More

    ರಾಯಚೂರು ಜಿಲ್ಲೆಯ ಆರು ಕೇಂದ್ರಗಳಲ್ಲಿ 588 ಜನರಿಗೆ ಲಸಿಕೆ, ಜಿಲ್ಲಾಧಿಕಾರಿ ಆರ್.ವೆಂಕಟೇಶಕುಮಾರ ಚಾಲನೆ

    ರಾಯಚೂರು: ಜಿಲ್ಲೆಯಲ್ಲಿ ಮೊದಲ ಹಂತದಲ್ಲಿ ಕರೊನಾ ಸೇನಾನಿಗಳಿಗೆ ಲಸಿಕೆ ನೀಡುವ ಅಭಿಯಾನಕ್ಕೆ ಶನಿವಾರ ಚಾಲನೆ ನೀಡಲಾಗಿದೆ. ಜಿಲ್ಲೆಯ ಆರು ಕೇಂದ್ರಗಳಲ್ಲಿ 588 ಜನರಿಗೆ ಲಸಿಕೆ ನೀಡಲಾಯಿತು.

    ಸ್ಥಳೀಯ ರಿಮ್ಸ್ ಆಸ್ಪತ್ರೆಯಲ್ಲಿ ಲಸಿಕೆ ಅಭಿಯಾನಕ್ಕೆ ಜಿಲ್ಲಾಧಿಕಾರಿ ಆರ್.ವೆಂಕಟೇಶಕುಮಾರ ಚಾಲನೆ ನೀಡಿದ ನಂತರ ಮೊದಲ ಲಸಿಕೆಯನ್ನು ಆರೋಗ್ಯ ಇಲಾಖೆ ಗ್ರೂಪ್ ಡಿ ನೌಕರ, 28ವರ್ಷದ ಮಂಜುನಾಥಗೆ ನೀಡಲಾಯಿತು. ನಗರದ ರಿಮ್ಸ್ ಆಸ್ಪತ್ರೆ, ದೇವದುರ್ಗ, ಲಿಂಗಸುಗೂರು, ಸಿಂಧನೂರು, ಮಾನ್ವಿ ತಾಲೂಕು ಆಸ್ಪತ್ರೆಯಲ್ಲಿ ಹಾಗೂ ಚಂದ್ರಬಂಡಾದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಲಸಿಕೆ ನೀಡಲಾಯಿತು. ಲಸಿಕೆ ಪಡೆದವರ ಆರೋಗ್ಯ ಸ್ಥಿರವಾಗಿರುವುದನ್ನು ಅರ್ಧ ಗಂಟೆಗಳ ಕಾಲ ಪರಿಶೀಲಿಸಲಾಯಿತು.

    ಜಿಲ್ಲೆಯಲ್ಲಿ ಮೊದಲ ಹಂತದಲ್ಲಿ 15,260 ಮುಂಚೂಣಿ ಕಾರ್ಯಕರ್ತರಿಗೆ ಲಸಿಕೆ ನೀಡುವ ಗುರಿ ಹೊಂದಲಾಗಿದೆ. ಎರಡು ದಿನಗಳ ಹಿಂದೆ ಜಿಲ್ಲೆಗೆ ಒಂಬತ್ತು ಸಾವಿರ ಕೋವಿಶೀಲ್ಡ್ ಲಸಿಕೆ ಬಂದಿದ್ದು, ಮೊದಲ ದಿನ ಪ್ರತಿ ಕೇಂದ್ರದಲ್ಲಿ ತಲಾ 100 ಜನರಿಗೆ, ನಂತರದಲ್ಲಿ ಉಳಿದವರಿಗೆ ಲಸಿಕೆ ನೀಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ.
    ಈ ಸಂದರ್ಭ ಜಿಪಂ ಸಿಇಒ ಶೇಖ್ ತನ್ವೀರ್ ಆಸೀಫ್, ಡಿಎಚ್‌ಒ ಡಾ.ರಾಮಕೃಷ್ಣ, ರಿಮ್ಸ್ ನಿರ್ದೇಶಕ ಡಾ.ಬಸವರಾಜ ಪೀರಾಪುರ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಎನ್.ವಿಜಯಶಂಕರ ಹಾಗೂ ವೈದ್ಯಕೀಯ ಸಿಬ್ಬಂದಿ ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts