

ರಾಯಚೂರು: ಅಸ್ಕಿಹಾಳ ಗೋವಿಂದ ದಾಸರ ಸ್ಮರಣೋತ್ಸವದ ದಶಮಾನೋತ್ಸವ ಅಂಗವಾಗಿ ಗೋವಿಂದ ಗಾನ ಕಾರ್ಯಕ್ರಮವನ್ನು ಬೆಂಗಳೂರಿನ ಹರಿದಾಸ ಸೇವಾ ಇಂಟರ್ನ್ಯಾಷನಲ್ ಟ್ರಸ್ಟ್ ಹಾಗೂ ತಿರುಪತಿಯ ದಾಸ ಸಾಹಿತ್ಯ ಪ್ರಾಜೆಕ್ಟ್ ವತಿಯಿಂದ ಹಮ್ಮಿಕೊಳ್ಳಲಾಗಿದೆ ಎಂದು ಕಾರ್ಯಕ್ರಮದ ಅಧ್ಯಕ್ಷ ರಾಯಚೂರು ಶೇಷಗಿರಿದಾಸ ಹೇಳಿದರು.
ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಸೋಮವಾರ ಮಾತನಾಡಿ, ಸೆ.21, 22 ರಂದು ನಗರದ ಪಂಡಿತ್ ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಗೋವಿಂದ ಗಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಕಾರ್ಯಕ್ರಮದಲ್ಲಿ ಶ್ರೀವಾರಿ ಊಂಜಲ ಉತ್ಸವ, ಖ್ಯಾತ ಗಾಯಕರಿಂದ ಅಂತ್ಯಾಕ್ಷರಿ, ದಾಸವಾಣಿ ಜುಗಲ್ಬಂದಿ, ಸಿರಿ ಗೋವಿಂದ ವಿಠಲ ಪ್ರಶಸ್ತಿ ಪ್ರದಾನ, ಸಮೂಹ ಗಾನ, ಭಜನೆ ಸೇರಿದಂತೆ ಇನ್ನಿತರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ಇದನ್ನೂ ಓದಿ: ದಾಸವಾಣಿ ಸಂಗೀತ ಕಾರ್ಯಕ್ರಮ
ಕಾರ್ಯಕ್ರಮದ ಸಾನಿಧ್ಯವನ್ನು ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿ ಮಠದ ಶ್ರೀ ಸುಬುಧೇಂದ್ರ ತೀರ್ಥರು ವಹಿಸಿಕೊಳ್ಳಲಿದ್ದು, ಜಿಲ್ಲೆಯ ಸಚಿವರು, ಶಾಸಕರು ಸೇರಿದಂತೆ ಇತರೆ ಗಣ್ಯರು ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಪ್ರಮುಖರಾದ ವಾಸುದೇವ, ಮುರುಳಿಧರ ಕುಲರ್ಣಿ ಸೇರಿದಂತೆ ಇತರರಿದ್ದರು.