More

    ರಾಯಚೂರು ಜಿಲ್ಲೆಯಲ್ಲಿ ಸಿಇಟಿ ಪರೀಕ್ಷೆಗೆ ಸಿದ್ಧತೆ ಪೂರ್ಣ

    ರಾಯಚೂರು: ಜಿಲ್ಲೆಯ 14 ಪರೀಕ್ಷಾ ಕೇಂದ್ರಗಳಲ್ಲಿ ಗುರುವಾರ ಮತ್ತು ಶುಕ್ರವಾರ ನಡೆಯಲಿರುವ ಸಿಇಟಿ ಪರೀಕ್ಷೆಗೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದ್ದು, ಪರೀಕ್ಷಾ ಕೇಂದ್ರಗಳನ್ನು ಸ್ಯಾನಿಟೈಸೇಷನ್ ಮಾಡಿ ಮುನ್ನೆಚ್ಚರಿಕ ಕ್ರಮಗಳನ್ನು ಕೈಗೊಳ್ಳಲಾಗಿದೆ.

    ರಾಯಚೂರು ನಗರದ 10 ಕೇಂದ್ರಗಳಲ್ಲಿ ಹಾಗೂ ಸಿಂಧನೂರು, ಲಿಂಗಸುಗೂರಿನಲ್ಲಿ ತಲಾ ಎರಡು ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯಲಿದೆ. ರಾಯಚೂರು ನಗರದಲ್ಲಿ 2,875, ಸಿಂಧನೂರು 932, ಲಿಂಗುಸೂರಿನಲ್ಲಿ 533 ವಿದ್ಯಾರ್ಥಿಗಳು ಸೇರಿ ಒಟ್ಟು 4,400 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಸಿಕೊಂಡಿದ್ದಾರೆ.

    ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಲಾಗಿದೆ. ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಸ್ಯಾನಿಟೈಸರ್ ವ್ಯವಸ್ಥೆ ಮಾಡಲಾಗಿದೆ. ಮಾಸ್ಕ್ ತರದ ವಿದ್ಯಾರ್ಥಿಗಳಿಗೆ ಇಲಾಖೆಯಿಂದ ಮಾಸ್ಕ್ ನೀಡಲು ವ್ಯವಸ್ಥೆ ಮಾಡಲಾಗಿದೆ.

    ಪ್ರಸ್ತುತ ಯಾವುದೇ ಕರೊನಾ ಪಾಸಿಟಿವ್ ಬಂದಿರುವ ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿರುವುದು ಕಂಡು ಬಂದಿಲ್ಲವಾದರೂ ರಾಯಚೂರು, ಸಿಂಧನೂರು, ಲಿಂಗಸುಗೂರಿನಲ್ಲಿರುವ ಕೋವಿಡ್ ಕೇಂದ್ರಗಳಲ್ಲಿ ಅಂತಹ ಸೋಂಕಿತ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಸಿದ್ಧತೆ ಮಾಡಿಕೊಳ್ಳಲಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts