪ್ರಣಾಳಿಕೆ ಬಿಡುಗಡೆಗೊಳಿಸಿ ಮಾತನಾಡಿ, ಕೆಲಸದ ಅವಧಿ ಹೆಚ್ಚಳ ಮಾಡಿರುವುದನ್ನು ವಾಪಸ್ ಪಡೆಯಬೇಕು. ಕಾರ್ಮಿಕ ವಿರೋಧಿ ಕಾನೂನು ಹಿಂಪಡೆಯಬೇಕು. ಅಗತ್ಯ ವಸ್ತುಗಳ ಬೆಲೆ ಏರಿಕೆಗೆ ಕಡಿವಾಣ ಹಾಕಬೇಕು. ಗುತ್ತಿಗೆ ಪದ್ಧತಿ ರದ್ದುಗೊಳಿಸಬೇಕು ಎಂದು ಒತ್ತಾಯಿಸಿದರು.

    ಸಿಐಟಿಯು ಜಿಲ್ಲಾಧ್ಯಕ್ಷೆ ಎಚ್.ಪದ್ಮಾ, ವಿಮಾ ನೌಕರರ ಸಂಘದ ಮಾಜಿ ಅಧ್ಯಕ್ಷ ಎಂ.ರವಿ, ವಿವಿಧ ಸಂಘಟನೆ ಪದಾಧಿಕಾರಿಗಳಾದ ಕರಿಯಪ್ಪ ಅಚ್ಚೊಳ್ಳಿ, ಕೆ.ಜಿ.ವೀರೇಶ, ಗುರುರಾಜ ದೇಸಾಯಿ, ಶರಣಪ್ಪ, ವರಲಕ್ಷ್ಮೀ, ಶಿವಕುಮಾರ ಸ್ವಾಮಿ, ಗೋಕುರಮ್ಮ, ಮಹಾಂತಯ್ಯ ಸ್ವಾಮಿ, ಜಿಲಾನಿ ಪಾಷಾ, ಅಕ್ಕಮಹಾದೇವಿ, ಕಲ್ಯಾಣಮ್ಮ ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts