More

    ರಾಯಚೂರು ಜಿಲ್ಲಾ ಉತ್ಸವ ನಡೆಸಿ

    ರಾಯಚೂರು: ಜಿಲ್ಲಾ ಉತ್ಸವ ನಡೆಸುವ ಮೂಲಕ ರಾಯಚೂರು ಜಿಲ್ಲೆಯ ಐತಿಹಾಸಿಕ ಮತ್ತು ಸಂಸ್ಕೃತಿಯನ್ನು ಬಿಂಬಿಸುವ ಕೆಲಸವನ್ನು ಜಿಲ್ಲಾಡಳಿತ ಮಾಡಬೇಕು ಎಂದು ಕನ್ನಡ ಚಳವಳಿ ಕೇಂದ್ರ ಸಮಿತಿ ಒತ್ತಾಯಿಸಿದೆ.

    ಸಮಿತಿ ನಿಯೋಗ ಜಿಲ್ಲಾಧಿಕಾರಿ ಕಚೇರಿ ಕೇಂದ್ರ ಸ್ಥಾನಿಕ ಅಧಿಕಾರಿ ಪ್ರಶಾಂತಕುಮಾರಗೆ ಗುರುವಾರ ಮನವಿ ಸಲ್ಲಿಸಿ, ರಾಜ್ಯದ ಹಲವು ಜಿಲ್ಲೆಗಳಲ್ಲಿ ಜಿಲ್ಲಾ ಉತ್ಸವವನ್ನು ವಿಜೃಂಭಣೆಯಿಂದ ನೆರವೇರಿಸಲಾಗುತ್ತಿದೆ. ಜಿಲ್ಲೆಯಲ್ಲಿ ಕಳೆದ ಒಂದೂವರೆ ದಶಕದಿಂದ ಜಿಲ್ಲಾ ಉತ್ಸವ ನಡೆಸಲಾಗುತ್ತಿಲ್ಲ. ಉತ್ಸವ ನಡೆಸುವುದರಿಂದ ಜಿಲ್ಲೆಯ ಐತಿಹಾಸಿಕ, ಸಾಂಸ್ಕೃತಿಕ ಹಿರಿಮೆಯನ್ನು ಇಂದಿನ ಯುವ ಪೀಳಿಗೆಗೆ ಪರಿಚಯ ಮಾಡಿಕೊಟ್ಟಂತಾಗುತ್ತಿದೆ. ಜತೆಗೆ ಸ್ಥಳೀಯ ಕಲಾವಿದರಿಗೆ ವೇದಿಕೆ ದೊರೆತು ಅವರ ಪ್ರತಿಭೆ ಅನಾವರಣಕ್ಕೆ ಅನುಕೂಲವಾಗಲಿದೆ. ಪಕ್ಕದ ಬಳ್ಳಾರಿಯಲ್ಲಿ ಹಂಪಿ ಉತ್ಸವ, ಚಿಕ್ಕಬಳ್ಳಾಪುರದಲ್ಲಿಯೂ ವಿಜೃಂಭಣೆಯಿಂದ ನಡೆಸಲಾಗುತ್ತಿದ್ದು, ಫೆಬ್ರವರಿ ಅಂತ್ಯದೊಳಗೆ ಜಿಲ್ಲಾ ಉತ್ಸವ ನಡೆಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ. ನಿಯೋಗದಲ್ಲಿ ಸಮಿತಿ ಜಿಲ್ಲಾಧ್ಯಕ್ಷ ಕೆ.ಗೋವಿಂದರಾಜ್, ಪದಾಧಿಕಾರಿ ವೀರನಗೌಡ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts