More

    ದೆಹಲಿ ಡಿಸಿಎಂ ಬಂಧನ ಖಂಡಿಸಿ ಪ್ರತಿಭಟನೆ

    ರಾಯಚೂರು: ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾರನ್ನು ಸಿಬಿಐ ಬಂಧಿಸಿರುವುದನ್ನು ಖಂಡಿಸಿ ಸ್ಥಳೀಯ ಜಿಲ್ಲಾಧಿಕಾರಿ ಕಚೇರಿ ಮುಂದೆ ಆಮ್ ಆದ್ಮಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
    ತನಿಖಾಧಿಕಾರಿಗಳು ಸುಮಾರು ಒಂದು ವರ್ಷದಿಂದ ಸಿಸೋಡಿಯಾ ಗುರಿಯಾಗಿಸಿ ಕೆಲಸ ಮಾಡುತ್ತಿದ್ದು, ಆರೋಪಗಳನ್ನು ರುಜುಪಡಿಸುವ ಯಾವುದೇ ಪುರಾವೆಗಳು ಕಂಡುಬಂದಿಲ್ಲ. ಯಾವುದೇ ನಗದು ಅಥವಾ ಯಾವುದೇ ಅಕ್ರಮ ದಾಖಲೆಗಳು ಪತ್ತೆಯಾಗಿಲ್ಲ. ಬಿಜೆಪಿಯನ್ನು ಎದುರಿಸುವ ಶಕ್ತಿ ಎಎಪಿಗೆ ಮಾತ್ರ ಇದೆ ಎಂಬುದನ್ನು ಅರಿತುಕೊಂಡು ಬಿಜೆಪಿ ತನ್ನ ಅಧಿಕಾರವನ್ನು ದುರುಪಯೋಗಪಡಿಸಿಕೊಂಡು ಈ ರೀತಿ ತೊಂದರೆ ಸೃಷ್ಟಿಸುತ್ತಿದೆ ಎಂದು ಆರೋಪಿಸಿದರು.
    ದೆಹಲಿಯ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಲು ಸಿಸೋಡಿಯಾ ಶ್ರಮಿಸಿದ್ದಾರೆ, ಬಿಜೆಪಿ ನೇತೃತ್ವದ ಕೇಂದ್ರವು ಸಿಸೋಡಿಯಾರನ್ನು ಸುಳ್ಳು ಪ್ರಕರಣದಲ್ಲಿ ಜೈಲಿಗೆ ಕಳುಹಿಸಿದೆ. ಈ ಕೂಡಲೇ ಅವರನ್ನು ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿದರು.
    ಪ್ರತಿಭಟನೆಯಲ್ಲಿ ಪಕ್ಷಸ ಮುಖಂಡರಾದ ಪೂಜಾ ರಮೇಶ, ಬಸವರಾಜ ಗುತ್ತೇದಾರ, ವೀರೇಶ, ಅಜರುದ್ದೀನ್ ರಾಣಾ, ವೀರೇಶ ಕುಮಾರ್, ಸುಭಾಶ್ಚಂದ್ರ ಸಂಭಾಜಿ ಪಾಲ್ಗೊಂಡಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts