More

    ಕರೊನಾ ನಿಯಂತ್ರಣಕ್ಕೆ ಜಾಗೃತಿ ಅಗತ್ಯ

    ಮಂತ್ರಾಲಯ ಶ್ರೀ ರಾಘವೇಂದ್ರಸ್ವಾಮಿ ಮಠದ ಪೀಠಾಧಿಪತಿ ಡಾ.ಸುಬುಧೇಂದ್ರ ತೀರ್ಥರ ಸಲಹೆ

    ರಾಯಚೂರು: ಕರೊನಾ ಮಹಾಮಾರಿಯನ್ನು ನಿಯಂತ್ರಿಸಲು ಜನ ಜಾಗೃತರಾಗಬೇಕು. ಮಾಸ್ಕ್ ಧರಿಸುವುದು, ಪರಸ್ಪರ ಅಂತರ ಕಾಪಾಡುವುದು ಸೇರಿದಂತೆ ಇತರ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಮಂತ್ರಾಲಯ ಶ್ರೀ ರಾಘವೇಂದ್ರಸ್ವಾಮಿ ಮಠದ ಪೀಠಾಧಿಪತಿ ಡಾ.ಸುಬುಧೇಂದ್ರ ತೀರ್ಥರು ಸಲಹೆ ನೀಡಿದರು.

    ನಗರದ ವೀರಾಂಜನೇಯ ಕಲ್ಯಾಣ ಮಂಟಪದಲ್ಲಿ ನಗರಸಭೆ ಮಾಜಿ ಉಪಾಧ್ಯಕ್ಷ ಯು.ದೊಡ್ಡಮಲ್ಲೇಶಪ್ಪ ಸ್ಮರಣಾರ್ಥ ಬುಧವಾರ ಏರ್ಪಡಿಸಿದ್ದ ಆರೋಗ್ಯ ಉಚಿತ ತಪಾಸಣೆ ಶಿಬಿರ ಉದ್ಘಾಟಿಸಿ, ಅನುಗ್ರಹ ಸಂದೇಶ ನೀಡಿದರು. ಕರೊನಾ ಎರಡು ಅಲೆಗಳಲ್ಲಿ ಜನ ಸಾಕಷ್ಟು ತೊಂದರೆಯನ್ನು ಅನುಭವಿಸಿದ್ದಾರೆ. ಮೂರನೇ ಅಲೆ ವಿಸ್ತರಿಸದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು ಎಂದರು. ಯು.ದೊಡ್ಡಮಲ್ಲೇಶಪ್ಪ ಹಲವು ಸಾಮಾಜಿಕ ಸೇವೆಗಳ ಮೂಲಕ ಜನಾನುರಾಗಿಯಾಗಿದ್ದರು. ಅವರ ಕುಟುಂಬವೂ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿದ್ದು, ಬಡ ಜನರಿಗೆ ಉಚಿತ ಆರೋಗ್ಯ ಸೇವೆ ನೀಡುತ್ತಿರುವುದು ಶ್ಲಾಘನೀಯ ಎಂದರು.

    ಸಂಸದ ರಾಜಾ ಅಮರೇಶ್ವರ ನಾಯಕ ಮಾತನಾಡಿ, ಚಿಕ್ಕ ವಯಸ್ಸಿನಲ್ಲಿ ಯು.ದೊಡ್ಡಮಲ್ಲೇಶಪ್ಪ ನಮ್ಮನ್ನು ಅಗಲಿರುವುದು ನೋವುಂಟು ಮಾಡಿದೆ. ಕರೊನಾ ಎದುರಿಸಲು ಎಲ್ಲರೂ ಸಿದ್ಧರಾಗಬೇಕಾಗಿದ್ದು, ಎಚ್ಚರ ತಪ್ಪಿದರೆ ಮತ್ತೊಮ್ಮೆ ಸಮಸ್ಯೆ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದರು. ಸಾವಿರಾರು ಜನರ ಆರೋಗ್ಯ ತಪಾಸಣೆ ನಡೆಸಲಾಯಿತು. ವೈದ್ಯರೂ ಆಗಿರುವ ಶಾಸಕ ಡಾ.ಶಿವರಾಜ ಪಾಟೀಲ್ ಜನರ ಆರೋಗ್ಯ ತಪಾಸಣೆ ನಡೆಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts