More

    ಎಸ್ಸೆಸ್ಸೆಲ್ಸಿ ಫಲಿತಾಂಶ ಹೆಚ್ಚಳಕ್ಕೆ ಕ್ರಮ

    ರಾಯಚೂರು: ಜಿಲ್ಲೆಯಲ್ಲಿ ಎಸ್ಸೆಸ್ಸೆಲ್ಸಿ ಫಲಿತಾಂಶ ಹೆಚ್ಚಳಕ್ಕೆ ಶ್ರಮ ವಹಿಸಲಾಗುತ್ತಿದೆ. ಶಿಕ್ಷಕರ ಕೊರತೆ ಇದ್ದಲ್ಲಿ ಅತಿಥಿ ಶಿಕ್ಷಕರ ನೇಮಕ ಮೂಲಕ ಮಕ್ಕಳ ಶ್ರೇಯೋಭಿವೃದ್ಧಿ ಮತ್ತು ಆತ್ಮ ವಿಶ್ವಾಸ ಹೆಚ್ಚಿಸುವ ಕೆಲಸ ಮಾಡಲಾಗುತ್ತಿದೆ ಎಂದು ಡಿಡಿಪಿಐ ವೃಷಭೇಂದ್ರಯ್ಯ ಹೇಳಿದರು.

    ಸ್ಥಳೀಯ ಇನ್‌ಫೆಂಟ್ ಜೀಸಸ್ ಶಾಲೆಯಲ್ಲಿ ಶಿಕ್ಷಣ ಇಲಾಖೆ ಹಾಗೂ ಜಸ್ಟಿಸ್ ಶಿವರಾಜ ಪಾಟೀಲ್ ಪ್ರತಿಷ್ಠಾನದಿಂದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗಾಗಿ ಗುರುವಾರ ಏರ್ಪಡಿಸಿದ್ದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು. ವಿದ್ಯಾರ್ಥಿಗಳು ಪರೀಕ್ಷೆಗಳನ್ನು ಸಮರ್ಥವಾಗಿ ಎದುರಿಸಲು ಕಾರ್ಯಾಗಾರ ಸಹಕಾರಿಯಾಗಲಿದೆ ಎಂದರು.

    ಪ್ರತಿಷ್ಠಾನದ ಕಾರ್ಯದರ್ಶಿ ಪ್ರೊ.ಚನ್ನಾರಡ್ಡಿ ಪಾಟೀಲ್ ಮಾತನಾಡಿ, ನ್ಯಾ.ಶಿವರಾಜ ಪಾಟೀಲ್ ಕರ್ತವ್ಯ ಪ್ರಜ್ಞೆ, ಪರಿಶ್ರಮ ಹಾಗೂ ಪ್ರಾಮಾಣಿಕತೆ ಮೈಗೂಡಿಸಿಕೊಂಡು ರಾಯಚೂರು ಜಿಲ್ಲೆಗೆ ಹೆಸರು ತಂದಿದ್ದಾರೆ. ಅವರ ಬದುಕು ಯುವ ಜನಾಂಗಕ್ಕೆ ಮಾದರಿಯಾಗಿದೆ ಎಂದು ಹೇಳಿದರು.

    ಬಿಇಒ ಚಂದ್ರಶೇಖರ ಭಂಡಾರಿ ಮಾತನಾಡಿ, ಅಂಕಗಳೊಂದಿಗೆ ಸಂಸ್ಕಾರವಂತರಾಗಬೇಕು. ಆತ್ಮವಿಶ್ವಾಸ ಗುರಿಯನ್ನು ಮುಟ್ಟಿಸುತ್ತದೆ. ಗಣಿತ, ಇಂಗ್ಲಿಷ್, ವಿಜ್ಞಾನ ವಿಷಯಗಳನ್ನು ಹೆಚ್ಚಾಗಿ ಓದಬೇಕು ಎಂದು ಸಲಹೆ ನೀಡಿದರು.

    ಪ್ರತಿಷ್ಠಾನದ ಅಧ್ಯಕ್ಷ ಎಸ್.ಎಂ.ರಡ್ಡಿ, ಸಂಪನ್ಮೂಲ ವ್ಯಕ್ತಿಗಳಾದ ಗುರುರಾಜ ಕುಲಕರ್ಣಿ, ಪ್ರೊ.ಅಶೋಕ ಖಾಬಾ, ಜಯಾ ನಾಲವಾರ, ಡಾ.ರೂಪನಗೌಡ ಪಾಟೀಲ್, ನೀಲಮ್ಮ, ಪ್ರೌಢಶಾಲಾ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಮೋಹಿನುಲ್ ಹಕ್, ಮುಖ್ಯಶಿಕ್ಷಕ ರಾಜಶೇಖರ, ಆಡಳಿತಾಧಿಕಾರಿ ಬೆಂಜಮಿನ್ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts