More

    ದಾವಣಗೆರೆಯಲ್ಲಿ ವೀರಶೈವ ಮಹಾಸಭಾ ಅಧಿವೇಶನ

    ರಾಯಚೂರು: ದಾವಣಗೆರೆಯಲ್ಲಿ ಡಿ.23ರಿಂದ 25ರವರೆಗೆ ಮೂರು ದಿನಗಳ ಕಾಲ ಅಖಿಲ ಭಾರತ ವೀರಶೈವ ಲಿಂಗಾಯರ ಮಹಾಸಭೆಯ 23ನೇ ಮಹಾ ಅಧಿವೇಶನ ಆಯೋಜಿಸಲಾಗಿದೆ ಎಂದು ಮಹಾಸಭಾ ಪ್ರಧಾನ ಕಾರ್ಯದರ್ಶಿ ಎಚ್.ಎಂ.ರೇಣುಕಾಪ್ರಸಾದ ತಿಳಿಸಿದರು.

    ಮಹಾಸಭೆಯಲ್ಲಿ ಲಿಂಗಾಯತ ವೀರಶೈವ ಪ್ರತ್ಯೇಕ ಧರ್ಮ, ಒಬಿಸಿ ಪಟ್ಟಿಗೆ ಉಪ ಜಾತಿಗಳ ಸೇರ್ಪಡೆ, ಸಮಾಜ ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಚರ್ಚೆ ನಡೆಸಿ ಸಮಾರೋಪ ಸಮಾರಂಭದಲ್ಲಿ ಮಂಡಿಸಲಾಗುವುದೆ ಬುಧವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

    ಡಿ.23ರಂದು ಮಹಾಸಭೆ ರಾಷ್ಟ್ರೀಯ ಅಧ್ಯಕ್ಷ ಶಾಮನೂರು ಶಿವಶಂಕ್ರಪ್ಪ ಅಧಿವೇಶನ ನಿಮಿತ್ತ ಹಮ್ಮಿಕೊಂಡಿರುವ ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧಿವೇಶನಕ್ಕೆ ಚಾಲನೆ ನೀಡಿದ್ದಾರೆ. ಉಪ ರಾಷ್ಟ್ರಪತಿ ದ್ರೌಪದಿ ಮರ್ಮುರನ್ನು ಆಹ್ವಾನಿಸಲಾಗಿದೆ.

    ಅಧಿವೇಶನದಲ್ಲಿ ಭಾಗವಹಿಸಲು ಸಮಾಜದವರು ಆನ್‌ಲೈನ್‌ನಲ್ಲಿ ನೋಂದಣಿ ಮಾಡಿಸಿಕೊಳ್ಳಬೇಕು. ನೋಂದಣಿ ಮಾಡಿಸಿಕೊಂಡವರಿಗೆ ವಸತಿ ಮತ್ತು ಊಟದ ವ್ಯವಸ್ಥೆ ಮಾಡಲಾಗುತ್ತಿದೆ. ರಾಜ್ಯದ ಎಲ್ಲ ಜಿಲ್ಲೆಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸುವ ನಿರೀಕ್ಷೆಯಿದೆ ಎಂದರು.

    ಮೂರು ದಿನಗಳ ಕಾಲ ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ, ಕೈಗಾರಿಕೆ, ಯುವ, ಮಹಿಳಾ ಮತ್ತು ಮಾಧ್ಯಮ ಗೋಷ್ಠಿಗಳು ನಡೆಯಲಿವೆ. ವಸ್ತು ಪ್ರದರ್ಶನ ಮತ್ತು ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು. ಮಹಾಸಭಾ ಜಿಲ್ಲಾಧ್ಯಕ್ಷ ಚಂದ್ರಶೇಖರ ಪಾಟೀಲ್ ಮಿರ್ಜಾಪುರ, ಪದಾಧಿಕಾರಿಗಳಾದ ಬಸವರಾಜ ಹಣಗಿ, ರೇಖಾ ಕೇಶವರೆಡ್ಡಿ, ಬಸವರಾಜ, ಡಾ.ಪರಮೇಶ್ವರ ಸಾಲಿಮಠ ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts