More

    ಕೋರ್ಟ್‌ನಲ್ಲಿ ತುರ್ತು ವಿಚಾರಣೆಗೆ ಮಾತ್ರ ಅವಕಾಶ

    ರಾಯಚೂರು: ಕೋವಿಡ್ ನಿಯಂತ್ರಣ ನಿಟ್ಟಿನಲ್ಲಿ ಸ್ಥಳೀಯ ಜಿಲ್ಲಾ ನ್ಯಾಯಾಲಯದಲ್ಲಿ ಸಾರ್ವಜನಿಕರು, ಕಕ್ಷಿದಾರರ ಪ್ರವೇಶ ನಿರಾಕರಿಸಿ ತುರ್ತು ವಿಚಾರಣೆಗೆ ಮಾತ್ರ ಅವಕಾಶ ನೀಡಿದ್ದರಿಂದ ಸೋಮವಾರ ನ್ಯಾಯಾಲಯದ ಮುಂಭಾಗದಲ್ಲಿ ಹೆಚ್ಚಿನ ಜನ ಜಮಾವಣೆಗೊಳ್ಳುವಂತಾಗಿತ್ತು.

    ನ್ಯಾಯಾಲಯದ ಆವರಣದಲ್ಲಿ ಕಕ್ಷಿದಾರರ ಪ್ರವೇಶಕ್ಕೆ ನಿರ್ಬಂಧ ಹೇರಿರುವ ಮಾಹಿತಿಯಿಲ್ಲದ ಕಾರಣ ನ್ಯಾಯಾಲಯಕ್ಕೆ ಬಂದಿದ್ದ ಜನರನ್ನು ಗೇಟ್ ಒಳಗೆ ಬಿಡಲಿಲ್ಲ. ಈ ಬಗ್ಗೆ ನ್ಯಾಯವಾದಿಗಳಿಗೂ ಸೂಕ್ತ ಮಾಹಿತಿಯಿಲ್ಲದ ಕಾರಣ ಕಕ್ಷಿದಾರರಿಗೆ ತಿಳಿ ಹೇಳಲು ಪರದಾಡುವಂತಾಯಿತು.

    ಸ್ಥಳಕ್ಕೆ ಆಗಮಿಸಿದ ಜಿಲ್ಲಾ ಹೆಚ್ಚುವರಿ ನ್ಯಾಯಾಧೀಶ ಮಹಾದೇವಪ್ಪ, ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಹೈಕೋರ್ಟ್ ನಿರ್ದೇಶನದಂತೆ ಜನರ ಪ್ರವೇಶ ನಿರ್ಬಂಧಿಸಲಾಗಿದೆ. ಕಕ್ಷಿದಾರರು ತಮ್ಮ ವಕೀಲರಿಂದ ಮಾಹಿತಿ ಪಡೆದು ನ್ಯಾಯಾಲಯಕ್ಕೆ ಆಗಮಿಸಬೇಕು. ಪ್ರಕರಣದ ಬಗ್ಗೆ ನ್ಯಾಯಾಲಯದಲ್ಲಿ ಸಾಕ್ಷಿದಾರರ ವಿಚಾರಣೆಗೆ ಪರವಾನಗಿ ಇಲ್ಲ. ತುರ್ತು ಪ್ರಕರಣಗಳ ವಿಚಾರಣೆ ಮಾತ್ರ ನಡೆಸಲಾಗುತ್ತಿದೆ ಎಂದು ತಿಳಿಸಿದ ನಂತರ ಜನರು ವಾಪಸ್ ಹೋದರು.

    ಜಿಲ್ಲಾ ನ್ಯಾಯವಾದಿಗಳ ಸಂಘದ ಅಧ್ಯಕ್ಷ ಜೆ.ಬಸವರಾಜ, ಕಾರ್ಯದರ್ಶಿ ಶಿವಕುಮಾರ ನಾಯಕ ಹಾಗೂ ಹಿರಿಯ ನ್ಯಾಯವಾದಿಗಳು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts