More

    ನಿರಂತರ ಪರಿಶ್ರಮದಿಂದ ಗುರಿ ಸಾಧನೆ- ನಿವೃತ್ತ ಪ್ರಾಚಾರ್ಯ ಪರಮೇಶ್ವರ ಸಾಲಿಮಠ ಅಭಿಮತ

    ರಾಯಚೂರು: ಯಾವುದೇ ಕ್ಷೇತ್ರದಲ್ಲಿ ಹಾಕಿಕೊಂಡ ಗುರಿ ಮುಟ್ಟಲು ನಿರಂತರ ಪರಿಶ್ರಮ ಅಗತ್ಯ. ವಿದ್ಯಾರ್ಥಿಗಳು ನಿರಂತರ ಪರಿಶ್ರಮದ ಮೂಲಕ ತಮ್ಮ ಅಭ್ಯಾಸದಲ್ಲಿ ಯಶಸ್ಸು ಸಾಧಿಸಲು ಸಾಧ್ಯ ಎಂದು ನಿವೃತ್ತ ಪ್ರಾಚರ್ಯ ಪರಮೇಶ್ವರ ಸಾಲಿಮಠ ಹೇಳಿದರು.

    ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಸೋಮವಾರ ಆಯೋಜಿಸಿದ್ದ ಕ್ರೀಡಾ ಸಾಂಸ್ಕೃತಿಕ, ಎನ್ನೆಸ್ಸೆಸ್, ರೆಡ್ ಕ್ರಾಸ್ ಹಾಗೂ ವಿವಿಧ ಕಾರ್ಯ ಚಟುವಟಿಕೆಗಳ ಉದ್ಘಾಟನಾ ಸಮಾರಂಭ ಹಾಗೂ ಪ್ರಥಮ ವರ್ಷದ ವಿದ್ಯಾರ್ಥಿನಿಯರಿಗೆ ಸ್ವಾಗತ ಸಮಾರಂಭ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿನಿಯರು ಜೀವನದಲ್ಲಿ ಮುಂದೆ ಬರಬೇಕಾದರೆ ಕಷ್ಟಪಟ್ಟು ಅಧ್ಯಯನ ಮಾಡಬೇಕು. ಇಂದು ಯುವಜನತೆಗೆ ನಾನಾ ಅವಕಾಶಗಳಿದ್ದು, ಅವುಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.

    ಕಾಲೇಜು ಪ್ರಾಚಾರ್ಯ ಡಾ.ಪ್ರಸನ್ನಕುಮಾರ, ಸಾಂಸ್ಕೃತಿಕ ಸಂಚಾಲಕ ಪ್ರೊ.ಶರಣಗೌಡ ಕೆ., ಐಕ್ಯೂಎಸಿ ಸಂಯೋಜಕಿ ಡಾ.ಜ್ಯೋತಿ, ರೆಡ್‌ಕ್ರಾಸ್ ಸಂಯೋಜಕಿ ಉಮಾದೇವಿ, ಎನ್ನೆಸ್ಸೆಸ್ ಅಧಿಕಾರಿ ಡಾ.ಸಂತೋಷಕುಮಾರ, ಕಾರ್ಯದರ್ಶಿ ಡಾ.ಸುಗುಣಾ ಬಸವರಾಜ, ಡಾ.ಸೈಯದ ರಶೀದಾ ಪರ್ವೀನ್, ಡಾ.ಸ್ವರೂಪರಾಣಿ, ಡಾ.ಮಲ್ಲಯ್ಯ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts