More

    ಕೃತಕ ಅಭಾವ ಸೃಷ್ಟಿಸಿದರೆ ಕ್ರಮಕೈಗೊಳ್ಳಿ; ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಮುನೇನಕೊಪ್ಪ ಸೂಚನೆ

    | ರಸಗೊಬ್ಬರ, ಬಿತ್ತನೆ ಬೀಜ ಸಕಾಲಕ್ಕೆ ದೊರೆಯಲಿ

    ರಾಯಚೂರು: ಜಿಲ್ಲೆಯಲ್ಲಿ ಉತ್ತಮ ಮಳೆಯಾಗಿದೆ. ಮುಂಗಾರು ಹಂಗಾಮಿನಲ್ಲಿ ರೈತರಿಗೆ ಸಕಾಲಕ್ಕೆ ಬಿತ್ತನೆ ಬೀಜ ಹಾಗೂ ರಸಗೊಬ್ಬರ ದೊರೆಯುವಂತೆ ಮಾಡಬೇಕು. ರಸಗೊಬ್ಬರ ಮತ್ತು ಬಿತ್ತನೆ ಬೀಜ ಕೃತಕ ಅಭಾವ ಸೃಷ್ಟಿಸುವವರ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಶಂಕರ ಪಾಟೀಲ್ ಮುನೇನಕೊಪ್ಪ ಸೂಚಿಸಿದರು.

    ಸ್ಥಳೀಯ ಜಿಪಂ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ಮಳೆ ಹಾನಿ ಮತ್ತು ಬಿತ್ತನೆ ಬೀಜ, ರಸಗೊಬ್ಬರ ಪೂರೈಕೆ ಕುರಿತ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು. ಕಳಪೆ ಬೀಜ ಮಾರಾಟಗಾರರ ವಿರುದ್ಧ ಕಾನೂನು ಕ್ರಮಕೈಗೊಳ್ಳಬೇಕು. ಸಮಸ್ಯೆಯಿದ್ದಲ್ಲಿ ಜಿಲ್ಲಾಧಿಕಾರಿ ಗಮನಕ್ಕೆ ತಂದು ಪರಿಹಾರಕ್ಕೆ ಮುಂದಾಗಬೇಕು. ಮಳೆಯಿಂದ ಹಾನಿಗೊಳಗಾದವರಿಗೆ ಶೀಘ್ರ ಪರಿಹಾರ ಬಿಡುಗಡೆ ಮಾಡಬೇಕು ಎಂದರು.

    ಜಿಲ್ಲಾಧಿಕಾರಿ ಚಂದ್ರಶೇಖರ ನಾಯಕ ಮಾತನಾಡಿ, ಮಳೆಯಿಂದ ಜಿಲ್ಲೆಯಲ್ಲಿ 42 ಹೆಕ್ಟೇರ್ ಪ್ರದೇಶದಲ್ಲಿ ಕೃಷಿ ಬೆಳೆ ಹಾನಿಯಾಗಿದೆ. 40 ಹೆಕ್ಟೇರ್ ಪ್ರದೇಶದಲ್ಲಿ ತೋಟಗಾರಿಕೆ ಬೆಳೆ ಹಾನಿಗೊಳಗಾಗಿದೆ. ಸಿಡಿಲು ಬಡಿದು ಕುರಿ ಮತ್ತು ಇತರ ಜಾನುವಾರುಗಳು ಸತ್ತಿವೆ. ಈ ಕುರಿತು ಪ್ರಾಥಮಿಕ ಸಮೀಕ್ಷೆ ನಡೆಸಲಾಗಿದ್ದು, ಒಂದು ವಾರದೊಳಗೆ ಅಂತಿಮ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts