More

    ಮಕ್ಕಳಲ್ಲಿ ಸ್ಪರ್ಧಾ ಮನೋಭಾವ ಬೆಳೆಸಿ: ಜಿಪಂ ಅಧ್ಯಕ್ಷೆ ಆದಿಮನಿ ವೀರಲಕ್ಷ್ಮಿಸಲಹೆ

    ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ, ಕಲೋತ್ಸವ

    ರಾಯಚೂರು: ಜಿಲ್ಲೆಯ ಪ್ರತಿಭಾನ್ವಿತ ವಿದ್ಯಾರ್ಥಿಗಳು ತಮಗೆ ಸಿಕ್ಕ ವೇದಿಕೆಗಳಲ್ಲಿ ಧೈರ್ಯದಿಂದ ಭಾಗವಹಿಸುವ ಔದಾರ್ಯತೆ ಮೆರೆದು ಕೀರ್ತಿ ತರಬೇಕು ಎಂದು ಜಿಪಂ ಅಧ್ಯಕ್ಷೆ ಆದಿಮನಿ ವೀರಲಕ್ಷ್ಮಿಸಲಹೆ ನೀಡಿದರು.

    ನಗರದ ಯರಮರಸ್‌ನ ಆದರ್ಶ ವಿದ್ಯಾಲಯದ ಆವರಣದಲ್ಲಿ ಜಿಲ್ಲಾಡಳಿತ, ಜಿಪಂ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಕ್ರೀಡಾ ಮತ್ತು ಯುವ ಜನ ಸೇವಾ ಇಲಾಖೆ ಆಶ್ರಯದಲ್ಲಿ ಬುಧವಾರ ಪ್ರಾಥಮಿಕ, ಪ್ರೌಢಶಾಲೆ ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಂಡಿದ್ದ ಜಿಲ್ಲಾ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

    ಸೋಲು, ಗೆಲುವು ಬದಿಗಿಟ್ಟು ಮುಕ್ತವಾಗಿ ಸ್ಪರ್ಧೆಗಳಲ್ಲಿ ಭಾಗವಹಿಸುವ ಮನೋಭಾವ ವಿದ್ಯಾರ್ಥಿಗಳಲ್ಲಿ ಶಿಕ್ಷಕರು ಬೆಳೆಸಬೇಕು. ಶಿಕ್ಷಣದ ಜತೆ ಜತೆಗೆ ಕ್ರೀಡೆಗೆ ಆದ್ಯತೆ ನೀಡಿ ದೈಹಿಕ, ಮಾನಸಿಕ ಸದೃಢತೆಗೆ ಪ್ರಯತ್ನಿಸಬೇಕು ಎಂದರು.

    ಎಸ್ಪಿ ಡಾ. ಸಿ.ಬಿ.ವೇದಮೂರ್ತಿ, ಡಿಡಿಪಿಐ ಬಿ.ಎಚ್.ಗೋನಾಳ, ಯುವಜನ ಹಾಗೂ ಕ್ರೀಡಾ ಇಲಾಖೆ ಉಪನಿರ್ದೇಶಕ ರಾಜು ಬಾವಿಕಟ್ಟಿ, ಬಿಇಒ ಚಂದ್ರಶೇಖರ ದೊಡ್ಡಮನಿ, ಆದರ್ಶ ವಿದ್ಯಾಲಯದ ಕಾರ್ಯಾಧ್ಯಕ್ಷ ಹನುಮೇಶ, ಪ್ರೌಢಶಾಲಾ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಮೋಯಿನುಲ್ ಹಕ್ ಸೇರಿ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts