More

    ದಾಸ್ಯಮುಕ್ತ ವಿಮೋಚನೆ ದಿನದ ಸ್ಮರಣೆ

    ರಾಯಚೂರು: ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಗಾಗಿ ಎಲ್ಲರೂ ಒಗ್ಗೂಡಿ ಪ್ರಯತ್ನಿಸಬೇಕಿದ್ದು, ಈ ಮೂಲಕ ಜಿಲ್ಲೆಯನ್ನು ಪ್ರಗತಿಯತ್ತ ಮುನ್ನಡೆಸಬೇಕಿದೆ. ಸರ್ಕಾರದ ಅಭಿವೃದ್ಧಿ ಕಾರ್ಯಕ್ರಮಗಳನ್ನು ಸಾಕಾರಗೊಳಿಸಲು ಪ್ರಾಮಾಣಿಕ ಪ್ರಯತ್ನ ನಡೆಸಲಾಗುವುದು ಎಂದು ಜಿಲ್ಲಾಧಿಕಾರಿ ಎಲ್.ಚಂದ್ರಶೇಖರ ನಾಯಕ ಹೇಳಿದರು.

    ಸ್ಥಳೀಯ ಜಿಲ್ಲಾ ಕ್ರೀಡಾಂಗಣದಲ್ಲಿ ಶನಿವಾರ ಕಲ್ಯಾಣ ಕರ್ನಾಟಕ ಉತ್ಸವದ ನಿಮಿತ್ತ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ಹಲವರ ತ್ಯಾಗ, ಬಲಿದಾನದಿಂದ ಈ ಭಾಗಕ್ಕೆ ವಿಮೋಚನೆ ದೊರೆತಿದೆ. ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳ ಅಭಿವೃದ್ಧಿಗಾಗಿ ಸರ್ಕಾರ ವಿಶೇಷ ಅಭಿವೃದ್ಧಿ ಯೋಜನೆ ಜಾರಿಗೆ ತಂದಿದೆ. ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಸ್ಥಾಪಿಸುವ ಮೂಲಕ ಜನಪರ ನೀತಿ, ಸಾಮಾಜಿಕ ನ್ಯಾಯ ಮತ್ತು ರೈತರ ಹಿತಾಸಕ್ತಿಗೆ ಆದ್ಯತೆ ನೀಡಿದೆ ಎಂದರು.

    ನಗರದಲ್ಲಿ ವಿಮಾನ ನಿಲ್ದಾಣ ನಿರ್ಮಾಣದ ಬಹುದಿನದ ಕನಸು ನನಸಾಗುವ ಹಂತಕ್ಕೆ ಬಂದಿದೆ. ಇದಕ್ಕಾಗಿ 315 ಎಕರೆ ಭೂಮಿಯನ್ನು ಕಾಯ್ದಿರಿಸಲಾಗಿದ್ದು, ವಿಸ್ತೃತ ಯೋಜನಾ ವರದಿಯೊಂದಿಗೆ 185 ಕೋಟಿ ರೂ.ಗಳ ಅಂದಾಜು ಪಟ್ಟಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

    ಪೊಲೀಸ್, ಸೇವಾದಳ ಹಾಗೂ ಇತರ ವಿವಿಧ ತಂಡಗಳಿಂದ ಪಥ ಸಂಚಲನ ನಡೆಯಿತು. ಸ್ವಾತಂತ್ರೃ ಹೋರಾಟಗಾರರು ಹಾಗೂ ವಿವಿಧ ಇಲಾಖೆ ಸಿಬ್ಬಂದಿಗೆ ಸನ್ಮಾನಿಸಲಾಯಿತು. ನಗರಸಭೆ ಅಧ್ಯಕ್ಷೆ ಲಲಿತಾ ಕಡಗೋಲ, ಉಪಾಧ್ಯಕ್ಷೆ ನರಸಮ್ಮ ಮಾಡಗಿರಿ, ಎಸ್ಪಿ ಬಿ.ನಿಖಿಲ್, ಅಪರ ಜಿಲ್ಲಾಧಿಕಾರಿ ಡಾ.ಕೆ.ಆರ್.ದುರಗೇಶ, ಜಿಪಂ ಸಿಇಒ ಶಶಿಧರ ಕುರೇರ, ಉಪ ಕಾರ್ಯದರ್ಶಿ ಶಶಿಕಾಂತ ಶಿವಪುರೆ, ಸಹಾಯಕ ಆಯುಕ್ತ ರಜನಿಕಾಂತ ಚವ್ಹಾಣ್, ತಹಸೀಲ್ದಾರ್ ರಾಜಶೇಖರ ಪಾಟೀಲ್ ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts