More

    ರಾಯಚೂರು ಜಿಲ್ಲೆಯಲ್ಲಿ ಸುಗಮವಾಗಿ ನಡೆದ ಸಿಇಟಿ ಪರೀಕ್ಷೆ

    ರಾಯಚೂರು: ಜಿಲ್ಲೆಯಲ್ಲಿನ 14 ಪರೀಕ್ಷಾ ಕೇಂದ್ರಗಳಲ್ಲಿ ಗುರುವಾರ ಜೀವಶಾಸ್ತ್ರ ವಿಷಯದ ಮೇಲೆ ಸಿಇಟಿ ಪರೀಕ್ಷೆ ಸುಗಮವಾಗಿ ಜರುಗಿದ್ದು, ನೋಂದಣಿ ಮಾಡಿಸಿಕೊಂಡಿದ್ದ 4,405 ವಿದ್ಯಾರ್ಥಿಗಳ ಪೈಕಿ 3,869 ಜನ ಪರೀಕ್ಷೆ ಬರೆದರು.

    ಕರೊನಾ ಹಿನ್ನೆಲೆಯಲ್ಲಿ ಪರೀಕ್ಷೆಗೆ ಹಾಜರಾಗುವ ಎಲ್ಲ ವಿದ್ಯಾರ್ಥಿಗಳಿಗೆ ಮಾಸ್ಕ್ ಧರಿಸುವುದನ್ನು ಕಡ್ಡಾಯ ಮಾಡಲಾಗಿತ್ತು. ವಿದ್ಯಾರ್ಥಿಗಳನ್ನು ಥರ್ಮಲ್ ಸ್ಕ್ರೀನಿಂಗ್‌ಗೆ ಒಳಪಡಿಸಿ ಪರೀಕ್ಷಾ ಕೇಂದ್ರದ ಒಳಗೆ ಬಿಡಲಾಯಿತು. ಸ್ಯಾನಿಟೈಜರ್ ವ್ಯವಸ್ಥೆಯನ್ನೂ ಮಾಡಲಾಗಿತ್ತು. ಪರೀಕ್ಷಾ ಕೇಂದ್ರದ ಒಳಗೆ ಪರಿಸ್ಪರ ಅಂತರ ಕಾಪಾಡಲಾಗಿತ್ತು. ಆದರೆ, ಪರೀಕ್ಷಾ ಕೇಂದ್ರದ ಹೊರಗೆ ವಿದ್ಯಾರ್ಥಿಗಳು ಗುಂಪುಗೂಡಿ ಚರ್ಚೆಯಲ್ಲಿ ತೊಡಗಿರುವುದು ಕಂಡು ಬಂತು. ಮಾಸ್ಕ್ ಧರಿಸದ ವಿದ್ಯಾರ್ಥಿಗಳಿಗೆ ಇಲಾಖೆಯೇ ವ್ಯವಸ್ಥೆ ಮಾಡಿತ್ತು.

    ಕೊಠಡಿ ಮೇಲ್ವಿಚಾರಕರಿಗೆ ಗ್ಲೌಸ್‌ಗಳನ್ನು ವಿತರಣೆ ಮಾಡಲಾಗಿದ್ದು, ಕರೊನಾ ಪಾಸಿಟಿವ್ ಹೊಂದಿರುವ ವಿದ್ಯಾರ್ಥಿಗಳಿಗೆ ಕ್ವಾರಂಟೈನ್ ಕೇರ್‌ಗಳಲ್ಲಿ ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಲಾಗಿತ್ತು. ಆದರೆ, ಪಾಸಿಟಿವ್ ಇರುವ ವಿದ್ಯಾರ್ಥಿಗಳು ಇಲ್ಲದ ಕಾರಣ ಕ್ವಾರಂಟೈನ್ ಕೇರ್‌ನಲ್ಲಿ ಪರೀಕ್ಷೆ ನಡೆಯಲಿಲ್ಲ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts