More

    ಸಾಹಿತ್ಯ ಸಮ್ಮೇಳನಕ್ಕೆ ಸಿದ್ಧತೆ, ಕಸಾಪ ಜಿಲ್ಲಾಧ್ಯಕ್ಷ ರಂಗಣ್ಣ ಪಾಟೀಲ್ ಅಳ್ಳುಂಡಿ ಮಾಹಿತಿ

    ರಾಯಚೂರು: ಜಿಲ್ಲೆಯ ಲಿಂಗಸುಗೂರಿನ ಸರ್ಕಾರಿ ಪದವಿಪೂರ್ವ ಕಾಲೇಜು ಆವರಣದಲ್ಲಿ ಡಿ.10 ಮತ್ತು 11ರಂದು ಆಯೋಜಿಸಿರುವ ಜಿಲ್ಲಾಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅಗತ್ಯ ಸಿದ್ಧತೆ ಮಾಡಲಾಗಿದ್ದು, ಸ್ವಾಗತ ಸಮಿತಿ ಸದಸ್ಯರು, ಪದಾಧಿಕಾರಿಗಳು ಸಭೆಗಳನ್ನು ನಡೆಸುತ್ತಿದ್ದಾರೆ ಎಂದು ಕಸಾಪ ಜಿಲ್ಲಾಧ್ಯಕ್ಷ ರಂಗಣ್ಣ ಪಾಟೀಲ್ ಅಳ್ಳುಂಡಿ ತಿಳಿಸಿದರು.

    ಸೋಮವಾರ ಸುದ್ದಿಗೋಷ್ಠಿಯಲ್ಲಿ ಸಮ್ಮೇಳನದ ಲಾಂಛನ ಬಿಡುಗಡೆಗೊಳಿಸಿ ಮಾತನಾಡಿದರು. ಲಿಂಗಸುಗೂರು ತಾಲೂಕಿನ ಐತಿಹಾಸ ಸ್ಥಳಗಳ ಚಿತ್ರಣವನ್ನು ಒಳಗೊಂಡಂತೆ ಲಾಂಛನ ಸಿದ್ಧಪಡಿಸಲಾಗಿದೆ. ಈಗಾಗಲೇ ಸಮ್ಮೇಳನದ ಸರ್ವಾಧ್ಯಕ್ಷರನ್ನಾಗಿ ಸಾಹಿತಿ ವೀರ ಹನುಮಾನರನ್ನು ಆಯ್ಕೆ ಮಾಡಲಾಗಿದೆ. ಸಮ್ಮೇಳನ ಸ್ವಾಗತ ಸಮಿತಿ ಅಧ್ಯಕ್ಷ ಶಾಸಕ ಡಿ.ಎಸ್.ಹೂಲಗೇರಿ, ಹಟ್ಟಿ ಚಿನ್ನದ ಗಣಿ ಅಧ್ಯಕ್ಷ ಮಾನಪ್ಪ ವಜ್ಜಲ್ ನೇತೃತ್ವದಲ್ಲಿ ಸಮ್ಮೇಳನ ಪೂರ್ವ ಸಿದ್ಧತೆಗಳನ್ನು ಮಾಡಲಾಗಿದೆ ಎಂದು ಹೇಳಿದರು.

    ಮಂಜುನಾಥ ಕೊಂಬಿನ್ ಮಾತನಾಡಿ, ಸಮ್ಮೇಳನದಲ್ಲಿ ಐದು ಗೋಷ್ಠಿ ಹಾಗೂ ಮೂರು ಕವಿಗೋಷ್ಠಿಗಳು ನಡೆಯಲಿದ್ದು, ವಿಶೇಷವಾಗಿ ಮಕ್ಕಳ ಕವಿಗೋಷ್ಠಿ ಏರ್ಪಡಿಸಲಾಗಿದೆ. ಗಜಲ್ ಕೃತಿ, ಕಥೆ, ಕವನ ಸಂಕಲನ ಬಿಡುಗಡೆ ಮಾಡಲಾಗುತ್ತಿದೆ ಎಂದು ತಿಳಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts