More

    ರೈತರು, ಸಾರ್ವಜನಿಕರ ಅನುಕೂಲಕ್ಕಾಗಿ ಸಾರಿಗೆ ಇಲಾಖೆಯಿಂದ ಸಹಾಯವಾಣಿ ವ್ಯವಸ್ಥೆ : ಡಿಸಿಎಂ ಲಕ್ಷ್ಮಣ ಸವದಿ ಹೇಳಿಕೆ

    ಪಾಸಿಟೀವ್ ಇಲ್ಲದ ಜಿಲ್ಲೆಗಳಲ್ಲಿ ಲಾಕ್‌ಡೌನ್ ಸಡಿಲಿಕೆ

    ರಾಯಚೂರು: ಕರೊನಾ ಹಿನ್ನೆಲೆಯಲ್ಲಿ ಸಮಸ್ಯೆ ಎದುರಿಸುತ್ತಿರುವ ರೈತರು ಹಾಗೂ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಸಾರಿಗೆ ಇಲಾಖೆಯಿಂದ ಸಹಾಯವಾಣಿ (080-22236698 ಅಥವಾ 9449863214) ಆರಂಭಿಸಲಾಗಿದೆ. ರೈತರು ತಮ್ಮ ತೋಟಗಾರಿಕೆ ಮುಂತಾದ ಉತ್ಪನ್ನಗಳನ್ನು ಸಾಗಿಸಲು ಸಮಸ್ಯೆಯಿದ್ದಲ್ಲಿ ಸಹಾಯವಾಣಿಗೆ ಸಂಪರ್ಕಿಸಿ ಅನುಕೂಲ ಪಡೆಬಹುದಾಗಿದೆ ಎಂದು ಉಪ ಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಲಕ್ಷ್ಮಣ ಸವದಿ ತಿಳಿಸಿದರು.

    ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಪಾಸಿಟಿವ್ ಕೇಸ್‌ಗಳು ಇರಲಿಲ್ಲ. ಆದರೆ, ಅಂಥ ಜಿಲ್ಲೆಗಳಲ್ಲೂ ಪಾಸಿಟಿವ್ ಕೇಸ್‌ಗಳು ಬೆಳಕಿಗೆ ಬರುತ್ತಿವೆ. ರಾಯಚೂರು ಜಿಲ್ಲೆಯಲ್ಲಿ ಪಾಸಿಟಿವ್ ಕೇಸ್‌ಗಳು ಇರದಿರುವುದು ಸಮಾಧಾನ. ಆದರೆ, ಪಕ್ಕದ ತೆಲಂಗಾಣ, ಆಂಧ್ರಪ್ರದೇಶದಲ್ಲಿ ಹೆಚ್ಚಿನ ಪಾಸಿಟಿವ್ ಕೇಸ್‌ಗಳು ದಾಖಲಾಗುತ್ತಿರುವುದರಿಂದ ಪ್ರಮುಖ ರಸ್ತೆಗಳನ್ನು ಬಂದ್ ಮಾಡಲಾಗಿದೆ. ಆದರೂ ಇನ್ನಷ್ಟು ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕಾಗಿದೆ ಎಂದರು.

    ಪ್ರಧಾನಿ ಮೋದಿಯವರು ಎಲ್ಲ ರಾಜ್ಯದ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿದ್ದು, ಲಾಕ್‌ಡೌನ್ ಮುಂದುವರಿಸುವ ಅಭಿಪ್ರಾಯ ವ್ಯಕ್ತವಾಗಿದೆ. ಈ ಬಗ್ಗೆ ಮಂಗಳವಾರ ತೀರ್ಮಾನವನ್ನು ಪ್ರಧಾನಿಗಳು ತೆಗೆದುಕೊಳ್ಳಲಿದ್ದಾರೆ. ಲಾಕ್‌ಡೌನ್ ಎಲ್ಲಿ ಮಾಡಬೇಕು, ಎಲ್ಲಿ ಮಾಡಬೇಕು ಎನ್ನುವ ಚರ್ಚೆ ನಡೆಯುತ್ತಿದೆ ಎಂದರು.

    ಸಾರಿಗೆ ವ್ಯವಸ್ಥೆ ಪ್ರಾರಂಭಿಸುವ ವಿಚಾರ ಬಗ್ಗೆ ಚರ್ಚೆ ನಡೆಯುತ್ತಿದೆ. ಪಾಸಿಟಿವ್ ಇಲ್ಲದ ಜಿಲ್ಲೆಗಳಲ್ಲಿ ಲಾಕ್‌ಡೌನ್ ಸಡಿಲಗೊಳಿಸುವ ಚರ್ಚೆ ನಡೆಯುತ್ತಿದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರದ ನಿರ್ದೇಶನದಂತೆ ಅಂತಿಮ ನಿರ್ಧಾರವನ್ನು ಕೈಗೊಳ್ಳಲಾಗುವುದು ಎಂದು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ತಿಳಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts