ಇಂಧನ ಮಿತ ಬಳಕೆಗೆ ಸೈಕಲ್ ಜಾಥಾ

ರಾಯಚೂರು: ಡೀಸೆಲ್, ಪೆಟ್ರೋಲ್ ಮಿತ ಬಳಕೆ ಕುರಿತು ಜನರಲ್ಲಿ ಜಾಗೃತಿ ಮೂಡಿಸಲು ಪ್ರೊಬೇಷನರಿ ಪೊಲೀಸ್ ಅಧಿಕಾರಿಗಳು, ವಿದ್ಯಾರ್ಥಿಗಳು ಹಾಗೂ ಸ್ವಯಂ ಸೇವಕರು ನಗರದಲ್ಲಿ ಸೈಕಲ್ ಜಾಥಾ ನಡೆಸಿದರು.

ಮಹಾತ್ಮ ಗಾಂಧೀಜಿ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ ಹಾಗೂ ಪೆಟ್ರೋಲಿಯಂ ಇಲಾಖೆ ಆಶ್ರಯದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಜಾಥಾಕ್ಕೆ ಡಿಸಿ ಬಿ.ಶರತ್ ಚಾಲನೆ ನೀಡಿದರು. ನಂತರ ಮಾತನಾಡಿ, ಅಧಿಕ ತೈಲ ಬಳಕೆಯಿಂದ ಪರಿಸರ ನಾಶದ ಜತೆಗೆ ಮಾಲಿನ್ಯ ಹೆಚ್ಚುತ್ತಿದೆ ಎಂದರು. ಕ್ರೀಡಾಂಗಣದಿಂದ ಹೊರಟ ಜಾಥಾ ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ‘ಮುಗಿದು ಹೋಗುವ ಸಂಪನ್ಮೂಲಗಳನ್ನು ಹಿತ, ಮಿತವಾಗಿ ಬಳಕೆ ಮಾಡುವ’ ಕುರಿತು ಅರಿವು ಮೂಡಿಸಲಾಯಿತು. ವಿವಿಧ ಇಲಾಖೆ ಅಧಿಕಾರಿಗಳು, ಪ್ರೊಬೇಷನರಿ ಪೊಲೀಸ್ ಸಿಬ್ಬಂದಿ, ಅಧಿಕಾರಿಗಳು, ವಿದ್ಯಾರ್ಥಿಗಳು ಇದ್ದರು.