More

    ಕಲ್ಯಾಣ ಕರ್ನಾಟಕ ಭಾಗದ ಸಮಗ್ರ ಅಭಿವೃದ್ಧಿಗೆ ರಾಜ್ಯ ಸರ್ಕಾರ ಹೆಚ್ಚಿನ ಆದ್ಯತೆ; ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಮಾಹಿತಿ


    ರಾಯಚೂರು: ಕಲ್ಯಾಣ ಕರ್ನಾಟಕ ಭಾಗದ ಸಮಗ್ರ ಅಭಿವೃದ್ಧಿಗೆ ರಾಜ್ಯ ಸರ್ಕಾರ ಹೆಚ್ಚಿನ ಆದ್ಯತೆ ನೀಡುತ್ತಿದ್ದು, ಈ ನಿಟ್ಟಿನಲ್ಲಿ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಹೇಳಿದರು.

    ಜಿಲ್ಲಾ ಪೊಲೀಸ್ ಪರೇಡ್ ಮೈದಾನದಲ್ಲಿ ಸ್ವಾತಂತ್ರೊೃೀತ್ಸವ ನಿಮಿತ್ತ ಭಾನುವಾರ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ, ಮಾತನಾಡಿದರು. ಕ.ಕ.ಭಾಗದ ಅಭಿವೃದ್ಧಿಗಾಗಿ 2 ವರ್ಷಗಳಲ್ಲಿ 2,632 ಕೋಟಿ ರೂ. ಅನುದಾನ ಮೀಸಲಿರಿಸಿದೆ. ಈ ಸಾಲಿನಲ್ಲಿ 1,493 ಕೋಟಿ ರೂ. ಮೀಸಲಿರಿಸಿದೆ ಎಂದರು.

    ಸಿಎಂ ಬಸವರಾಜ ಬೊಮ್ಮಾಯಿ ಕೂಡ ಈ ಭಾಗದಲ್ಲಿ ಶಿಕ್ಷಣ, ಆರೋಗ್ಯ, ಕುಡಿಯುವ ನೀರು ಮುಂತಾದ ಮೂಲ ಸೌಕರ್ಯಗಳನ್ನು ಕಲ್ಪಿಸಲು ಹೆಚ್ಚಿನ ಆದ್ಯತೆ ನೀಡುತ್ತಿದ್ದಾರೆ. ಅಧಿಕಾರಕ್ಕೆ ಬರುತ್ತಿದ್ದ ತಕ್ಷಣವೇ ರೈತರ ಮಕ್ಕಳ ಉನ್ನತ ಶಿಕ್ಷಣಕ್ಕಾಗಿ ಸಾವಿರ ಕೋಟಿ ರೂ. ವಿದ್ಯಾರ್ಥಿ ವೇತನ ಘೋಷಣೆ ಮಾಡಿದ್ದಾರೆ ಎಂದರು.

    ಜಿಲ್ಲೆಯ ಗಣೇಕಲ್ ಜಲಾಶಯದ ಏತ ನೀರಾವರಿ ಯೋಜನೆಯಗೆ 200 ಕೋಟಿ ರೂ. ಮತ್ತು ರಾಯಚೂರು ತಾಲೂಕಿನ ಗ್ರಾಮಗಳಿಗೆ ಕುಡಿಯುವ ನೀರಿಗಾಗಿ 212 ಕೋಟಿ ರೂ. ಕಾಮಗಾರಿಗಳಿಗೆ ಶೀಘ್ರದಲ್ಲಿ ಸಿಎಂ ಚಾಲನೆ ನೀಡಲಿದ್ದಾರೆ. ನಗರದ ವರ್ತುಲ ರಸ್ತೆಗೆ ಸರ್ಕಾರ ಬಜೆಟ್‌ನಲ್ಲಿ 80 ರೂ.ಅನುದಾನ ಬಿಡುಗಡೆ ಮಾಡಿದೆ. ವಸತಿ ಇಲಾಖೆಯಲ್ಲಿ ಸುಮಾರು 3.12 ಲಕ್ಷ ಕೊಳಗೇರಿ ಕುಟುಂಬಗಳಿಗೆ ಭೂ ಮಾಲೀಕತ್ವದ ಹಕ್ಕು, ಬಹುಮಹಡಿ ವಸತಿ ಸೌಲಭ್ಯ ನೀಡಲಾಗಿದೆ. 9.74 ಲಕ್ಷ ಮನೆಗಳ ನಿರ್ಮಾಣಕ್ಕೆ 10,194 ಅನುದಾನ ಮೀಸಲಿಡಲಾಗಿದೆ ಎಂದರು.

    ಪೊಲೀಸ್, ಗೃಹ ರಕ್ಷಕ ದಳ ಮತ್ತು ಅರಣ್ಯ ಇಲಾಖೆ ಸಿಬ್ಬಂದಿಯಿಂದ ಪಥ ಸಂಚಲನ, ವಿವಿಧ ಕ್ಷೇತ್ರಗಳ ಸಾಧಕರ ಸನ್ಮಾನ ನಡೆಯಿತು. ಸಂಸದ ರಾಜಾ ಅಮರೇಶ್ವರ ನಾಯಕ, ಶಾಸಕರಾದ ಡಾ.ಶಿವರಾಜ ಪಾಟೀಲ್, ಬಸನಗೌಡ ದದ್ದಲ್, ಎಂಎಲ್ಸಿ ಬಸವರಾಜ ಪಾಟೀಲ್ ಇಟಗಿ, ನಗರಸಭೆ ಅಧ್ಯಕ್ಷ ಇ.ವಿನಯಕುಮಾರ, ಆರ್‌ಡಿಎ ಅಧ್ಯಕ್ಷ ವೈ.ಗೋಪಾಲರೆಡ್ಡಿ, ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ, ಜಿ.ಪಂ. ಸಿಇಒ ಶೇಖ್ ತನ್ವೀರ್ ಆಸೀಫ್, ಎಸ್ಪಿ ಪ್ರಕಾಶ ನಿಕಮ್, ಅಪರ ಜಿಲ್ಲಾಧಿಕಾರಿ ಕೆ.ಆರ್.ದುರಗೇಶ, ಸಹಾಯಕ ಆಯುಕ್ತ ಸಂತೋಷ ಕಾಮಗೌಡ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts