More

    ನಿರಂತರವಾಗಿರಲಿ ಪೋಷಣ್ ಅಭಿಯಾನ, ಡಿಎಚ್‌ಒ ಡಾ.ಸುರೇಂದ್ರ ಬಾಬು ಸಲಹೆ

    ರಾಯಚೂರು: ಮಕ್ಕಳು ಹಾಗೂ ಗರ್ಭಿಣಿಯರಿಗೆ ಪೌಷ್ಟಿಕತೆಯ ಕೊರತೆಯಾಗದಂತೆ ನೋಡಿಕೊಳ್ಳುವ ನಿಟ್ಟಿನಲ್ಲಿ ಪೋಷಣ್ ಮಾಸಾಚರಣೆ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಅಭಿಯಾನ ತಿಂಗಳಿಗಷ್ಟೇ ಸೀಮಿತವಾಗದೆ ನಿರಂತರವಾಗಿರಬೇಕೆಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸುರೇಂದ್ರಬಾಬು ಹೇಳಿದರು.

    ನಗರದ ಪಂಡಿತ್ ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಜಿಲ್ಲಾಡಳಿತದಿಂದ ಬುಧವಾರ ಹಮ್ಮಿಕೊಂಡಿದ್ದ ಪೋಷಣ್ ಅಭಿಯಾನ ಮಾಸಾಚರಣೆಯ ಸಮಾರೋಪ ಸಮಾರಂಭ ಉದ್ಘಾಟಿಸಿ ಮಾತನಾಡಿ, ಜಿಲ್ಲೆಯಲ್ಲಿ ಅಪೌಷ್ಟಿಕತೆ ನಿರ್ಮೂಲನೆಗೊಳಿಸಲು ಇಲಾಖೆಯಿಂದ ಹಲವು ಕಾರ್ಯಕ್ರಮ ಜಾರಿಗೆ ತರಲಾಗಿದೆ. ಶೇ.5 ಮಕ್ಕಳು ಹಾಗೂ ಮಹಿಳೆಯರ ಅಪೌಷ್ಟಿಕತೆ ತಗ್ಗಿಸಲಾಗಿದೆ. ಸೂಕ್ತ ಪ್ರಮಾಣದಲ್ಲಿ ಆಹಾರ ನೀಡಿದಲ್ಲಿ ಮೂರೇ ತಿಂಗಳಲ್ಲಿ ಶೇ.50 ಅಪೌಷ್ಟಿಕತೆ ಕಡಿಮೆ ಮಾಡಬಹುದಾಗಿದೆ ಎಂದರು.

    ಮಕ್ಕಳಲ್ಲಿ ಹಾಗೂ ಗರ್ಭಿಣಿಯರಲ್ಲಿ ಸಮತೋಲನದ ಆಹಾರ ಕೊರತೆಯಿದ್ದು, ಅಂಗನವಾಡಿ ಕಾರ್ಯಕರ್ತೆಯರು ಸರಿಯಾದ ರೀತಿಯಲ್ಲಿ ಪೌಷ್ಟಿಕಾಂಶಯುಕ್ತ ಆಹಾರವನ್ನು ನೀಡುವುದರಿಂದ ಈ ಕೊರತೆಯನ್ನು ನೀಗಿಸಬಹುದಾಗಿದೆ ಎಂದು ಹೇಳಿದರು.

    ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಎಂ.ಎಸ್.ಚೇತನಕುಮಾರ ಪ್ರಾಸ್ತಾವಿಕವಾಗಿ ಮಾತನಾಡಿ, ದೇಶ ಮುಂದುವರಿಯಲು ಪೌಷ್ಟಿಕತೆ ಅತ್ಯಂತ ಮುಖ್ಯ. ಸೆ.1ರಿಂದ 7ರವರೆಗೆ ಪೋಷಣೆಯ ವಾರ ಎಂದು ಆಚರಿಸಲಾಗಿದ್ದು, ಅದರ ಮುಂದಿನ ಭಾಗವಾಗಿ ಪೋಷಣ್ ಅಭಿಯಾನ ಮಾಸಾಚರಣೆ ಹಮ್ಮಿಕೊಳ್ಳಲಾಗಿದೆ ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts