ಆರ್‌ಟಿಪಿಎಸ್ ಕಲ್ಲಿದ್ದಲು ಸ್ಟಾಕ್ ಯಾರ್ಡ್‌ನಲ್ಲಿ ಹೊಗೆ

ರಾಯಚೂರು: ರಾಯಚೂರು ಬೃಹತ್ ಶಾಖೋತ್ಪನ್ನ ವಿದ್ಯುತ್ ಕೇಂದ್ರದ ಕಲ್ಲಿದ್ದಲು ಸ್ಟಾಕ್ ಯಾರ್ಡ್‌ನಲ್ಲಿ ಮಂಗಳವಾರ ಅಲ್ಪ ಪ್ರಮಾಣದ ಬೆಂಕಿ ಕಾಣಿಸಿಕೊಂಡು ಹೊಗೆ ಆವರಿಸಿದ್ದು, ಸಿಬ್ಬಂದಿ ತಕ್ಷಣ ನೀರು ಸಿಂಪರಣೆ ಮಾಡಿ ಬೆಂಕಿ ಆರಿಸಿದ್ದರಿಂದ ಹೆಚ್ಚಿನ ಹಾನಿ ತಡೆದಿದ್ದಾರೆ.

ರಾಜ್ಯದಲ್ಲಿ ವಿದ್ಯುತ್ ಬೇಡಿಕೆ ಇಳಿಮುಖವಾದ ಕಾರಣ ಕೇಂದ್ರದ 8 ಘಟಕಗಳಲ್ಲಿ ಮೂರು ಘಟಕಗಳಲ್ಲಿ ಮಾತ್ರ ವಿದ್ಯುತ್ ಉತ್ಪಾದನೆಯಲ್ಲಿ ತೊಡಗಿವೆ. ಉಳಿದ ಘಟಕಗಳಿಗೆ ವಿಶ್ರಾಂತಿ ನೀಡಲಾಗಿದೆ. ಪ್ರಸ್ತುತ 3 ಘಟಕಗಳಿಂದ 489 ಮೆಗಾವಾಟ್ ವಿದ್ಯುತ್ ಉತ್ಪಾದಿಸಿ ರಾಜ್ಯ ಜಾಲಕ್ಕೆ ರವಾನಿಸಲಾಗುತ್ತಿದೆ.

ಹೀಗಾಗಿ ಸ್ಟಾಕ್ ಯಾರ್ಡ್‌ನಲ್ಲಿ 4.20 ಲಕ್ಷ ಮೆಟ್ರಿಕ್ ಟನ್ ಕಲ್ಲಿದ್ದಲು ದಾಸ್ತಾನು ಮಾಡಲಾಗಿದೆ. ಕಲ್ಲಿದ್ದಲನ್ನು ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಸಾಗಣೆ ಮಾಡುವ ಸಂದರ್ಭದಲ್ಲಿ ಸಣ್ಣ ಪ್ರಮಾಣದ ಬೆಂಕಿ, ಹೊಗೆ ಕಾಣಿಸಿಕೊಳ್ಳುವುದು ಸರ್ವೆ ಸಾಮಾನ್ಯವಾಗಿದೆ.

ಕಲ್ಲಿದ್ದಲು ಸ್ಟಾಕ್ ಯಾರ್ಡ್‌ನಲ್ಲಿ ಹೊಗೆ ಕಾಣಿಸಿಕೊಳ್ಳುವುದು ಸರ್ವೆ ಸಾಮಾನ್ಯ. ಹೆಚ್ಚಿನ ಕಲ್ಲಿದ್ದಲು ಸಂಗ್ರಹವಿರುವ ಕಾರಣ ಹೊಗೆ ಕಾಣಿಸಿಕೊಂಡಿದ್ದು, ನೀರು ಸಂಪರಣೆ ಮಾಡುವ ಮೂಲಕ ಬೆಂಕಿ ಕಾಣಿಸಿಕೊಳ್ಳದಂತೆ ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದಾರೆ.
– ಚಂದ್ರಶೇಖರ ಯಲಟ್ಟಿಆರ್‌ಟಿಪಿಎಸ್ ಕಾರ್ಯನಿರ್ವಾಹಕ ನಿರ್ದೇಶಕ

Leave a Reply

Your email address will not be published. Required fields are marked *